Cow Hug Day: ಫೆಬ್ರವರಿ 14 ರಂದು ಎಲ್ಲರೂ ಹಸುವನ್ನು ಅಪ್ಪಿಕೊಳ್ಳಬೇಕು.. ಕೇಂದ್ರ ಪ್ರಾಣಿ ಕಲ್ಯಾಣ ಮಂಡಳಿ ಮನವಿ.. ಏಕೆ?

ಯೋಗ ದಿನದಂತೆಯೇ ಫೆಬ್ರವರಿ 14 ರಂದು 'ಹಸು ಅಪ್ಪುಗೆಯ ದಿನ' ಆಚರಿಸಲು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ ಜನರಿಗೆ ಕರೆ ನೀಡಿದೆ.

ಇತ್ತೀಚೆಗೆ ಜಾನುವಾರಗಳ ಮೇಲಿನ ಪ್ರೀತಿ ನಗರ ಪ್ರದೇಶದಲ್ಲಿ ಕಡಿಮೆಯಾಗುತ್ತಿದೆ. ಹೀಗಾಗಿ ಕೇಂದ್ರ ಪ್ರಾಣಿ ಕಲ್ಯಾಣ ಮಂಡಳಿಯು ಫೆಬ್ರವರಿ 14 ರಂದು 'ಕೌ ಹಗ್ ಡೇ' ಆಚರಿಸಲು ಜನರಿಗೆ ಕರೆ ನೀಡಿದೆ. ಇದು ಭಾರತೀಯ ಸಂಸ್ಕೃತಿ ಮತ್ತು ಗ್ರಾಮೀಣ ಆರ್ಥಿಕತೆಯಲ್ಲಿ ಹಸುಗಳ ಮಹತ್ವವನ್ನು ಎತ್ತಿ ತೋರಿಸುತ್ತದೆ ಎಂದು ಮಂಡಳಿ ಹೇಳುತ್ತದೆ.

ಯೋಗ ದಿನದಂತೆಯೇ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯವು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ಸಹಯೋಗದೊಂದಿಗೆ ಭಾರತೀಯ ಸಂಸ್ಕೃತಿಯನ್ನು ಉತ್ತೇಜಿಸಲು 'ಹಸು ಅಪ್ಪುಗೆಯ ದಿನ' ಆಚರಿಸುವ ಉಪಕ್ರಮವನ್ನು ಕೈಗೊಂಡಿದೆ.

"ಎಲ್ಲಾ ಗೋ ಪ್ರೇಮಿಗಳು ಫೆಬ್ರವರಿ 14 ದಂದು ಹಸು ಅಪ್ಪುಗೆಯ ದಿನವನ್ನಾಗಿ ಆಚರಿಸಬಹುದು. ಇದರಿಂದ ತಾಯಿ ಹಸುವಿನ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಜೀವನವನ್ನು ಸಂತೋಷದಿಂದ ಮತ್ತು ಸಕಾರಾತ್ಮಕ ಶಕ್ತಿಯಿಂದ ನಡೆಸಬಹುದು" ಎಂದು ಪ್ರಾಣಿ ಕಲ್ಯಾಣ ಮಂಡಳಿಯ ಸೂಚನೆಯಲ್ಲಿ ತಿಳಿಸಲಾಗಿದೆ.

ಪಾಶ್ಚಿಮಾತ್ಯ ಸಂಸ್ಕೃತಿಯ ಭಾರೀ ಪ್ರಭಾವದಿಂದ ವೈದಿಕ ಸಂಪ್ರದಾಯಗಳು ಬಹುತೇಕ ಅಳಿವಿನ ಅಂಚಿನಲ್ಲಿವೆ ಎಂದು ಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ, ದೇಶದ ಪರಂಪರೆಯನ್ನು ಸಂರಕ್ಷಿಸಲು ಮತ್ತು ಉತ್ತೇಜಿಸಲು ಹಸು ಅಪ್ಪುಗೆಯ ದಿನವನ್ನು ಆಚರಿಸಲು ಮಂಡಳಿಯು ನಾಗರಿಕರಲ್ಲಿ ಮನವಿ ಮಾಡಿದೆ.

Animal Welfare Board of India wants people to celebrate Cow Hug Day on Valentines day

ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ಕಾನೂನು ಸಲಹೆಗಾರ ಬಿಕ್ರಮ್ ಚಂದ್ರವಂಶಿ ಮಾದ್ಯಮದೊಂದಿಗೆ ಮಾತನಾಡಿ, ಕೌ ಹಗ್ ಡೇ ಹಿಂದಿನ ಧ್ಯೇಯವಾಕ್ಯವು ಹಸುಗಳು ಮತ್ತು ಭಾರತೀಯ ಸಂಸ್ಕೃತಿಯ ಬಗ್ಗೆ ಸಹಾನುಭೂತಿ ತೋರಿಸಲು ಜನರನ್ನು ಉತ್ತೇಜಿಸುವುದಾಗಿದೆ. ಜೊತೆಗೆ ಗೋವುಗಳ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವದಿಂದ ನಿಧಾನವಾಗಿ ತಮ್ಮ ಸಂಪ್ರದಾಯಗಳಿಂದ ದೂರ ಸರಿಯುತ್ತಿರುವವರನ್ನು ಮರಳಿ ಕರೆತರುವುದು ಇದರ ಉದ್ದೇಶವಾಗಿದೆ ಎಂದರು.

ಉತ್ತರ ಪ್ರದೇಶದಲ್ಲಿ, ಗೌತಮ್ ಬುಧ್ ನಗರ್ ಪೊಲೀಸರು ಸಿಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ನೋಯ್ಡಾ ಮತ್ತು ಗ್ರೇಟರ್ ನೋಯ್ಡಾ ಪ್ರದೇಶಗಳಲ್ಲಿ ಫೆಬ್ರವರಿ 4 ರಿಂದ ಫೆಬ್ರವರಿ 28 ರವರೆಗೆ ಪ್ರೇಮಿಗಳ ದಿನ ಮತ್ತು ಶಿವರಾತ್ರಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಬಂಧಗಳನ್ನು ವಿಧಿಸಿದ್ದಾರೆ ಎಂದು ಟೈಮ್ಸ್ ನೌ ವರದಿ ಮಾಡಿದೆ. ಸಮಾಜಘಾತುಕರಿಂದ ಶಾಂತಿ ಕದಡುವ ಸಾಧ್ಯತೆಗಳನ್ನು ತಡೆಯಲು ಈ ನಿರ್ಧಾರ ಕೈಗೊಳ್ಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+