Terror Attack: ಜಮ್ಮು ಕಾಶ್ಮೀರದಲ್ಲಿ ಮೂರು ದಿನಗಳಲ್ಲಿ ಉಗ್ರರ ಮೂರನೇ ದಾಳಿ
ಶ್ರೀನಗರ, ಜೂನ್. 12:ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ನಿನ್ನೆ ತಡರಾತ್ರಿ ಸೇನಾ ನೆಲೆಯ ಮೇಲೆ ದಾಳಿ ನಡೆಸಿದ ನಂತರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಐವರು ಯೋಧರು ಮತ್ತು ವಿಶೇಷ ಪೊಲೀಸ್ ಅಧಿಕಾರಿ (ಎಸ್‌ಪಿಒ) ಗಾಯಗೊಂಡಿದ್ದಾರೆ.
ಕಥುವಾದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಒಬ್ಬ ನಾಗರಿಕ ಗಾಯಗೊಂದ್ದರು. ನಂತರ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ನಲ್ಲಿ ಒಂಬತ್ತು ಪ್ರಯಾಣಿಕರನ್ನು ಕೊಂದುಹಾಕಿದ್ದರು. ನಂತರ ಈ ದಾಳಿ ನಡೆದಿದೆ. ಜಮ್ಮುವಿನಲ್ಲಿ ಕಳೆದ ಮೂರು ದಿನಗಳಲ್ಲಿ ಇದು ಮೂರನೇ ಘಟನೆಯಾಗಿದೆ.

ಕಳೆದ ರಾತ್ರಿ ಕಥುವಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಸಹ ಹತ್ಯೆ ಮಾಡಲಾಗಿದೆ ಎಂದು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿರುವ ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್ ಹೇಳಿದ್ದಾರೆ.
ದೋಡಾ ಘಟನೆಯ ಕುರಿತು ಮಾಹಿತಿ ನೀಡಿರುವ ಅವರು, ನಿನ್ನೆ ತಡರಾತ್ರಿ ಚಟರ್ಗಾಲಾ ಪ್ರದೇಶದ ಸೇನಾ ನೆಲೆಯಲ್ಲಿ ಪೊಲೀಸರು ಮತ್ತು ರಾಷ್ಟ್ರೀಯ ರೈಫಲ್ಸ್ ಜಂಟಿ ಪಾರ್ಟಿಯ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ ಎಂದು ಹೇಳಿದರು. ಉನ್ನತ ಮಟ್ಟದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಭಯೋತ್ಪಾದನೆಯಿಂದ ಮುಕ್ತವಾಗಿರುವ ಪ್ರದೇಶಗಳಿಂದ ಈ ದಾಳಿಗಳು ವರದಿಯಾಗುತ್ತಿರುವುದು ಈಗ ಆತಂಕಕ್ಕೆ ಕಾರಣವಾಗಿದೆ. ನಿನ್ನೆ ಸಂಜೆ ಕಥುವಾ ದಾಳಿಯಲ್ಲಿ ಇಬ್ಬರು ಭಯೋತ್ಪಾದಕರು ಭಾಗಿಯಾಗಿದ್ದು, ಅವರಲ್ಲಿ ಒಬ್ಬನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರತಾ ಪಡೆಗಳು ಈಗ ಕಥುವಾದ ಹೀರಾನಗರ ಪ್ರದೇಶದಲ್ಲಿ ಇನ್ನೊಬ್ಬ ಉಗ್ರನನ್ನು ಬೇಟೆಯಾಡಲು ಡ್ರೋನ್‌ಗಳನ್ನು ಬಳಸುತ್ತಿವೆ.
ಭಯೋತ್ಪಾದಕರು ಹಲವಾರು ಮನೆಗಳಿಂದ ನೀರು ಕೇಳಿದ್ದಾರೆ. ಇವರನ್ನು ನೋಡಿ ಗ್ರಾಮಸ್ಥರು ಅನುಮಾನಗೊಂಡಿದ್ದಾರೆ. ಕೆಲವು ಗ್ರಾಮಸ್ಥರು ಎಚ್ಚರಿಕೆ ನೀಡಿದಾಗ ಗುಂಡು ಹಾರಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಒಬ್ಬ ನಾಗರಿಕ ಗಾಯಗೊಂಡಿದ್ದಾನೆ. ಕಥುವಾ ದಾಳಿಯಲ್ಲಿ ಮೂರು ಜನರು ಸಾವನ್ನಪ್ಪಿದ್ದಾರೆ ಎಂಬ ವರದಿಗಳನ್ನು ನಿರಾಕರಿಸಿದ್ದಾರೆ.
#WATCH | Jammu and Kashmir: Follow-up search operation underway after the terror attack in Kathua's Hiranagar last night.
— ANI (@ANI) June 12, 2024
Out of two terrorists, one was neutralised last night in an encounter. Search operations to nab the other terrorists are underway. The security forces have… pic.twitter.com/uMD7CfRKWD
"ಹಲವು ಜನರು ಗಾಯಗೊಂಡಿದ್ದಾರೆ ಮತ್ತು ಮೂವರು ಸತ್ತಿದ್ದಾರೆ ಎಂಬ ವದಂತಿಗಳಿವೆ. ಆದರೆ ಒಬ್ಬ ನಾಗರಿಕ ಮಾತ್ರ ಗಾಯಗೊಂಡಿದ್ದಾನೆ, ಇದನ್ನು ಹೊರತುಪಡಿಸಿ ಒತ್ತೆಯಾಳುಗಳು ಮತ್ತು ಸಾವಿನ ಬಗ್ಗೆ ಎಲ್ಲಾ ಮಾಹಿತಿಯು ವದಂತಿಗಳು" ಎಂದು ತಿಳಿಸಿದ್ದಾರೆ.
ಎರಡು ದಿನಗಳ ಹಿಂದೆ, ರಿಯಾಸಿಯಲ್ಲಿ ಶಿವ ಖೋರಿ ಗುಹೆ ದೇವಸ್ಥಾನಕ್ಕೆ ತೆರಳುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಬಸ್ ಚಾಲಕ ಪ್ರಯಾಣಿಕರನ್ನು ಇಳಿಸಲು ನಿರಾಕರಿಸಿದ ನಂತರ ಭಯೋತ್ಪಾದಕರು ಗುಂಡು ಹಾರಿಸಿದರು, ಆದರೆ ನಿಯಂತ್ರಣ ಕಳೆದುಕೊಂಡು ಬಸ್ ಕಮರಿಗೆ ಬಿದ್ದಿದೆ ಎಂದು ಬಸ್ ಕಂಪನಿಯ ವ್ಯವಸ್ಥಾಪಕರು ತಿಳಿಸಿದ್ದಾರೆ. ಘಟನೆಯಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದು, 33 ಮಂದಿ ಗಾಯಗೊಂಡಿದ್ದಾರೆ. ಲಷ್ಕರ್-ಎ-ತೊಯ್ಬಾ ಕಮಾಂಡರ್ ಅಬು ಹಮ್ಜಾ ನಿರ್ದೇಶನದ ಮೇರೆಗೆ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications