Chandra Babu Naidu: ರಾಜಕೀಯ ಅಲ್ಲೋಲ, ಕಲ್ಲೋಲ; ಮಾಜಿ ಸಿಎಂ ಬಂಧನ!
ವಿಶಾಖಪಟ್ಟಣಂ, ಸೆಪ್ಟೆಂಬರ್ 08: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ತೆಲುಗು ದೇಶಂ ಪಕ್ಷದ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು ಅವರನ್ನು ಶನಿವಾರ ಬೆಳ್ಳಂಬೆಳಗ್ಗೆ ಪೊಲೀಸರು ಬಂಧಿಸಿದ್ದಾರೆ.
ಹೌದು, ಆಂಧ್ರ ಪ್ರದೇಶ ಸ್ಕಿಲ್ ಡೆವಲಪ್‌ಮೆಂಟ್ ಕಾರ್ಪೋರೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದ್ದು, ಈ ಹಗರಣದಲ್ಲಿ 371 ಕೋಟಿ ರೂಪಾಯಿ ಅಕ್ರಮ ಮಾಡಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ಹಗರಣದ ಕುರಿತು ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಸಿಐಡಿಗೆ ವಹಿಸಿದ್ದರು. ಈ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಅವರು ಎ1 ಆರೋಪಿಯಾಗಿದ್ದು, ಇದೀಗ ಬಂಧಿಸಲಾಗಿದೆ.

ನಂದ್ಯಾಲ ವ್ಯಾಪ್ತಿಯ ಡಿಐಜಿ ರಘುರಾಮಿ ರೆಡ್ಡಿ ನೇತೃತ್ವದ ಪೊಲೀಸರು ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಚಂದ್ರಬಾಬು ನಾಯ್ಡು ಅವರಿದ್ದ ನಿವಾಸಕ್ಕೆ ದಾಳಿ ಮಾಡಿ ಬಂಧನ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲು ಪೊಲೀಸರು ಬಂದಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಆ ರಾತ್ರಿಯಲ್ಲೂ ಟಿಡಿಪಿ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಪ್ರತಿರೋಧ ವ್ಯಕ್ತಪಡಿಸಿದ್ದಾರೆ.
ಇನ್ನೂ ಚಂದ್ರಬಾಬು ನಾಯ್ಡು ಅವರ ವಿರುದ್ಧ 58 ಕೋಟಿ ಯೋಜನೆಯ ವೆಚ್ಚವನ್ನು 371 ಕೋಟಿ ರೂ.ಗೆ ಹೆಚ್ಚಿಸಿದ ಆರೋಪ ಕೇಳಿಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಐಪಿಸಿ ಸೆಕ್ಷನ್ 166, 167, 481, 420, 465, 468, 471, 409, 201, r/w 109, 34 ಮತ್ತು 37ರ ಅಡಿ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದೆ.












Click it and Unblock the Notifications