ಮೇಘಾಲಯದಲ್ಲಿ ಸಿಎಎ ವಿರುದ್ಧ ಪ್ರತಿಭಟನೆ: ಓರ್ವ ಸಾವು, ಇಂಟರ್‌ನೆಟ್ ಸ್ಥಗಿತ
ಶಿಲ್ಲಾಂಗ್, ಫೆಬ್ರವರಿ 29: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಕಿಚ್ಚು ಇದೀಗ ಮೇಘಾಲಯವನ್ನು ತಲುಪಿದೆ.
ಮೇಘಾಲಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಓರ್ವ ಮೃತಪಟ್ಟಿದ್ದಾನೆ.ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ 40ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ.
ಪರಿಸ್ಥಿತಿ ಕೈಮೀರದಂತೆ ನೋಡಿಕೊಳ್ಳಲು ಮೇಘಾಲಯದ 6 ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ರದ್ದು ಮಾಡಲಾಗಿದೆ. ಮುಂದಿನ 48 ಗಂಟೆಗಳ ಕಾಲ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಿಲ್ಲಾಂಗ್ ಹಾಗೂ ಸುತ್ತಮುತ್ತ ಭಾಗದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.

ಶಿಲ್ಲಾಂಗ್ ಜಿಲ್ಲೆಯ ಇಚಮತಿ ಭಾಗದಲ್ಲಿ ಆ್ಯಂಟಿ ಸಿಎಎ ಹಾಗೂ ಆಂತರಿಕ ರೇಖೆಯ ಪರವಾನಗಿ (ಐಎಲ್ಪಿ) ಪರವಾಗಿ ಸಭೆ ನಡೆದಿತ್ತು. ಈ ವೇಳೆ ಖಾಸಿ ವಿದ್ಯಾರ್ಥಿ ಸಂಘಟನೆ ಮತ್ತು ನಾನ್ ಟ್ರೈಬಲ್ಸ್ ನಡುವೆ ವಾಗ್ವಾದ ಏರ್ಪಟ್ಟಿದೆ. ಇದು ಹಿಂಸಾಚಾರಕ್ಕೆ ತಿರುಗಿದ್ದು, ಓರ್ವ ಮೃತಪಟ್ಟಿದ್ದಾನೆ.
ನವದೆಹಲಿಯಲ್ಲಿ ನಡೆಯುತ್ತಿರುವ ಸಿಎಎ ಮತ್ತು ಎನ್ಆರ್ಸಿ ವಿರೋಧಿ ಪ್ರತಿಭಟನೆಯಲ್ಲಿ ಸಾವಿನ ಸಂಖ್ಯೆ ದಿನದಿಂದ ದಿನಕ್ಕೇರುತ್ತಲೇ ಇದೆ. ಇಲ್ಲಿಯವರೆಗೂ ಈ ಗಲಭೆಯಲ್ಲಿ 42 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ 123 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.












Click it and Unblock the Notifications