ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಮಹಾ' ಪುಂಡರಿಗೆ ಎಚ್ಚರಿಕೆ ಕೊಟ್ಟ ಆರಗ ಜ್ಞಾನೇಂದ್ರ!

|
Google Oneindia Kannada News

ಬೆಳಗಾವಿ (ಕರ್ನಾಟಕ) ಡಿಸೆಂಬರ್ 6: ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ವಿವಾದ ತಾರಕ್ಕೇರುತ್ತಿದೆ. ಕರ್ನಾಟಕದ ಬಸ್‌ಗಳ ಮೇಲೆ ಕಲ್ಲು ತೂರಾಟ, ಹಲ್ಲೆಯಂತಹ ಘಟನೆಗಳು ಮುನ್ನೆಲೆಗೆ ಬರುತ್ತಿವೆ. ಇದರಿಂದ ಗೃಹ ಸಚಿವ ಆರಗ ಜ್ಞಾನೇಂದ್ರ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ. ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಅವರು 'ಬೆಳಗಾವಿಗೆ ಬಂದು ಸುಮ್ಮನ್ನಿದ್ದವರನ್ನು ಕೆಣಕಿದರೆ, ಜನರ ಭಾವನೆಗಳನ್ನು ಕೆರಳಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು' ಎಂದು ಆರಗ ಜ್ಞಾನೇಂದ್ರ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಬೆಳಗಾವಿಯ ಗೋಗ್ಟೆ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಕನ್ನಡ ಬಾವುಟ ಹಿಡಿದು ಸಂಭ್ರಮಿಸಿದ ದ್ವಿತೀಯ ಪಿಯುಸಿ ವಿದ್ಯಾರ್ಥಿಗೆ ಮಹಾರಾಷ್ಟ್ರ ಬೆಂಬಲಿಸುವ ಸಹಪಾಠಿಗಳು ಥಳಿಸಿದ್ದಾರೆ. ಈ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆಯನ್ನು ಖಂಡಿಸಿ ಕರವೇ ಕಾರ್ಯಕರ್ತರು ಕಳೆದ ಕೆಲ ದಿನದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದೂ ಕೂಡ ಕನ್ನಡ ಪರ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಮಹಾರಾಷ್ಟ್ರ ಸಚಿವರು ಕರ್ನಾಟಕಕ್ಕೆ ಆಗಮಿಸುವುದನ್ನು ತಡೆಯಲಾಯಿತು.

ಬೆಳಗಾವಿ ಗಡಿಯಲ್ಲಿ ಕನ್ನಡ ಕಾರ್ಯಕರ್ತರ ಪ್ರತಿಭಟನೆ: ಶರದ್‌ ಪವಾರ್‌ ಕೆಂಡಾಮಂಡಲ ಬೆಳಗಾವಿ ಗಡಿಯಲ್ಲಿ ಕನ್ನಡ ಕಾರ್ಯಕರ್ತರ ಪ್ರತಿಭಟನೆ: ಶರದ್‌ ಪವಾರ್‌ ಕೆಂಡಾಮಂಡಲ

ಬೆಳಗಾವಿಯಲ್ಲಿ ಮಹಾರಾಷ್ಟ್ರ ಸಚಿವರು ಆಗಮಿಸುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡ ಸಚಿವ ಶಂಭುರಾಜ್ ದೇಸಾಯಿ ಬಾರದಂತೆ ಎಚ್ಚರಿಕೆ ನೀಡಿದ್ದರು. ಎಚ್ಚರಿಕೆಯ ಬಳಿಕವೂ ಬೆಳಗಾವಿಗೆ ಬಂದೆ ಬರುತ್ತೇವೆ ಎಂದು ಮಹಾರಾಷ್ಟ್ರ ಸಚಿವರು ಹೇಳಿದ್ದ ಹಿನ್ನೆಲೆಯಲ್ಲಿ ಬೆಳಗಾವಿ ಡಿಸಿ ನಿರ್ಬಂಧ ಹೇರಿದ್ದರು.

Araga Jnanendra warning to Maharashtra thugs!

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್

ಅಂಗಳದಲ್ಲಿರುವಾಗಲೇ ಬೆಳಗಾವಿಗೆ ಭೇಟಿ ನೀಡಿಯೇ ತೀರುತ್ತೇವೆ, ನಮ್ಮನ್ನು ಯಾರೂ ತಡೆಯಲಾಗದು ಎಂದು ಹೇಳಿದ್ದೆ ಮಹಾರಾಷ್ಟ್ರ ಸಚಿವರು, ಇದೀಗ ಕನ್ನಡಿಗರ ಹೋರಾಟಕ್ಕೆ ಮಣಿದಂತಿದ್ದು, ಬೆಳಗಾವಿ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಬೆಳಗಾವಿ ಭೇಟಿ ರದ್ದುಗೊಳಿಸಿರುವುದನ್ನು ಸ್ವತಃ ಮಹಾರಾಷ್ಟ್ರ ಸಚಿವ ಶಂಭುರಾಜ್ ದೇಸಾಯಿ ಅವರು, ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡುವ ವೇಳೆ ಖಚಿತಪಡಿಸಿದ್ದಾರೆ.

ಕರ್ನಾಟಕದ ಕೆಲವು ಹಳ್ಳಿಗಳು ಸೇರಿದ ಕೆಲ ಜಿಲ್ಲೆಗಳು ಮಹಾರಾಷ್ಟ್ರಕ್ಕೆ ಸೇರಬೇಕೆಂದು ಮಹಾರಾಷ್ಟ್ರ ಸರ್ಕಾರ ವಾದಿಸುತ್ತಿದೆ. ಮಹಾರಾಷ್ಟ್ರದ ಕೆಲವು ಹಳ್ಳಿಗಳು ಮತ್ತು ಜಿಲ್ಲೆಗಳು ಕರ್ನಾಟಕ್ಕೆ ಸೇರಬೇಕೆಂದು ಕರ್ನಾಟಕ ಸರ್ಕಾರ ವಾದಿಸುತ್ತಿದೆ. ಈ ಕುರಿತು ನೇಮಿಸಲಾಗಿದ್ದ ಮಹಾಜನ್ ಆಯೋಗವು "ಕರ್ನಾಟಕದಲ್ಲಿನ ಕೆಲವು ತಾಲ್ಲೂಕುಗಳು ಮಹಾರಾಷ್ಟ್ರಕ್ಕೆ ಹೋಗಲಿ ಮತ್ತು ಮಹಾರಾಷ್ಟ್ರದ ಕೆಲ ತಾಲ್ಲೂಕುಗಳು ಕರ್ನಾಟಕಕ್ಕೆ ಬರಲಿ" ಎಂದು ವರದಿ ಸಲ್ಲಿಸಿತ್ತು. ಇದನ್ನು ಒಪ್ಪದ ಮಹಾರಾಷ್ಟ್ರ ಸರ್ಕಾರ 2004ರಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

English summary
Araga Jnanendra has warned Maharashtra thugs as the border dispute between Maharashtra and Karnataka is escalating.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X