ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ಅನೂಪ್ ಚಂದ್ರ ಪಾಂಡೆ ನೇಮಕ

ನವದೆಹಲಿ, ಜೂನ್ 09: ಚುನಾವಣಾ ಆಯೋಗದ ನೂತನ ಆಯುಕ್ತರನ್ನಾಗಿ ಉತ್ತರ ಪ್ರದೇಶದ ಮಾಜಿ ಮುಖ್ಯ ಕಾರ್ಯದರ್ಶಿ ಅನೂಪ್ ಚಂದ್ರ ಪಾಂಡೆ ಅವರನ್ನು ನೇಮಿಸಿ ಮಂಗಳವಾರ ಆದೇಶಿಸಲಾಗಿದೆ.

ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿದ್ದ ಸುನಿಲ್ ಅರೋರಾ ಅವರು ಏಪ್ರಿಲ್ 12ರಂದು ನಿವೃತ್ತರಾಗಿದ್ದರು. ಆ ಸ್ಥಾನಕ್ಕೆ ಉತ್ತರ ಪ್ರದೇಶ ಕೇಡರ್‌ನ ನಿವೃತ್ತ ಐಎಎಸ್ ಅಧಿಕಾರಿ ಅನೂಪ್ ಚಂದ್ ಪಾಂಡೆ ಅವರನ್ನು ನೇಮಿಸಲಾಗಿದೆ.

ಮೂರು ಸದಸ್ಯರ ಆಯೋಗದಲ್ಲಿ ಸುಶೀಲ್ ಚಂದ್ರ ಹಾಗೂ ರಾಜೀವ್ ಕುಮಾರ್ ಅವರು ಕಾರ್ಯ ನಿರ್ವಹಿಸುತ್ತಿದ್ದು, ಇನ್ನೊಬ್ಬ ಆಯುಕ್ತರ ಹುದ್ದೆ ಖಾಲಿ ಉಳಿದಿತ್ತು. ಇದೀಗ ಉತ್ತರ ಪ್ರದೇಶ ಮಾಜಿ ಮುಖ್ಯ ಕಾರ್ಯದರ್ಶಿ ಅನೂಪ್ ಚಂದ್ರ ಪಾಂಡೆ ಅವರನ್ನು ನೇಮಿಸಲಾಗಿದೆ.

Anup Chandra Pandey Appointed As Election Commissioner

ಉತ್ತರ ಪ್ರದೇಶ ಕೇಡರ್‌ನ 1984ನೇ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದ ಅನೂಪ್ ಚಂದ್ರ ಪಾಂಡೆ ಈ ಹಿಂದೆ ಭಾರತೀಯ ರಕ್ಷಣಾ ಇಲಾಖೆಯಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿ ಹಾಗೂ ಕೇಂದ್ರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 2019ರ ಆಗಸ್ಟ್‌ನಲ್ಲಿ ಉತ್ತರ ಪ್ರದೇಶ ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ರಾಗಿದ್ದರು. ಉತ್ತರ ಪ್ರದೇಶದಲ್ಲಿ ವಿವಿಧ ಸರ್ಕಾರಿ ಹುದ್ದೆ ನಿಭಾಯಿಸಿದ್ದರು.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+