Heavy Rain: ವಾಯುಭಾರ ಕುಸಿತ: ಈ ಭಾಗಗಳಲ್ಲಿ 7 ದಿನ ಧಾರಾಕಾರ ಮಳೆ: ಐಎಂಡಿ ಮುನ್ಸೂಚನೆ!
Heavy Rain: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳು ಸೇರಿದಂತೆ ದೇಶದಾದ್ಯಂತ ಧಾರಾಕಾರ ಮಳೆ ಮುಂದುವರಿದಿದೆ. ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಅಕ್ಟೋಬರ್ 29ರ ವರೆಗೆ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ (IMD) ವರದಿಯ ಪ್ರಕಾರ, ಅಕ್ಟೋಬರ್ 26 ರವರೆಗೆ ದಕ್ಷಿಣ ಭಾರತ ಮತ್ತು ಪೂರ್ವ ಭಾರತದಲ್ಲಿ ಮಿಂಚು - ಗುಡುಗು ಸಹಿತ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ. ಕರ್ನಾಟಕವೂ ಸೇರಿದಂತೆ ಲಕ್ಷದ್ವೀಪ ದ್ವೀಪ ಪ್ರದೇಶ, ತಮಿಳುನಾಡು, ಕೇರಳ, ತೆಲಂಗಾಣ ಮತ್ತು ಆಂಧ್ರಪ್ರದೇಶ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಪ್ರವಾಹ ಪರಿಸ್ಥಿತಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ದಕ್ಷಿಣ ಭಾರತದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ತಮಿಳುನಾಡು ಹಾಗೂ ಕೇರಳದ ವಿವಿಧ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದ ಪ್ರವಾಹ ಪರಿಸ್ಥಿತಿ ಎದುರಾಗಿದೆ. ತಮಿಳುನಾಡು ಹಾಗೂ ಪುದುಚೇರಿ ಭಾಗದಲ್ಲಿ ಅಕ್ಟೋಬರ್ 23 ರವರೆಗೆ ಭಾರೀ ಮಳೆ ಆಗುವ ಸಾಧ್ಯತೆ ಇದೆ. ತಮಿಳುನಾಡಿನ ಕರಾವಳಿ ಮತ್ತು ಒಳನಾಡಿನ ಚೆನ್ನೈ, ಕಡಲೂರು ಮತ್ತು ನಾಗಪಟ್ಟಣಂನಲ್ಲಿ ಭಾರೀ ಮಳೆ ಆಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಕೇರಳದಲ್ಲಿ ಅಕ್ಟೋಬರ್ 22 ರಿಂದ 24 ರವರೆಗೆ ಭಾರೀ ಮಳೆ ಆಗಲಿದೆ. ಇಲ್ಲಿನ ಇಡುಕ್ಕಿ, ವಯನಾಡ್ ಮತ್ತು ಕೋಝಿಕ್ಕೋಡ್ ಸೇರಿದಂತೆ ವಿವಿಧ ಪ್ರದೇಶದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 25 ರವರೆಗೆ ಮಿಂಚು ಗುಡುಗು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದೆ.
ಆಂಧ್ರಪ್ರದೇಶದ ಕರಾವಳಿ ಮತ್ತು ರಾಯಲಸೀಮಾ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ. ಅಕ್ಟೋಬರ್ 22 ಮತ್ತು 25 ರ ನಡುವೆ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಚಿತ್ತೂರು ಮತ್ತು ನೆಲ್ಲೂರು ಮುಂತಾದ ಪ್ರದೇಶಗಳಲ್ಲೂ ಮಳೆ ನಿರೀಕ್ಷಿಸಲಾಗಿದೆ. ಅಕ್ಟೋಬರ್ 23 ರಿಂದ 25 ರವರೆಗೆ ತೆಲಂಗಾಣದಲ್ಲಿಯೂ ಸಹ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಇನ್ನು ಒಡಿಶಾ, ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢ ಸೇರಿದಂತೆ ವಿವಿಧ ಭಾಗದಲ್ಲಿ ಅಕ್ಟೋಬರ್ 24 ರವರೆಗೆ ಮಿಂಚು ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗೋವಾ ಹಾಗೂ ಮಹಾರಾಷ್ಟ್ರದ ವಿವಿಧ ಪ್ರದೇಶದಲ್ಲಿ ಧಾರಾಕಾರ ಮಳೆ ಇರಲಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ಪ್ರದೇಶದಲ್ಲೂ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.












Click it and Unblock the Notifications