ಜರ್ಮನಿ ಚಾನ್ಸಲರ್ ಜತೆ ನವರಾತ್ರಿಗೆ ಬಂದ ದುರ್ಗಾಮಾತೆ
ನವದೆಹಲಿ, ಅಕ್ಟೋಬರ್. 06: ಮಹಿಷಾಸುರ ಮರ್ದಿನಿ ಅವತಾರದಲ್ಲಿರುವ ದುರ್ಗೆಯ ಪುರಾತನ ವಿಗ್ರಹವನ್ನು ಜರ್ಮನಿ ಚಾನ್ಸಲರ್ ಏಂಜೆಲಾ ಮರ್ಕೆಲ್, ಪ್ರಧಾನಿ ನರೇಂದ್ರ ಮೋದಿಗೆ ಹಸ್ತಾಂತರ ಮಾಡಿದ್ದಾರೆ.
ಜಮ್ಮು-ಕಾಶ್ಮೀರದ ಪುಲುವಾಮಾದ ದೇವಾಲಯವೊಂದರಲ್ಲಿದ್ದ 10ನೇ ಶತಮಾನದ ಮೂರ್ತಿ ಸುಮಾರು ಎರಡು ದಶಕಗಳ ಹಿಂದೆ ಕಾಣೆಯಾಗಿತ್ತು. ಜರ್ಮನಿಯ ಮ್ಯೂಸಿಯಂ ಒಂದರಲ್ಲಿ ವಿಗ್ರಹ ಇರುವ ಬಗ್ಗೆ ಪುರಾತತ್ವ ಇಲಾಖೆಗೆ ಮಾಹಿತಿ ಲಭಿಸಿತ್ತು. ವಿಗ್ರಹ ಹಿಂತಿರುಗಿಸುವಂತೆ ಭಾರತೀಯ ಪುರಾತತ್ವ ಇಲಾಖೆ ಜರ್ಮನಿ ಸರ್ಕಾರಕ್ಕೆ ಮನವಿ ಮಾಡಿತ್ತು. ಇದಕ್ಕೆ ಸ್ಪಂದಿಸಿರುವ ಜರ್ಮನಿ ವಿಗ್ರಹವನ್ನು ಭಾರತಕ್ಕೆ ವಾಪಸ್ ಮಾಡಿದೆ.[ಮೋದಿ, ಏಂಜೆಲಾ ಮರ್ಕೆಲ್ ಬೆಂಗಳೂರು ಭೇಟಿ, ಕ್ಷಣ ಕ್ಷಣದ ಮಾಹಿತಿ]

ಸುಭಾಷ್ ಕಪೂರ್ ಕದ್ದ ವಿಗ್ರಹ
ಕಲೆ ಮತ್ತು ಇತಿಹಾಸಕ್ಕೆ ಸಂಬಂಧಿಸಿದ ವಸ್ತುಗಳ ಅಪಹರಣಕಾರ ಸುಭಾಷ್ ಕಪೂರ್ ಭಾರತದಿಂದ ವಿಗ್ರಹಗಳನ್ನು ಕದ್ದು ಯುಎಸ್ ಗೆ, ಜರ್ಮನಿ, ಆಸ್ಟ್ರೇಲಿಯಾ ಸೇರಿದಂತೆ ವಿದೇಶಗಳಿಗೆ ಸಾಗಿಸುತ್ತಿದ್ದ. ಈತ ಅಪಹರಣ ಮಾಡಿದ್ದ ಹರಳುಗಳು ಯುಎಸ್ ನಲ್ಲೂ ಹಿಂದೆ ಪತ್ತೆಯಾಗಿತ್ತು. ಅಲ್ಲದೇ ಆಸ್ಟ್ರೇಲಿಯಾದ ಮ್ಯೂಸಿಯಂ ಒಂದಕ್ಕೆ 115ಕ್ಕೂ ಹೆಚ್ಚು ವಿಗ್ರಹಗಳನ್ನು ಈತ ನೀಡಿದ್ದಾನೆ ಎಂಬ ಮಾಹಿತಿಯೂ ಇದೆ.[ಚಿನ್ನ ಕಳ್ಳ ಸಾಗಣೆಯ ಹೊಸ ಮಾರ್ಗಗಳು ಯಾವವು!]
ತಮಿಳುನಾಡು ಪೊಲೀಸರು ಕಪೂರ್ ನನ್ನು ಬಂಧಿಸಿದಾಗ ಅವನು ಅಮೆರಿಕದ ಮ್ಯಾನ್ ಹಟನ್‌ನಲ್ಲಿ ಆರ್ಟ್ ಗ್ಯಾಲರಿಯೊಂದನ್ನು ನಡೆಸುತ್ತಿರುವುದು ಪತ್ತೆಯಾಗಿತ್ತು. ಇದರ ಜಾಡು ಹಿಡಿದ ಪೊಲೀಸರು ಮಹಿಷಾಸುರ ಮರ್ದಿನಿಯ ವಿಗ್ರಹ ಜರ್ಮನಿಯಲ್ಲಿರುವುದನ್ನು ಪತ್ತೆ ಹಚ್ಚಿದರು. ಜರ್ಮನಿ, ಸಿಂಗಾಪುರ ಸೇರಿದಂತೆ ಹಲವು ದೇಶಗಳಲ್ಲಿ ಭಾರತದ ಇನ್ನೂ ಹಲವು ಇಂತಹ ವಿಗ್ರಹಗಳಿದ್ದು ಅವುಗಳನ್ನೆಲ್ಲಾ ವಾಪಸು ತರುವ ಯತ್ನವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications