Industrial Smart Cities: ಈ 10 ರಾಜ್ಯಗಳಲ್ಲಿ 12 ಕೈಗಾರಿಕಾ ಸ್ಮಾರ್ಟ್ ಸಿಟಿಗಳ ಸ್ಥಾಪನೆ; ತಗಲುವ ವೆಚ್ಚ ಎಷ್ಟು.?

Industrial Smart Cities: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ನಡೆದಿದ್ದು, ಈ ವೇಳೆ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ 28,602 ಕೋಟಿ ರೂಪಾಯಿಗಳ ಅಂದಾಜು ಹೂಡಿಕೆಯೊಂದಿಗೆ 12 ಕೈಗಾರಿಕಾ ಸ್ಮಾರ್ಟ್ ಸಿಟಿಗಳನ್ನು ಸ್ಥಾಪಿಸಲು ಅನುಮೋದನೆ ನೀಡಿದೆ.

ಒಟ್ಟು 10 ರಾಜ್ಯಗಳಲ್ಲಿ ಕೈಗಾರಿಕಾ ಸ್ಮಾರ್ಟ್ ಸಿಟಿಗಳನ್ನು ಸ್ಥಾಪನೆ ಮಾಡಲಾಗುತ್ತದೆ ಮತ್ತು ಆರು ಪ್ರಮುಖ ಕಾರಿಡಾರ್‌ಗಳಲ್ಲಿ ಕಾರ್ಯತಂತ್ರಾತ್ಮಕವಾಗಿ ಯೋಜಿಸಲಾಗಿದೆ. ಈ ಕೈಗಾರಿಕಾ ಪ್ರದೇಶಗಳು ಉತ್ತರಾಖಂಡದ ಖುರ್ಪಿಯಾ, ಪಂಜಾಬ್‌ನ ರಾಜ್ಪುರ-ಪಟಿಯಾಲ, ಮಹಾರಾಷ್ಟ್ರದ ದಿಘಿ, ಕೇರಳದ ಪಾಲಕ್ಕಾಡ್, ಉತ್ತರ ಪ್ರದೇಶದ ಆಗ್ರಾ ಮತ್ತು ಪ್ರಯಾಗ್‌ರಾಜ್, ಬಿಹಾರದ ಗಯಾ, ತೆಲಂಗಾಣದ ಜಹೀರಾಬಾದ್, ಆಂಧ್ರಪ್ರದೇಶದ ಓರ್ವಕಲ್ ಮತ್ತು ಕೊಪ್ಪಾರ್ಥಿ ಮತ್ತು ರಾಜಸ್ಥಾನದ ಜೋಧ್ಪುರ-ಪಾಲಿಯಲ್ಲಿ ಇರಲಿವೆ.

Approval for 12 industrial smart cities establishment in 10 states

ಇನ್ನು ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು, ಈ ಯೋಜನೆಯು ಸುಮಾರು 1.52 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆ ಸಾಮರ್ಥ್ಯವನ್ನು ಸೃಷ್ಟಿಸುತ್ತದೆ ಎಂದು ಹೇಳಿದರು.

₹265 ಕೋಟಿ ರೂಪಾಯಿ ಅನುದಾನ: ರಾಜ್ಯದಲ್ಲಿ ರೈಲ್ವೆ ಅಭಿವೃದ್ಧಿ ಕಾರ್ಯಗಳು ಆಗುತ್ತಲೇ ಇವೆ. ಇನ್ನು ತುಮಕೂರು-ರಾಯದುರ್ಗ ನೂತನ ರೈಲು ಮಾರ್ಗ ಈ ಭಾಗದ ಅತ್ಯಂತ ಮಹತ್ವದ ಯೋಜನೆ ಆಗಿದೆ. ಇದೀಗ ಈ ಯೋಜನೆ ಯಾವ ಹಂತದಲ್ಲಿದೆ ಹಾಗೂ ಇದಕ್ಕೆ ಕೇಂದ್ರ ಸರ್ಕಾರದಿಂದ ಎಷ್ಟು ಅನುದಾನ ನೀಡಲಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಈ ಯೋಜನೆಯ ಭಾಗವಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪಾವಗಡದಿಂದ ಮಡಕಶಿರಾ ನಡುವಿನ 22 ಕಿಲೋ ಮೀಟರ್‌ ಉದ್ದದ ಹೊಸ ಬ್ರಾಡ್‍ಗೇಜ್ ರೈಲು ಮಾರ್ಗ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ 265.92 ಕೋಟಿ ಅನುದಾನ ಒದಗಿಸಿದೆ. ಈ ಮೂಲಕ ತುಮಕೂರು-ರಾಯದುರ್ಗ ಹೊಸ ಬ್ರಾಡ್‍ಗೇಜ್ ರೈಲು ಮಾರ್ಗಕ್ಕೆ ವೇಗ ನೀಡಿದೆ.

ಈಗಾಗಲೇ ಈ ಬಗ್ಗೆ ನೈರುತ್ಯ ರೈಲ್ವೆ ವಲಯದಿಂದ ಟೆಂಡರ್ ಕರೆಯಲಾಗಿದ್ದು, ದಿನಾಂಕ 11-09-2024ರಂದು ಈ ಕಾಮಗಾರಿಯ ಬಿಡ್ ತೆರೆಯಲಿದೆ. ಈ ಮೂಲಕ ಕಾಮಗಾರಿ ನಿರ್ವಹಿಸುವ ಏಜೆನ್ಸಿ ಅಂತಿಮಗೊಳ್ಳಲಿದೆ. ಒಟ್ಟಾರೆಯಾಗಿ ಈ ಯೋಜನೆಯನ್ನು 18 ತಿಂಗಳಲ್ಲಿ ಪೂರ್ಣಗೊಳಿಸುವ ಗುರಿಯನ್ನು ರೈಲ್ವೆ ಇಲಾಖೆ ಹೊಂದಿದೆ.

ಈ ಯೋಜನೆಯಡಿ ಪಾವಗಡ-ಮಡಕಶಿರಾ ನಗರಗಳಲ್ಲಿ 510 ಚದುರ ಮೀಟರ್ ವಿಸ್ತೀರ್ಣದ ಸುಸಜ್ಜಿತ ರೈಲ್ವೆ ನಿಲ್ದಾಣಗಳು ನಿರ್ಮಾಣ ಆಗಲಿವೆ. ಹಾಗೂ ಈ ಮಾರ್ಗದಲ್ಲಿ ತಡೆರಹಿತ ರೈಲು ಸಂಚಾರಕ್ಕೆ 3 ಪ್ರಮುಖ ಸೇತುವೆಗಳು, 32 ಸಣ್ಣ ಸೇತುವೆಗಳು, 21 ಅಂಡರ್ ಬ್ರಿಡ್ಜ್‌ಗಳು ಹಾಗೂ 4 ಸೇತುವೆಗಳು ನಿರ್ಮಾಣ ಆಗಲಿವೆ.

ಒಟ್ಟಾರೆಯಾಗಿ ಯಾವುದೇ ಅಡೆತಡೆಯಿಲ್ಲದೇ ರೈಲುಗಳು ಪ್ರತಿಗಂಟೆಗೆ 110 ಕಿಲೋ ಮೀಟರ್‌ ವೇಗದಲ್ಲಿ ಚಲಿಸಲು ಯಾವ ಅಗತ್ಯ ಮೂಲಸೌಕರ್ಯಗಳು ಬೇಕೋ ಆ ಎಲ್ಲವನ್ನೂ ಈ ಯೋಜನೆ ಒಳಗೊಂಡಿದೆ. ತುಮಕೂರು-ರಾಯದುರ್ಗ ನೂತನ ರೈಲು ಮಾರ್ಗ ಪೂರ್ಣಗೊಂಡರೆ ಈ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+