ಕಿರುಕುಳ ಪ್ರಕರಣದಲ್ಲಿ ಬಂಧನ ಭೀತಿ; ಸುಪ್ರೀಂ ಕದ ತಟ್ಟಿದ ಯುವ ಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀನಿವಾಸ್
ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ದಾಖಲಾದ ಎಫ್‍ಐಆರ್ ರದ್ದುಗೊಳಿಸುವಂತೆ ರಾಷ್ಟ್ರೀಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಶ್ರೀನಿವಾಸ್ ಬಿವಿ ಸೋಮವಾರ ಸುಪ್ರೀಂ ಮೊರೆ ಹೋಗಿದ್ದಾರೆ.
ಕಳೆದ ವಾರ ಗುವಾಹಾಟಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ಹಾಗೂ ಎಫ್‍ಐಆರ್ ರದ್ದುಗೊಳಿಸಲು ನಿರಾಕರಿಸಿದ ನಂತರ ಶ್ರೀನಿವಾಸ್ ಬಿವಿ ಬಂಧನದ ಭೀತಿ ಎದುರಿಸುತ್ತಿದ್ದಾರೆ.

ಅರ್ಜಿದಾರರ ಪರ ಹಿರಿಯ ವಕೀಲ ದೇವದತ್ತ ಕಾಮತ್ ಅವರು ತುರ್ತು ವಿಚಾರಣೆ ಕೋರಿ ಸಿಜೆಐ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ. ಪರ್ದಿವಾಲಾ ಅವರ ಪೀಠದ ಮುಂದೆ ಈ ಮನವಿಯನ್ನು ಪ್ರಸ್ತಾಪಿಸಿದರು. ಈ ಪೀಠವು ಮುಂದಿನ ವಾರ ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಛತ್ತೀಸ್‍ಗಢದಲ್ಲಿ ನಡೆದಿದೆ ಎನ್ನಲಾದ ಪ್ರಕರಣವನ್ನು ತನಿಖೆ ಮಾಡಲು ಅಥವಾ ಎಫ್‍ಐಆರ್ ದಾಖಲಿಸಲು ಅಸ್ಸಾಂ ಪೊಲೀಸರಿಗೆ ಯಾವುದೇ ಅಧಿಕಾರವಿಲ್ಲ ಎಂದು ಅರ್ಜಿದಾರರ ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಶ್ರೀನಿವಾಸ್ ಬಿವಿ ನಿರಂತರವಾಗಿ ತನಗೆ ಕಿರುಕುಳ ನೀಡುತ್ತಿದ್ದರು. ಅಶ್ಲೀಲ ಮಾತುಗಳಿಂದ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಅಸ್ಸಾಂ ಯುವ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಗಿತಾ ದತ್ತಾ ಅವರು ಪೊಲೀಸ್ ದೂರು ನೀಡಿದ್ದರು. ಅಲ್ಲದೆ ಅವರ ವರ್ತನೆ ಬಗ್ಗೆ ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ಸೇರಿದಂತೆ ಉನ್ನತ ನಾಯಕರಿಗೆ ತಿಳಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಂಗಿತಾ ದತ್ತಾ ಆರೋಪಿಸಿದ್ದರು.

ಮಹಿಳೆ ದೂರಿನ ಮೇರೆಗೆ ಶ್ರೀನಿವಾಸ್ ಬಿವಿ ವಿರುದ್ಧ ಐಪಿಸಿ ಸೆಕ್ಷನ್ 352 (ಆಕ್ರಮಣ ಅಥವಾ ಕ್ರಿಮಿನಲ್ ಬಲ ಪ್ರಯೋಗ), 354 (ಹಲ್ಲೆ), ಮತ್ತು 354ಎ (ಲೈಂಗಿಕ ಕಿರುಕುಳ) ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ.
ಅನಂತರ ಬಿ.ವಿ. ಶ್ರೀನಿವಾಸ್ ಅವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಬೆಂಗಳೂರಿನ 72ನೇ ಸಿಸಿಎಚ್ ಕೋರ್ಟ್ ಅರ್ಜಿಯನ್ನು ವಿಚಾರಣೆ ನಡೆಸಿ, ಬಿ.ವಿ. ಶ್ರೀನಿವಾಸ್ ಅವರ ಮನವಿಯನ್ನು ತಿರಸ್ಕರಿಸಿ, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾ ಮಾಡಿದೆ.
ಶ್ರೀನಿವಾಸ್ ಬಿವಿ ಅವರಿಗೆ ಪೊಲೀಸ್ ಅಧಿಕಾರಿಗಳ ಮುಂದೆ ಖುದ್ದಾಗಿ ಹಾಜರಾಗುವಂತೆ ದಿಸ್ಪುರ್ ಪೊಲೀಸರು ನೋಟಿಸ್ ನೀಡಿದ್ದರು. ಅಲ್ಲದೆ ಬೆಂಗಳೂರಿನ ನಿವಾಸದ ಬಾಗಿಲಿಗೆ ನೋಟಿಸ್ ಅಂಟಿಸಿ ಹೋಗಿದ್ದರು.
ಈ ವೇಳೆ ರಾಜಕೀಯ ಕಾರಣಗಳಿಗಾಗಿ ತಮ್ಮ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಶ್ರೀನಿವಾಸ್ ಬಿವಿ ಆರೋಪಿಸಿದ್ದರು. ಅಲ್ಲದೆ ನಿರೀಕ್ಷಣಾ ಜಾಮೀನು ಪಡೆಯಲು ಹಾಗೂ ವಿಚಾರಣೆಗೆ ತಡೆ ನೀಡುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಆದರೆ ಹೈಕೋರ್ಟ್ ಎಫ್‍ಐಆರ್ ರಾಜಕೀಯ ಪ್ರೇರಿತವಾಗಿ ಕಂಡು ಬರುತ್ತಿಲ್ಲ ಎಂದು ಅವರ ಮನವಿಯನ್ನು ತಿರಸ್ಕರಿಸಿತ್ತು. ದಿಸ್ಪುರ್ ಪೊಲೀಸರ ಮುಂದೆ ಹಾಜರಾಗಲು ಮೇ 12 ರವರೆಗೆ ಸಮಯವನ್ನು ವಿಸ್ತರಿಸಲಾಗಿದೆ. ಗುವಾಹಾಟಿಗೆ ತೆರಳಿದರೆ ಪೊಲೀಸರು ಬಂಧಿಸುವ ಆತಂಕವಿದೆ ಎಂದು ಶ್ರೀನಿವಾಸ್ ಬಿವಿ ಹೇಳಿದ್ದಾರೆ.
ಕಿರುಕುಳ ಆರೋಪ ಮಾಡಿದ್ದಕ್ಕೆ ಕಾಂಗ್ರೆಸ್‌ನಿಂದ ವಜಾ
ಯುವ ಕಾಂಗ್ರೆಸ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಬಿವಿ ಅವರ ವಿರುದ್ಧ ಮಾನಸಿಕ ಕಿರುಕುಳ ಮತ್ತು ಲಿಂಗದ ಆಧಾರದ ಮೇಲೆ ತಾರತಮ್ಯ ಆರೋಪ ಮಾಡಿದ ಬಳಿಕ ಅಸ್ಸಾಂ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅಂಕಿತಾ ದತ್ತಾ ಅವರನ್ನು 'ಪಕ್ಷ ವಿರೋಧಿ ಚಟುವಟಿಕೆ'ಗಾಗಿ ಆರು ವರ್ಷಗಳ ಕಾಲ ಕಾಂಗ್ರೆಸ್‌ನಿಂದ ವಜಾಗೊಳಿಸಲಾಗಿದೆ.
ಯಾವುದೇ ಮುನ್ನೆಚ್ಚರಿಕೆ ನೀಡದೆ ಅಸ್ಸಾಂ ಯೂತ್ ಕಾಂಗ್ರೆಸ್ ಮುಖ್ಯಸ್ಥೆ ಸ್ಥಾನದಿಂದ ನನ್ನನ್ನು ತೆಗೆದುಹಾಕಲಾಗಿದೆ ಎಂದು ಅಂಗಿತಾ ದತ್ತಾ ಹೇಳಿದ್ದರು. ಬಿ.ವಿ. ಶ್ರೀನಿವಾಸ್ ಅವರು ತಮಗೆ 'ಸೆಕ್ಸಿಸ್ಟ್ ಮತ್ತು ಕೋಮುವಾದಿ' ಮತ್ತು ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದ್ದರು.
ಅಂಗಿತಾ ದತ್ತಾ ಅವರು ಅಸ್ಸಾಂನಲ್ಲಿ ತರುಣ್ ಗೊಗೊಯ್ ಅವರ ಸರ್ಕಾರದಲ್ಲಿ ಸಚಿವರಾಗಿದ್ದ ಮತ್ತು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥರಾಗಿದ್ದ ಅಂಜನ್ ದತ್ತಾ ಅವರ ಪುತ್ರಿಯಾಗಿದ್ದಾರೆ.

Click it and Unblock the Notifications