Breaking; ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಗ್ರಾಚ್ಯುಟಿಗೆ ಅರ್ಹರು
ನವದೆಹಲಿ, ಏಪ್ರಿಲ್ 26; ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಗ್ರಾಚ್ಯುಟಿ ಸೌಲಭ್ಯ ಪಡೆಯಲು ಅರ್ಹರು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. 1972ರ ಗ್ರಾಚ್ಯುಟಿ ಪಾವತಿ ಕಾಯ್ದೆಯಡಿಯಲ್ಲಿ ಸೌಲಭ್ಯ ಪಡೆಯಲು ಅರ್ಹರು.
ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕ್ ಮತ್ತು ಅಜಯ್ ರಾಸ್ತೋಗಿ ಪೀಠ ಈ ಕುರಿತು ತೀರ್ಪು ನೀಡಿದೆ. ಅಂಗನವಾಡಿ ಕೇಂದ್ರಗಳಿಗೆ ಗ್ರಾಚ್ಯುಟಿ ಪಾವತಿ ಕಾಯ್ದೆ ಅನ್ವಯವಾಗುತ್ತದೆ ಎಂದು ಕೋರ್ಟ್ ಹೇಳಿದೆ.
ತಮ್ಮ ಕೆಲಸದ ಸ್ವರೂಪಕ್ಕೆ ಅನುಗುಣವಾಗಿ ಧ್ವನಿ ಇಲ್ಲದವರಿಗೆ ಉತ್ತಮ ಸೇವಾ ಸ್ಥಿತಿ ಒದಗಿಸಲು ವಿಧಾನಗಳನ್ನು ಕಂಡುಕೊಳ್ಳಬೇಕಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಇದನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ಕೋರ್ಟ್ ತಿಳಿಸಿದೆ.

ನ್ಯಾಯಮೂರ್ತಿ ಅಭಯ್ ಎಸ್ ಓಕ್ ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರಸ್ತುತ ಕೇಂದ್ರ ಸರ್ಕಾರದ ವಿಮಾ ಯೋಜನೆಯಡಿ ಅತ್ಯಂತ ಕಡಿಮೆ ಸಂಭಾವನೆ ಪಡೆಯುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಅಂಗನವಾಡಿ ಕೇಂದ್ರಗಳಿಗೆ ಗ್ರಾಚ್ಯುಟಿ ಪಾವತಿ ಕಾಯ್ದೆ ಅನ್ವಯವಾಗುವುದಿಲ್ಲ ಎಂದು ಗುಜರಾತ್ ಹೈಕೋರ್ಟ್ ವಿಭಾಗೀಯ ಪೀಠ ನೀಡಿದ್ದ ತೀರ್ಪನ್ನು ಸಹ ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.
ಅಂಗನವಾಡಿ ಕಾರ್ಯಕರ್ತೆ & ಸಹಾಯಕಿಯರು ಗ್ರಾಚ್ಯುಟಿ ಪಡೆಯಲು ಅರ್ಹರು ಎಂದು ಕಳಹಂತದ ನ್ಯಾಯಾಲಯ ತೀರ್ಪು ನೀಡಿತ್ತು. ಬಳಿಕ ಹೈಕೋರ್ಟ್ ಈ ತೀರ್ಪು ರದ್ದುಗೊಳಿಸಿತ್ತು.












Click it and Unblock the Notifications