ಈ ರಾಜ್ಯಗಳಲ್ಲಿ ಭಾರಿ ಹಿಮಪಾತ, ಮಳೆ, ಕೊರೆಯುವ ಚಳಿ ಹೆಚ್ಚಳ ಸಾಧ್ಯತೆ
ನವದೆಹಲಿ, ಜನವರಿ 24: ಭಾರತದ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ವಾಯುವ್ಯ ಭಾರತದಲ್ಲಿ ಜನವರಿ 24ರಿಂದ ಹಿಮಪಾತ, ಭಾರಿ ಮಳೆಯಿಂದಾಗಿ ಚಳಿಯ ಪ್ರಮಾಣ ವಿಪರೀತವಾಗಲಿದೆ ಎಂದು ಹೇಳಲಾಗಿದೆ.
ಜನವರಿ 24 ಹಾಗೂ 25ರಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಾಫರಾಬಾದ್, ಹಿಮಾಚಲಪ್ರದೇಶ ಮತ್ತು ಉತ್ತರಾಖಂಡದಲ್ಲಿ ಲಘು ಹಾಗೂ ಚದುರಿದ ಮಳೆ ಮತ್ತು ಹಿಮಪಾತವಾಗುವ ಮುನ್ಸೂಚನೆ ನೀಡಲಾಗಿದೆ.
ಪಂಜಾಬ್, ಹರ್ಯಾಣ, ಪಶ್ಚಿಮ ಉತ್ತರ ಪ್ರದೇಶ, ಪೂರ್ವ ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಜನವರಿ 24ರಂದು ಬಿಹಾರ, ಜಾರ್ಖಂಡ್, ಉತ್ತರ ಒಡಿಶಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಹವಾಮಾನ ಇಲಾಖೆಯು ಮುಂದಿನ ಎರಡು ದಿನಗಳಲ್ಲಿ ವಾಯುವ್ಯ ಭಾರತ ಮತ್ತು ಮಧ್ಯ ಭಾರತದ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಕುಸಿಯಲಿದೆ ಎಂದು ಹೇಳಲಾಗಿದೆ.
ಮುಂದಿನ ಮೂರು ದಿನ ಗುಜರಾತ್, ಮಹಾರಾಷ್ಟ್ರದಲ್ಲಿ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್‌ನಷ್ಟು ಕುಸಿಯುತ್ತದೆ ಎನ್ನಲಾಗಿದೆ. ಜನವರಿ 24,25ರಂದು ಈಶಾನ್ಯ ಭಾರತದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ಮುಂದಿನ 48 ಗಂಟೆಗಳಲ್ಲಿ ಅಸ್ಸಾಂ ಮತ್ತು ಮೇಘಾಲಯ ಮತ್ತು ನಾಗಾಲ್ಯಾಂಡ್‌ನಲ್ಲಿ ಆಲಿಕಲ್ಲು ಮಳೆಯಾಗಬಹುದು ಎಂದು ಹೇಳಲಾಗಿದೆ.
ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಆರೆಂಜ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ. ಭಾನುವಾರ ಅಂದರೆ ಜನವರಿ 23 ರಂದು ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಅದರಂತೆ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಇಂದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜಸ್ಥಾನದಲ್ಲಿ ಯಾವುದೇ ರೀತಿಯ ಕಟ್ಟುಪಾಡುಗಳು ಸದ್ಯಕ್ಕೆ ಇಲ್ಲ.
ಮುಂದಿನ 2 ರಿಂದ 3 ದಿನಗಳ ರಾತ್ರಿಯ ವೇಳೆ ಕನಿಷ್ಠ ತಾಪಮಾನ 2-4 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಆದಾಗ್ಯೂ ಮುಂಬರುವ ವಾರದಲ್ಲಿ ಮತ್ತೆ ಭಾರತದಾದ್ಯಂತ ತಾಪಮಾನವು 3-5 ° C ರಷ್ಟು ಕುಸಿಯುವ ಸಾಧ್ಯತೆಯಿದೆ.
ಇಂದು ಮತ್ತು ನಾಳೆ ವ್ಯಾಪಕ ಮಳೆ, ಹಿಮಪಾತವಾಗಲಿದೆ ಮತ್ತು ನಂತರದಲ್ಲಿ ಇಳಿಕೆಯಾಗಲಿದೆ. ಅದರಂತೆ ಉಪ-ವಿಭಾಗಗಳ ಮೇಲೆ ಭಾರೀ ಮಳೆ, ಹಿಮ ಬೀಳುವ ಸಾಧ್ಯತೆಯಿದೆ.
Recommended Video
ಪೂರ್ವ ಉತ್ತರ ಪ್ರದೇಶ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ. ಇನ್ನೂ ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರದಲ್ಲಿ ಕೂಡ ಇಂದು ಮತ್ತು ನಾಳೆ ಮಳೆಯಾಗಲಿದೆ.












Click it and Unblock the Notifications