ಸಿಎಂ ಭಾವಚಿತ್ರದ ಬಾಕ್ಸ್‌ಗಳಲ್ಲಿದ್ದ ಲಕ್ಷಾಂತರ ಮೌಲ್ಯದ 5,472 ಸೀರೆ ಜಪ್ತಿ
ಆಂಧ್ರಪ್ರದೇಶ, ಮಾರ್ಚ್ 22: ಆಂಧ್ರಪ್ರದೇಶ ರಾಜ್ಯದ ಪಲ್ನಾಡು ಜಿಲ್ಲೆಯಲ್ಲಿ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಲೇಬಲ್ ಇದ್ದ ಸಾವಿರಾರು ಸೀರೆಗಳನ್ನು ಚುನಾವಣೆ ಆಯೋಗದ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದೆ. ಈ ಕುರಿತು ಪೋಲೀಸ್ ಮೂಲಗಳು ಮಾಹಿತಿ ನೀಡಿವೆ.
ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಲೇಬಲ್ ಹೊಂದಿರುವ 5,472 ಸೀರೆಗಳನ್ನು ಚುನಾವಣಾ ಆಯೋಗ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಆಯೋಜನೆಗೊಂಡು ಪೊಲೀಸರು ಸೇರಿದಂತೆ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಸಿಬ್ಬಂದಿ ತಂಡ ಪಲ್ನಾಡು ಜಿಲ್ಲೆಯಲ್ಲಿನ ಕೈಗಾರಿಕಾ ಪ್ರದೇಶದಲ್ಲಿನ ಗೋದಾಮಿನ ಮೇಲೆ ಸಂಜೆ 5.30ಕ್ಕೆ ದಾಳಿ ನಡೆಸಿದರು.

ಇಲ್ಲಿ ಸಂಗ್ರಹಿಸಿ ಇಡಲಾಗಿದ್ದ ಲಕ್ಷಾಂತರ ರೂಪಾಯಿಯ ಸಾವಿರಾರು ಸೀರೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ಕೊಟ್ಟಿದ್ದಾರೆ.
₹33.6 ಲಕ್ಷ ಮೌಲ್ಯದ ಸೀರೆಗಳು ವಶ
ಸುಳಿವಿನ ಮೇರೆಗೆ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಪೊಲೀಸರು ಕೈಗಾರಿಕಾ ಪ್ರದೇಶದಲ್ಲಿನ ಗೋದಾಮು (ಗೋದಾಮು) ಮೇಲೆ ದಾಳಿ ನಡೆಸಿದರು. ಅವರು ₹33.6 ಲಕ್ಷ ಮೌಲ್ಯದ YSRCP ಲೇಬಲ್ ಹೊಂದಿರುವ 5,472 ಸೀರೆಗಳನ್ನು ಜಪ್ತಿ ಮಾಡಿದರೆಂದು ಪಿಟಿಐ ವರದಿ ಮಾಡಿದೆ.
ಗೋದಾಮಿನಲ್ಲಿ 48 ಸೀರೆಗಳಿದ್ದ 114 ಬಾಕ್ಸ್‌ಗಳನ್ನು ಜಪ್ತಿ ಮಾಡಲಾಗಿದೆ. ಪ್ರತಿಯೊಂದು ಸೀರೆ ಪೆಟ್ಟಿಗೆಯ ಮೇಲೆ ವೈಎಸ್‌ಆರ್‌ಸಿಪಿ ಮುಖ್ಯಸ್ಥ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರ ಚಿತ್ರವಿದೆ ಎಂದು ಸ್ಕ್ವಾಡ್ ಸಿಬ್ಬಂದಿ ತಿಳಿಸಿದರು.

ಗುತ್ತಿಗೆ ಪಡೆದಿದ್ದ ಗೋದಾಮಿನಲ್ಲಿ ಸೀರೆ ಸಂಗ್ರಹ
ಪೆರುಮಲ್ಲ ಗೋಪಾಲ್ ಅವರ ಒಡೆತನದಲ್ಲಿರುವ ಈ ಗೋದಾಮನ್ನು ವೈಎಸ್‌ಆರ್‌ಸಿಪಿ ಮುಖಂಡ ಸತ್ತೇನಪಲ್ಲಿಯ ಬಾವಿಸೆಟ್ಟಿ ವೆಂಕಟ ಸುಬ್ರಮಣ್ಯಂ ಎಂಬವರಿಗೆ ಗುತ್ತಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಈ ಪ್ರಕರಣದಲ್ಲಿ ಪೊಲೀಸರು ಇನ್ನೂ ಬಂಧಿಸಿಲ್ಲ ಆದರೆ ಸುಬ್ರಮಣ್ಯಂ ಪರಾರಿಯಾಗಿದ್ದಾರೆ ಎಂದು ಹೇಳಿದ್ದಾರೆ. ಅವರು ಐಪಿಸಿ ಸೆಕ್ಷನ್ 188 ಮತ್ತು 171 (ಇ) ಅಡಿಯಲ್ಲಿ ಪ್ರಕರಣ ದಾಖಲಿಸುವ ಪ್ರಕ್ರಿಯೆಯಲ್ಲಿದ್ದಾರೆ.
₹176 ಕೋಟಿ ನಗದು ಜಪ್ತಿ
ಸೀರೆ ಹೊರತುಪಡಿಸಿ, ಆಂಧ್ರ ಪ್ರದೇಶದಲ್ಲಿ ಏಕಕಾಲದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಜನವರಿ 1 ರಿಂದ ಚುನಾವಣಾ ಆಯೋಗ ₹176 ಕೋಟಿ ಮೌಲ್ಯದ ನಗದು, ಬೆಲೆಬಾಳುವ ಲೋಹಗಳು, ಮಾದಕ ದ್ರವ್ಯ ಮತ್ತು ಇನ್ನಿತರ ವಸ್ತುಗಳನ್ನು ಆಯೋಗದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಆಂಧ್ರಪ್ರದೇಶದ ಮುಖ್ಯ ಚುನಾವಣಾಧಿಕಾರಿ ಮುಖೇಶ್ ಕುಮಾರ್ ಮೀನಾ ಗುರುವಾರ ಪ್ರಕಾಶಂ, ಪಲ್ನಾಡು ಮತ್ತು ನಂದ್ಯಾಲ್‌ನ ಪೊಲೀಸ್ ವರಿಷ್ಠಾಧಿಕಾರಿಗಳನ್ನು (ಎಸ್‌ಪಿ) ಕರೆಸಿಕೊಂಡು ತಮ್ಮ ಜಿಲ್ಲೆಗಳಲ್ಲಿ ಇತ್ತೀಚೆಗೆ ನಡೆದ ಹಿಂಸಾತ್ಮಕ ಘಟನೆಗಳ ಕುರಿತು ಮಾಹಿತಿ ನೀಡುವಂತೆ ಕೇಳಿದ್ದಾರೆ.
ಆಂಧ್ರಪ್ರದೇಶದ 175 ವಿಧಾನಸಭೆ ಮತ್ತು 25 ಲೋಕಸಭೆ ಸ್ಥಾನಗಳಿಗೆ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಮೇ 13 ರಂದು ನಿಗದಿ ಆಗಿದೆ. ಈ ಚುನಾವಣೆಗಳ ಫಲಿತಾಂಶ ಜೂನ್ 4 ರಂದು ಪ್ರಕಟಗೊಳ್ಳಲಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications