ಮೋದಿ ಸರ್ಕಾರ ಜನರ ದಿಕ್ಕು ತಪ್ಪಿಸುತ್ತಿದೆ: ಅಣ್ಣಾ ಹಜಾರೆ

ನವದೆಹಲಿ, ಮಾ. 23: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರ ರೈತರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಮೋದಿ ಆಕಾಶವಾಣಿಯ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಭೂ ಸ್ವಾಧೀನ ಕಾಯ್ದೆ ರೈತ ವಿರೋಧಿಯಲ್ಲ. ಕಾಂಗ್ರೆಸ್ ಜನರಿಗೆ ಅರ್ಧ ಮಾಹಿತಿ ನೀಡುತ್ತಿದೆ ಎಂದು ಆರೋಪಿಸಿದ್ದರು.[ಪ್ರತಿಪಕ್ಷ ನೆರವಿಲ್ಲದೆ ಭೂ ಸ್ವಾಧೀನ ಕಾಯ್ದೆ ಜಾರಿ ಕಷ್ಟ!]

anna hazare

ಆದರೆ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಣ್ಣಾ ಹಜಾರೆ, ಭೂ ಸ್ವಾಧೀನ ಕಾಯ್ದೆ ಕುರಿತು ಜನರಿಗೆ ನಾವು ಸರಿಯಾದ ಮಾಹಿತಿ ನೀಡಲಿದ್ದೇವೆ. ನಮ್ಮ ಹೋರಾಟದಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರು ಭಾಗವಹಿಸಬಹುದು. ಜನಪರ ಹೋರಾಟ ನಿರಂತರವಾಗಿರುತ್ತದೆ ಎಂದು ತಿಳಿಸಿದ್ದಾರೆ.[ಕೆಲವರಿಗೆ ಜೈಲಿಗೆ ಹೋಗುವುದು ಫ್ಯಾಷನ್‌: ಅಣ್ಣಾ ಹಜಾರೆ]

ಭೂ ಸ್ವಾಧೀನ ಕಾಯ್ದೆ ಕುರಿತಾಗಿ ಅನೇಕ ತಿದ್ದುಪಡಿಗಳು ಅಗತ್ಯವಿದೆ. ಕೇಂದ್ರ ಸರ್ಕಾರ ಇದರೊಳಗಿರುವ ರೈತ ವಿರೋಧಿ ನೀತಿಗಳನ್ನು ಕೂಡಲೇ ಕೈ ಬಿಡಬೇಕು ಎಂದು ಆಗ್ರಹಿಸಿದ್ದಾರೆ. ಸರ್ಕಾರ ಕಾರ್ಪೋರೆಟ್ ಉದ್ಯಮಿಗಳ ಪರವಾಗಿ ನಿಲ್ಲುವಂತೆ ತೋರುತ್ತಿದ್ದು ಅದಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+