ಕೋವಿಶೀಲ್ಡ್-ಕೋವ್ಯಾಕ್ಸಿನ್ ಲಸಿಕೆ ಪಡೆದವರಲ್ಲಿ 2-3 ತಿಂಗಳಲ್ಲಿ ಪ್ರತಿಕಾಯ ತಗ್ಗಲಿದೆ; ಅಧ್ಯಯನ
ನವದೆಹಲಿ, ಸೆಪ್ಟೆಂಬರ್ 14: ಭಾರತದಲ್ಲಿ ಕೊರೊನಾ ಸೋಂಕಿನ ವಿರುದ್ಧ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆ ಪಡೆದುಕೊಂಡವರಲ್ಲಿ 2-3 ತಿಂಗಳಿನಲ್ಲಿ ಲಸಿಕೆಯಿಂದ ಉತ್ಪತ್ತಿಯಾದ ಪ್ರತಿಕಾಯಗಳು ತಗ್ಗಲು ಆರಂಭವಾಗುತ್ತದೆ ಎಂದು ಈಚಿನ ಅಧ್ಯಯನವೊಂದು ತಿಳಿಸಿದೆ.
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಭುವನೇಶ್ವರ ಪ್ರಾದೇಶಿಕ ಕೇಂದ್ರ ಈ ಎರಡು ಲಸಿಕೆಗಳಿಂದ ಉತ್ಪತ್ತಿಯಾದ ಪ್ರತಿಕಾಯ ಮಟ್ಟ ಹಾಗೂ ದೇಹದಲ್ಲಿ ಅವುಗಳ ಉಪಸ್ಥಿತಿ ಕುರಿತು ಅಧ್ಯಯನ ನಡೆಸಿ ಮಾಹಿತಿ ನೀಡಿದೆ.
ಕೋವ್ಯಾಕ್ಸಿನ್ ಲಸಿಕೆ ಪಡೆದುಕೊಂಡವರಲ್ಲಿ ಎರಡು ತಿಂಗಳ ನಂತರ ಪ್ರತಿಕಾಯಗಳು ತಗ್ಗುತ್ತವೆ. ಕೋವಿಶೀಲ್ಡ್ ಲಸಿಕೆ ಪಡೆದುಕೊಂಡವರಲ್ಲಿ ಮೂರು ತಿಂಗಳ ನಂತರ ಪ್ರತಿಕಾಯಗಳು ಕ್ಷೀಣಿಸಲು ಆರಂಭವಾಗುತ್ತದೆ ಎಂಬುದನ್ನು ಅಧ್ಯಯನ ಉಲ್ಲೇಖಿಸಿದೆ.

ಈ ಅಧ್ಯಯನದ ಕುರಿತು ಐಸಿಎಂಆರ್-ಆರ್‌ಎಂಆರ್‌ಸಿ ವಿಜ್ಞಾನಿ ಡಾ. ದೇವದತ್ತ ಭಟ್ಟಾಚಾರ್ಯ ವಿವರ ಹಂಚಿಕೊಂಡಿದ್ದಾರೆ. '614 ಜನರ ಮೇಲೆ ಈ ಅಧ್ಯಯನ ನಡೆಸಲಾಗಿದೆ. ಇದರಲ್ಲಿ 50.2% ಮಂದಿ, ಅಂದರೆ 308 ಮಂದಿ ಕೋವಿಶೀಲ್ಡ್ ಲಸಿಕೆ ಪಡೆದುಕೊಂಡಿದ್ದರು. 49.8%, ಅಂದರೆ 306 ಕೋವ್ಯಾಕ್ಸಿನ್ ಲಸಿಕೆ ಪಡೆದುಕೊಂಡಿದ್ದರು.
ಲಸಿಕೆ ಪಡೆದುಕೊಂಡ ನಂತರ ಸೋಂಕು ತಗುಲಿದ 81 ಪ್ರಕರಣಗಳು ಕಂಡುಬಂದಿರುವುದಾಗಿ ಮಾಹಿತಿ ನೀಡಿದ್ದಾರೆ.
ಸೋಂಕಿಗೆ ತುತ್ತಾಗದ 533 ಆರೋಗ್ಯ ಕಾರ್ಯಕರ್ತರ ಪ್ರತಿಕಾಯ ಮಟ್ಟ ಹೆಚ್ಚಾಗಿ ಕ್ಷೀಣಿಸಿರುವುದಾಗಿ ಅಧ್ಯಯನ ತಿಳಿಸಿದೆ. ಲಸಿಕೆಗಳಿಂದ ಉತ್ಪತ್ತಿಯಾಗುವ ಪ್ರತಿಕಾಯ ಮಟ್ಟದ ಉಪಸ್ಥಿತಿ ಕುರಿತು ನಿಖರ ಮಾಹಿತಿಗೆ ಇನ್ನೂ ಎರಡು ವರ್ಷಗಳ ಕಾಲ ಈ ಅಧ್ಯಯನವನ್ನು ಮುಂದುವರೆಸುವುದಾಗಿ ಭಟ್ಟಾಚಾರ್ಯ ಮಾಹಿತಿ ನೀಡಿದ್ದಾರೆ.

'ಕೋವ್ಯಾಕ್ಸಿನ್ ಲಸಿಕೆ ಪಡೆದವರಲ್ಲಿ ಪ್ರತಿಕಾಯ ಮಟ್ಟ ಎರಡು ತಿಂಗಳ ನಂತರ ತಗ್ಗಿರುವುದು ಕಂಡುಬಂದಿದೆ. ಕೋವಿಶೀಲ್ಡ್‌ನಲ್ಲಿ ಈ ಅವಧಿ ಮೂರು ತಿಂಗಳದ್ದಾಗಿದೆ' ಎಂದು ಪುನರುಚ್ಚರಿಸಿದ್ದಾರೆ.
ಮಾರ್ಚ್ 2021ರಲ್ಲಿ ಅಧ್ಯಯನವನ್ನು ಆರಂಭಿಸಲಾಗಿತ್ತು. ಕೋವ್ಯಾಕ್ಸಿನ್ ಅಥವಾ ಕೋವಿಶೀಲ್ಡ್ ಲಸಿಕೆಯ ಸಂಪೂರ್ಣ ಎರಡು ಡೋಸ್ ಪಡೆದ ಆರೋಗ್ಯ ಕಾರ್ಯಕರ್ತರಲ್ಲಿ 'ಇಮ್ಯುನೊಗ್ಲೋಬ್ಯುಲಿನ್ ಜಿ' (ಸೋಂಕಿನ ವಿರುದ್ಧ ಸಾಮಾನ್ಯ ಪ್ರತಿಕಾಯ) ಉಪಸ್ಥಿತಿ ಕುರಿತು ಅಧ್ಯಯನವನ್ನು ಕೈಗೊಳ್ಳಲಾಗಿತ್ತು. ಮೊದಲ ಡೋಸ್ ಲಸಿಕೆ ಪಡೆದ ನಂತರ 24 ವಾರಗಳ ಕಾಲ ಅವರ ಮೇಲೆ ನಿಗಾ ಇಟ್ಟು, ಪರೀಕ್ಷೆಗೂ ಒಳಪಡಿಸಲಾಗಿತ್ತು.
'ಕಾಲಾನಂತರ ಲಸಿಕೆಗಳಿಂದ ಉತ್ಪತ್ತಿಯಾದ ಪ್ರತಿಕಾಯ ಮಟ್ಟ ಕ್ಷೀಣಿಸಿದರೂ ದೇಹದಲ್ಲಿ ಪ್ರತಿಕಾಯ ಉಳಿದುಕೊಂಡಿರುತ್ತದೆ ಎಂದು ಆರ್‌ಎಂಆರ್‌ಸಿ ನಿರ್ದೇಶಕರಾದ ಸಂಘಮಿತ್ರ ಪಾಟಿ ಹೇಳಿದ್ದಾರೆ. ಬೂಸ್ಟರ್ ಶಾಟ್‌ಗಳ ಅಗತ್ಯದ ಕುರಿತು ಮಾತನಾಡಿರುವ ಅವರು, ಬೂಸ್ಟರ್ ಡೋಸ್ ಲಸಿಕೆಗಳ ಅಗತ್ಯವನ್ನು ಒತ್ತಿಹೇಳಲು ಇನ್ನೂ ವೈಜ್ಞಾನಿಕ ಪುರಾವೆಗಳ ಅಗತ್ಯವಿದೆ' ಎಂದಿದ್ದಾರೆ.
ಕೊರೊನಾ ಸೋಂಕಿನ ವಿರುದ್ಧ ದೇಶದಲ್ಲಿ ಮೊದಲು ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಯನ್ನು ಉತ್ಪಾದಿಸಲಾಯಿತು. ಭಾರತ್ ಬಯೋಟೆಕ್‌ನ ಕೋವ್ಯಾಕ್ಸಿನ್ ಹಾಗೂ ಸೆರಂ ಇನ್‌ಸ್ಟಿಟ್ಯೂಟ್‌ನ ಕೋವಿಶೀಲ್ಡ್ ಲಸಿಕೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನೀಡಲಾಗುತ್ತಿದೆ. ಉಳಿದಂತೆ ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಗೆ ಅನುಮೋದನೆ ದೊರೆತಿದೆ. ಮಕ್ಕಳಿಗೆ ಝೈಡಸ್ ಕ್ಯಾಡಿಲಾದ ಲಸಿಕೆಗೆ ಅನುಮೋದನೆ ನೀಡಲಾಗಿದೆ.
ಭಾರತದಲ್ಲಿ ಕೊರೊನಾ ಸೋಂಕಿನ ವಿರುದ್ಧ ಇದೇ ಜನವರಿ 16ರಿಂದ ಲಸಿಕೆ ನೀಡಲಾಗುತ್ತಿದೆ. ಇದುವರೆಗೂ 72,77,98,325 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ.
ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆ ಆರಂಭಿಸಲಾಗಿತ್ತು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications