ಮಧ್ಯಪ್ರದೇಶ ಚುನಾವಣೆ 2023; ಬಿಜೆಪಿಗೆ ಮುಖಭಂಗ, ಕಾಂಗ್ರೆಸ್‌ಗೆ ಬಹುಮತ

ಭೋಪಾಲ್, ನವೆಂಬರ್ 30: ಮಧ್ಯಪ್ರದೇಶ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರ ಪಡೆಯಲಿದೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿದೆ. ರಾಜ್ಯದ 230 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 17ರ ಶುಕ್ರವಾರ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ರಾಜ್ಯದಲ್ಲಿ ದಾಖಲೆಯ 76.22ರಷ್ಟು ಮತದಾನವಾಗಿತ್ತು. ಡಿಸೆಂಬರ್ 3ರ ಭಾನುವಾರ ಮತ ಎಣಿಕೆ ನಡೆಯಲಿದೆ.

ಗುರುವಾರ 5 ರಾಜ್ಯಗಳ ವಿಧಾನಸಭೆ ಚುನಾವಣೆ ಮುಕ್ತಾಯಗೊಂಡಿದೆ. 2024ರ ಲೋಕಸಭೆ ಚುನಾವಣೆಗೂ ಮೊದಲು ನಡೆಯುತ್ತಿರುವ 5 ರಾಜ್ಯಗಳ ಚುನಾವಣಾ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ. ವಿವಿಧ ರಾಷ್ಟ್ರೀಯ ವಾಹಿನಿಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆಗಳು ಗುರುವಾರ ಸಂಜೆ ಪ್ರಕಟಗೊಂಡಿವೆ.

ANS Exit Poll Results For Madhya Pradesh Assembly Election 2023

ಮಧ್ಯಪ್ರದೇಶ ರಾಜ್ಯದ ಚುನಾವಣೆ ಕುರಿತು ANS ನಡೆಸಿದ ಸಮೀಕ್ಷೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಪಡೆಯಲಿದೆ. ರಾಜ್ಯದ ಆಡಳಿತ ಪಕ್ಷವಾದ ಬಿಜೆಪಿ ಸೋಲು ಕಾಣಲಿದೆ ಎಂದು ಹೇಳಿದೆ. 2018ರ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಕಾಂಗ್ರೆಸ್ ಎಸ್ಪಿ, ಬಿಎಸ್‌ಪಿ ಜೊತೆ ಸೇರಿ ಸರ್ಕಾರ ರಚನೆ ಮಾಡಿತ್ತು. ಆದರೆ 2020ರಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಂಡು ಮುಖ್ಯಮಂತ್ರಿ ಕಮಲ್‌ ನಾಥ್ ರಾಜೀನಾಮೆ ನೀಡಿದ್ದರು.

ಮಧ್ಯಪ್ರದೇಶ ರಾಜ್ಯದ ಒಟ್ಟು ವಿಧಾನಸಭಾ ಕ್ಷೇತ್ರಗಳು 230. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 116. ANS ಚುನಾವಣೋತ್ತರ ಸಮೀಕ್ಷೆ ಪ್ರಕಾರ ಬಿಜೆಪಿ 81-85, ಕಾಂಗ್ರೆಸ್ 139-143 ಮತ್ತು ಇತರರು 2-4 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+