Maharashtra Assembly Election 2024 ದೇವೇಂದ್ರ ಫಡ್ನವೀಸ್‌ಗೆ ಈ ಕಾರಣಕ್ಕೆ ಬಿಜೆಪಿ ಸಾರಥ್ಯ ಇಲ್ಲ
ಮಹಾರಾಷ್ಟ್ರದಲ್ಲಿ ಬಿಜೆಪಿ ಬಹುದೊಡ್ಡ ಪಕ್ಷವಾಗಿ ಗುರುತಿಸಿಕೊಂಡಿದೆ. ಆದರೆ, ಕಳೆದ ಬಾರಿ ಪೂರ್ಣ ಬಹುಮತ ಗಳಿಸಲು ಬಿಜೆಪಿಗೆ ಸಾಧ್ಯವಾಗಿರಲಿಲ್ಲ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಈಗ ಇರುವ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದಾರೆ. ಆದರೆ, ಮಹಾರಾಷ್ಟ್ರದಲ್ಲಿ ಬಿಜೆಪಿ ಸಾರಥ್ಯವನ್ನು ಅವರೇ ಮುಂದುವರಿಸಲಿದ್ದಾರೆಯೇ ಇಲ್ಲವೇ ಹೊಸ ಮುಖಕ್ಕೆ ಬಿಜೆಪ ಮಣೆ ಹಾಕಲಿದೆಯೇ ಎನ್ನುವ ಪ್ರಶ್ನೆ ಎದುರಾಗಿದೆ. ಇತ್ತೀಚಿನ ವರ್ಷಗಳಲ್ಲಿ ದೇವೇಂದ್ರ ಫಡ್ನವೀಸ್ ಅವರ ಸಾರಥ್ಯದಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡುತ್ತಿದ್ದರೂ, ಹೈಕಮಾಂಡ್‌ಗೆ ಸಂತೃಪ್ತಿ ಆಗುವಷ್ಟು ಸ್ಥಾನ ಸಿಕ್ಕಿಲ್ಲ.
2019ನೇ ಸಾಲಿನಲ್ಲಿ ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುದೊಡ್ಡ ಪಕ್ಷವಾಗಿ ಹೊರ ಹೊಮ್ಮಿತ್ತು. ಆದರೆ, ಮಹಾರಾಷ್ಟ್ರದಲ್ಲಿ ಏಕಾಂಗಿಯಾಗಿ ಅಧಿಕಾರಕ್ಕೆ ಬರಲು ಸಾಧ್ಯವಾಗಲಿಲ್ಲ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಒಟ್ಟು 288 ಸ್ಥಾನಗಳಿದ್ದು, ಮ್ಯಾಜಿಕ್ ಸಂಖ್ಯೆ 145 ಇದೆ. ಐದು ವರ್ಷಗಳ ಹಿಂದೆ ನಡೆದ ಚುನಾವಣೆಯಲ್ಲಿ ಬಿಜೆಪಿ ಉಳಿದ ಎಲ್ಲ ಪಕ್ಷಗಳಿಗಿಂತಲೂ ಹೆಚ್ಚಿನ ಸ್ಥಾನ ಅಂದರೆ 105 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಆ ಸಂದರ್ಭದಲ್ಲಿ ದೇವೇಂದ್ರ ಫಡ್ನವೀಸ್ ಅವರೇ ಬಿಜೆಪಿ ಸಾರಥ್ಯವನ್ನು ವಹಿಸಿಕೊಂಡಿದ್ದರು. ಆದರೆ, ಮಹಾರಾಷ್ಟ್ರದಲ್ಲಿ ಈ ಬೆಳವಣಿಗೆಯಿಂದಲೇ ದೇವೇಂದ್ರ ಫಡ್ನವೀಸ್ ಅವರ ಹಿನ್ನಡೆ ಶುರುವಾಯಿತು ಎಂದು ವಿಶ್ಲೇಷಿಸಲಾಗುತ್ತದೆ.

ಏಕೆಂದರೆ, ಈ ಬೆಳವಣಿಗೆಯ ನಂತರ ಅವರಿಂದ ಮುಖ್ಯಮಂತ್ರಿಯಾಗಲು ಸಾಧ್ಯವಾಗಲಿಲ್ಲ. ಅಲ್ಲದೇ ಈಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ 9 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಈ ಹಿಂದೆ ಅಂದರೆ 2019ನೇ ಸಾಲಿನಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿಯು ಬರೋಬ್ಬರಿ 23 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಈ ಎಲ್ಲ ಹಿನ್ನಡೆಗಳಿಂದ ಈ ಬಾರಿಯೂ ದೇವೇಂದ್ರ ಫಡ್ನವೀಸ್ ಅವರಿಗೆ ಬಿಜೆಪಿ ಮಣೆ ಹಾಲಿದೆಯೇ ಇಲ್ಲವೇ ಹೊಸ ಮುಖವನ್ನು ಹುಡುಕಲಿದೆಯೇ ಎನ್ನುವ ಪ್ರಶ್ನೆ ಎದುರಾಗಿದೆ.
ಎಲ್ಲರಿಗೂ ಆಪ್ತರಾಗಿರುವ ದೇವೇಂದ್ರ ಫಡ್ನವೀಸ್
ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ. ಮೇಲ್ಜಾತಿಗೆ ಸೇರಿದ್ದಾರೆ. ಅಲ್ಲದೇ ಮಹಾರಾಷ್ಟ್ರದಲ್ಲಿ ಉತ್ತಮ ಆಡಳಿತ ನೀಡಿರುವುದು ಹಾಗೂ ಬಿಜೆಪಿಯಲ್ಲಿ ಸಂಘಟನಾತ್ಮಕವಾಗಿ ಕೆಲಸ ಮಾಡಿರುವುದು ಸೇರಿದಂತೆ ಹಲವು ಮೆಚ್ಚುಗೆ ದೇವೇಂದ್ರ ಫಡ್ನವೀಸ್ ಪಾತ್ರರಾಗಿದ್ದಾರೆ. ಅಲ್ಲದೇ ಆರ್‌ಎಸ್‌ಎಸ್ ಹಿನ್ನಲೆ, ಪ್ರಧಾನಿ ನರೇಂದ್ರ ಮೋದಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಅಂಶಗಳೂ ಸಹ ಅವರಿಗೆ ಪ್ಲಸ್ ಪಾಯಿಂಟ್ಸ್. ಈಗ ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸುತ್ತಿದ್ದು, ಉಪ ಮುಖ್ಯಮಂತ್ರಿಯಾಗಿರುವ ದೇವೇಂದ್ರ ಫಡ್ನವೀಸ್ ಅವರು ಬಹುತೇಕ ವಿಷಯಗಳನ್ನು ಸೂಕ್ಷ್ಮವಾಗಿಯೇ ನಿರ್ವಹಿಸಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಹುದ್ದೆಯನ್ನು ನಾನು ತೆಗೆದುಕೊಳ್ಳುವುದಿಲ್ಲ ಎಂದು ಫಡ್ನವೀಸ್ ಹೇಳಿದ್ದರು. ಆದರೆ, ಬಿಜೆಪಿ ಹೈಕಮಾಂಡ್‌ನ ಮಾತಿಗೆ ಅವರು ಮಣಿಯಬೇಕಾಯಿತು.
ಹೈಕಮಾಂಡ್ ಸೂಚನೆಯ ಮೇರೆಗೆ ದೇವೇಂದ್ರ ಅವರು ಉಪ ಮುಖ್ಯಮಂತ್ರಿಯಾಗಿ ಏಕನಾಥ ಶಿಂಧೆಯ ನೇತೃತ್ವದ ಹಾಗೂ ಸಮ್ಮಿಶ್ರ ಸರ್ಕಾರದ ಭಾಗವಾಗಿದ್ದಾರೆ. ಇದೀಗ ಮುಂದಿನ ಮುಖ್ಯಮಂತ್ರಿಯಾರು ಎನ್ನುವ ಪ್ರಶ್ನೆಗೂ ಬಿಜೆಪಿ ಮೌನ ತಾಳಿದೆ. ಚುನಾವಣೆ ನಡೆದು, ಫಲಿತಾಂಶ ಪ್ರಕಟವಾದ ನಂತರ ನೋಡೋಣ ಬಿಡಿ ಎನ್ನುತ್ತಿದೆ. ಹೀಗಾಗಿ ದೇವೇಂದ್ರ ಫಡ್ನವೀಸ್ ಅವರಿಗೆ ಬಿಜೆಪಿ ಮುಂದಿನ ದಿನಗಳಲ್ಲಿ ಯಾವ ಜವಾಬ್ದಾರಿ ನೀಡಲಿದೆ ಎನ್ನುವ ಕುತೂಹಲ ಮೂಡಿದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications