ಜಗನ್ V/S ಮೈತ್ರಿಕೂಟ: ಆಂಧ್ರದಲ್ಲಿ ಸೋಮವಾರ ಹೈ ವೋಲ್ಟೇಜ್ ಮತದಾನ!
ಅಮರಾವತಿ, ಮೇ 12: ಲೋಕಸಭೆ ಚುನಾವಣೆಯ 4ನೇ ಹಂತದ ಮತದಾನ ಸೋಮವಾರ ನಡೆಯಲಿದೆ. 10 ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳ 96 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ. ಆಂಧ್ರ ಪ್ರದೇಶದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗೆ ಒಟ್ಟಿಗೆ ಮತದಾನ ನಡೆಯುತ್ತಿದೆ.
ಸೋಮವಾರ ಬೆಳಗ್ಗೆ 7 ಗಂಟೆಗೆ ಲೋಕಸಭೆ ಚುನಾವಣೆಯ 4ನೇ ಹಂತದ ಮತದಾನ ಆರಂಭವಾಗಲಿದೆ. ಆಂಧ್ರ ಪ್ರದೇಶದ 25, ಬಿಹಾರ 5, ಜಮ್ಮು ಮತ್ತು ಕಾಶ್ಮೀರ 1, ಜಾರ್ಖಂಡ್ 4, ಮಧ್ಯ ಪ್ರದೇಶ 8, ಮಹಾರಾಷ್ಟ್ರ 11, ಒಡಿಶಾ 4, ತೆಲಂಗಾಣ 17, ಉತ್ತರ ಪ್ರದೇಶ 13 ಮತ್ತು ಪಶ್ಚಿಮ ಬಂಗಾಳದ 8 ಲೋಕಸಭಾ ಕ್ಷೇತ್ರಗಳಿಗೆ ಮತದಾನವಿದೆ.

ಆಂಧ್ರ ಪ್ರದೇಶದಲ್ಲಿ 25 ಲೋಕಸಭಾ ಕ್ಷೇತ್ರ ಮತ್ತು 175 ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟಿಗೆ ಮತದಾನ ನಡೆಯುತ್ತಿದೆ. ಸೋಮವಾರ ಆಂಧ್ರ ಪ್ರದೇಶ ಹೈ ವೋಲ್ಟೇಜ್ ಮತದಾನಕ್ಕೆ ಸಾಕ್ಷಿಯಾಗಲಿದ್ದು, ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಎನ್‌ಡಿಎ ಮೈತ್ರಿಕೂಟ, ಕಾಂಗ್ರೆಸ್‌ನಿಂದ ಪ್ರತಿಸ್ಪರ್ಧೆ ಎದುರಿಸುತ್ತಿದ್ದಾರೆ.
ಹೈವೋಲ್ಟೇಜ್ ಕದನ: ವೈಎಸ್ಆರ್‌ಪಿ ಪಕ್ಷದ ಮುಖ್ಯಸ್ಥ, ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ಧ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಮತ್ತು ನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಒಂದಾಗಿದ್ದಾರೆ. ಇವರು ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ನೀಡಿದ್ದು, ಚುನಾವಣೆ ತೀವ್ರ ಕುತೂಹಲವನ್ನು ಹುಟ್ಟುಹಾಕಿದೆ.
ಮತ್ತೊಂದು ಕಡೆ ಕಾಂಗ್ರೆಸ್ ಪಕ್ಷ ಆಂಧ್ರ ಪ್ರದೇಶದಲ್ಲಿ ಜಗನ್ ಮೋಹನ್ ರೆಡ್ಡಿಗೆ ಎದುರಾಳಿ. ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿಗೆ ಅಧ್ಯಕ್ಷೆ ಜಗನ್ ಸಹೋದರಿ ವೈ. ಎಸ್. ಶರ್ಮಿಳಾ. ಅವರು ಕಡಪ ಲೋಕಸಭಾ ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿದಿದ್ದಾರೆ. ಎನ್‌ಡಿಎ ಮೈತ್ರಿಕೂಟ, ಕಾಂಗ್ರೆಸ್ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸೋಲಿಸಲು ಪಣತೊಟ್ಟಿವೆ, ಅಬ್ಬರದ ಪ್ರಚಾರವನ್ನು ನಡೆಸಿವೆ.
ಆಂಧ್ರ ಪ್ರದೇಶ ಮತ್ತು ತೆಲಂಗಾಣ ವಿಭಜನೆ ಬಳಿಕ 2014ರಲ್ಲಿ ಆಂಧ್ರ ಪ್ರದೇಶ ಮೊದಲ ಚುನಾವಣೆ ಎದುರಿಸಿತು. ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು 175 ಕ್ಷೇತ್ರಗಳ ಪೈಕಿ 102ರಲ್ಲಿ ಗೆಲುವು ಸಾಧಿಸಿ ಅಧಿಕಾರ ಹಿಡಿದರು. 2019ರ ಚುನಾವಣೆಯಲ್ಲಿ ರಾಜಕೀಯ ಚಿತ್ರಣ ಸಂಪೂರ್ಣ ಬದಲಾಯಿತು.
ವೈಎಸ್ಆರ್‌ಪಿ ಪಕ್ಷದ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ವಿಧಾನಸಭೆ ಚುನಾವಣೆಯಲ್ಲಿ 175 ಸ್ಥಾನಗಳ ಪೈಕಿ 151ರಲ್ಲಿ ಗೆಲ್ಲುವ ಮೂಲಕ ಮುಖ್ಯಮಂತ್ರಿಯಾದರು. ಕಾಂಗ್ರೆಸ್ ಮತ್ತು ಬಿಜೆಪಿ ಚುನಾವಣಾ ಚಿತ್ರಣದಲ್ಲಿ ಪ್ರಭಾವ ಬೀರುವುದಿಲ್ಲ. ನೇರ ಪೈಪೋಟಿ ಏನಿದ್ದರೂ ವೈಎಸ್‌ಆರ್‌ಪಿ ಮತ್ತು ಟಿಡಿಪಿ ನಡುವೆ.
ಈ ನಡುವೆ ನಟ ಪವನ್ ಕಲ್ಯಾಣ್ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಜೊತೆ ಕೈ ಜೋಡಿಸಿ ಜಗನ್ ಸೋಲಿಸುತ್ತೇನೆ ಎಂದು ಪಣ ತೊಟ್ಟಿದ್ದಾರೆ. ಚಂದ್ರಬಾಬು ನಾಯ್ಡು ಮತ್ತು ಪವನ್ ಕಲ್ಯಾಣ್ ಎನ್‌ಡಿಎ ಮೈತ್ರಿಕೂಟ ಸೇರಿದ್ದಾರೆ. ಆದ್ದರಿಂದ ಬಿಜೆಪಿ ಸಹ ಜಗನ್‌ಗೆ ಎದುರಾಳಿಯಾಗಿದೆ.
2014ರ ಲೋಕಸಭೆ ಚುನಾವಣೆಯಲ್ಲಿ ಆಂಧ್ರ ಪ್ರದೇಶದಲ್ಲಿ ಬಿಜೆಪಿ 4 ಸ್ಥಾನ ಗೆದ್ದಿತ್ತು. 2019ರಲ್ಲಿ ನಾಲ್ಕು ಸ್ಥಾನಗಳನ್ನು ಕಳೆದುಕೊಂಡು ಸೋಲು ಕಂಡಿದೆ. ಆದ್ದರಿಂದ ಈ ಬಾರಿ ಟಿಡಿಪಿ, ಜನಸೇನಾ ಜೊತೆ ಸೀಟು ಹಂಚಿಕೆ ಮಾಡಿಕೊಂಡು ಲೋಕಸಭೆ ಚುನಾವಣೆಯನ್ನು ಎದುರಿಸುತ್ತಿದೆ.
ಆಂಧ್ರ ಪ್ರದೇಶದ 25 ಲೋಕಸಭಾ ಕ್ಷೇತ್ರಗಳಲ್ಲಿ 454 ಅಭ್ಯರ್ಥಿಗಳು ಮತ್ತು 175 ವಿಧಾನಸಭಾ ಕ್ಷೇತ್ರದಲ್ಲಿ 2,387 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 4.09 ಕೋಟಿ ಮತದಾರರು ಸೋಮವಾರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ತಮ್ಮ ಹಕ್ಕು ಚಲಾವಣೆ ಮಾಡಲಿದ್ದಾರೆ.
-
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು -
"ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ, ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ": ಆರ್ ಅಶೋಕ್ -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Assam Assembly Election 2026: ಅಸ್ಸಾಂ ವಿಧಾನಸಭಾ ಚುನಾವಣೆಯ ಮತದಾನ, ಮತ ಎಣಿಕೆ ದಿನಾಂಕಗಳ ವಿವರ -
ಮುಟ್ಟಿನ ರಜೆ ಮಹಿಳೆಯರ ಹಕ್ಕು: ಸುಪ್ರೀಂ ಕೋರ್ಟ್ ನಿಲುವನ್ನು ತೀವ್ರವಾಗಿ ಖಂಡಿಸಿದ CPI -
Kerala: ಕೇರಳಂ ವಿಧಾನಸಭೆ ಚುನಾವಣೆ 2026: ಎಲ್ಡಿಎಫ್–ಯುಡಿಎಫ್ ನಡುವೆ ಪೈಪೋಟಿ, ಹೇಗಿದೆ ರಾಜಕೀಯ ಕಣ -
ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿದ ಸಿಎಂ ಸಿದ್ಧರಾಮಯ್ಯ -
ಒಡಿಶಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪ -
Tamil Nadu Assembly Election: ತಮಿಳುನಾಡು ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಏಪ್ರಿಲ್ 23ಕ್ಕೆ ಮತದಾನ, ಬಲಾಬಲ ಹೇಗಿದೆ? -
Kerala Assembly Election 2026: ಕೇರಳಂ ವಿಧಾನಸಭೆ ಚುನಾವಣೆ 2026: ಒಂದೇ ಹಂತದಲ್ಲಿ 140 ಸ್ಥಾನಗಳಿಗೆ ಚುನಾವಣೆ -
Puducherry Election 2026: ವಿಧಾನಸಭಾ ಚುನಾವಣೆಗೆ ಸಜ್ಜಾದ ಪುದುಚೇರಿ ರಾಜಕೀಯ ಅಖಾಡ: ಏಪ್ರಿಲ್ 9ಕ್ಕೆ ಮತದಾನ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart










Click it and Unblock the Notifications