ಅರಾವಳಿ ಪರ್ವತ ಶ್ರೇಣಿ ಗಣಿಗಾರಿಕೆ: ಜನಾಂದೋಲನಕ್ಕೆ ಜಯ, ಸುಪ್ರೀಂ ಕೋರ್ಟ್ ಹೊಸ ಆದೇಶ
ನವದೆಹಲಿ: ರಾಜಸ್ಥಾನದ ಅರಾವಳಿ ಪರ್ವತ ಶ್ರೇಣಿ ಗಣಿಗಾರಿಕೆ ವಿಚಾರದಲ್ಲಿ ಜನರ ಆಂದೋಲನಕ್ಕೆ ಜಯ ಸಿಕ್ಕಿದೆ. ಅರಾವಳಿ ಪವರ್ತ ಶ್ರೇಣಿಯಲ್ಲಿ ಗಣಿಗಾರಿಕೆಗೆ ಅವಕಾಶ ಕಲ್ಪಿಸುವ (ನಿಗದಿತ ಮಿತಿಯನ್ನು ತೆಗೆದು ಹಾಕಿದ್ದು) ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಪರಿಸರವಾದಿಗಳು ಹಾಗೂ ರಾಜಸ್ಥಾನದ ಜನ ಸೇರಿದಂತೆ ದೇಶದಾದ್ಯಂತ ವಿರೋಧ ವ್ಯಕ್ತವಾಗಿತ್ತು. ಇದೀಗ ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ದೆಹಲಿಗೆ ಕೆಲವೇ ಕಿ.ಮೀ ದೂರದಲ್ಲಿರುವ ಅರಾವಳಿ ಪರ್ವತ ಶ್ರೇಣಿಯ ಗಣಿಗಾರಿಕೆಯ ಬಗ್ಗೆ ಪರಿಷ್ಕೃತ ವ್ಯಾಖ್ಯಾನವನ್ನು ಕೇಂದ್ರ ಸರ್ಕಾರ ನೀಡಿತ್ತು. ಇದನ್ನು ಸುಪ್ರೀಂ ಕೋರ್ಟ್ ಕಳೆದ ತಿಂಗಳು ಅಂಗೀಕರಿಸಿತ್ತು. ಇದೀಗ ತನ್ನದೇ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ತಡೆಹಿಡಿದಿದೆ. ಈ ನಿರ್ಧಾರವು ಪರಿಸರ ವ್ಯವಸ್ಥೆಯ ಮೇಲೆ ಪರಿಣಾಮ ಬೀರಲಿದೆ. ಅಲ್ಲದೇ ವಿಶಾಲ ಪ್ರದೇಶಗಳಲ್ಲಿ ಅಕ್ರಮ ಮತ್ತು ಅನಿಯಂತ್ರಿತ ಗಣಿಗಾರಿಕೆಗೆ ಕಾರಣವಾಗಲಿದೆ ಎಂದು ಪರಿಸರವಾದಿಗಳು ಮತ್ತು ವಿಜ್ಞಾನಿಗಳು ಆರೋಪಿಸಿದ್ದರು. ಹಲವರು ಬೀದಿಗೆ ಇಳಿದು ಪ್ರತಿಭಟನೆಗಳನ್ನು ನಡೆಸಿದ್ದರು.

ಸೋಮವಾರ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ರಜಾಕಾಲದ ಪೀಠವು, ಸಮಿತಿಯ ಶಿಫಾರಸುಗಳು ಮತ್ತು ಈ ನ್ಯಾಯಾಲಯದ ನಿರ್ದೇಶನಗಳನ್ನು ಸ್ಥಗಿತಗೊಳಿಸುವುದು ಅಗತ್ಯವೆಂದು ನಾವು ಪರಿಗಣಿಸುತ್ತೇವೆ ಎಂದು ಹೇಳಿದೆ. ಈ ಮೂಲಕ ಜನರ ಹೋರಾಟಕ್ಕೆ ಗೆಲುವಾಗಿದೆ. ಇನ್ನು ಇದೇ ಸಂದರ್ಭದಲ್ಲಿ ರಾಜಸ್ಥಾನದ ಅರಾವಳಿ ಪರ್ವತ ಶ್ರೇಣಿಯ ನವೀಕರಿಸಿದ ವ್ಯಾಖ್ಯಾನದ ಪ್ರಕಾರ ಪರಿಶೀಲಿಸಬೇಕಾದ ಅಥವಾ ಮರುಪರಿಶೀಲಿಸಬೇಕಾದ ವಿಷಯಗಳ ಅಧ್ಯಯನಕ್ಕಾಗಿ ಹೊಸ ಸಮಿತಿಯನ್ನು ರಚಿಸುವಂತೆ ನ್ಯಾಯಾಲಯ ಆದೇಶಿಸಿದೆ.
ನಾಲ್ಕು ರಾಜ್ಯಗಳಿಗೆ ನೋಟಿಸ್
ಇನ್ನು ಅರಾವಳಿ ಪರ್ವತ ಶ್ರೇಣಿಗಳನ್ನು ಒಳಗೊಂಡಿರುವ ನಾಲ್ಕು ಪ್ರಮುಖ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ. ರಾಜಸ್ಥಾನ, ಗುಜರಾತ್, ದೆಹಲಿ ಹಾಗೂ ಹರಿಯಾಣಕ್ಕೆ ನೋಟಿಸ್ ಜಾರಿಗೊಳಿಸಲಾಗಿದೆ. ಅಲ್ಲದೇ ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರಕ್ಕೂ ನೋಟಿಸ್ ಜಾರಿ ಮಾಡಲಾಗಿದೆ. ಮುಂದಿನ ವಿಚಾರಣೆಯನ್ನು ಜನವರಿ 21ಕ್ಕೆ ನಿಗದಿ ಮಾಡಲಾಗಿದೆ.
ಸ್ವಯಂ ಪ್ರೇರಿತ ದೂರು ದಾಖಲು
ಅರಾವಳಿ ಪರ್ವತ ಶ್ರೇಣಿಗಳಲ್ಲಿ ಹೊಸ ವ್ಯಾಖ್ಯಾನದ ಪ್ರಕಾರ 100 ಮೀ.ಗಿಂತ ಕಡಿಮೆ ಎತ್ತರದ ಗುಡ್ಡಗಾಡು ಪ್ರದೇಶಗಳಲ್ಲಿ ಗಣಿಗಾರಿಕೆಗೆ ಅವಕಾಶ ನೀಡಲಾಗಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಶನಿವಾರ ಅರಾವಳಿ ಪವರ್ತಗಳ ಬದಲಾದ ವ್ಯಾಖ್ಯಾನದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನೆಗಳನ್ನು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆ ಮಾಡಲು ನಿರ್ಧರಿಸಿತ್ತು.
ಕೇಂದ್ರ ಸರ್ಕಾರವು ಹೊಸ ವ್ಯಾಖ್ಯಾನವನ್ನು ಸೂಚಿಸಿದ ನಂತರ ವಿವಾದ ಪ್ರಾರಂಭವಾಗಿತ್ತು. ಇದನ್ನು ಸಾಕಷ್ಟು ಪರಿಶೀಲನೆ ಮಾಡದೆ ಅಥವಾ ಸಾರ್ವಜನಿಕ ಚರ್ಚೆಗೆ ಅವಕಾಶ ನೀಡಿದೆ ಜಾರಿ ಮಾಡಲಾಗುತ್ತಿದೆ ಎನ್ನುವ ವಿರೋಧವು ವ್ಯಕ್ತವಾಗಿತ್ತು.
ಕೇಂದ್ರದಿಂದ ಗಣಿಗಾರಿಕೆ ನಿಷೇಧ
ಅರಾವಳಿ ಪರ್ವತ ಶ್ರೇಣಿಗಳ ಗಣಿಗಾರಿಕೆಗೆ ಸಂಬಂಧಿಸಿದಂತೆ ವಿವಾದಗಳು ಹೆಚ್ಚಾದ ಬೆನ್ನಲ್ಲೇ ಡಿಸೆಂಬರ್ 25ರಂದು ಕೇಂದ್ರ ಸರ್ಕಾರವು ಅರಾವಳಿಗಳಲ್ಲಿ ಹೊಸ ಗಣಿಗಾರಿಕೆ ಗುತ್ತಿಗೆಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಆದೇಶಿಸಿತು. ಈ ಸಂಬಂಧ ಅರಾವಳಿ ಪವರ್ತ ಶ್ರೇಣಿ ವ್ಯಾಪ್ತಿಯ ರಾಜ್ಯಗಳಿಗೆ ಸೂಚನೆ ನೀಡಿತ್ತು. ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಗಣಿಗಾರಿಕೆ ಪ್ರದೇಶದಲ್ಲಿ ರಾಜ್ಯ ಸರ್ಕಾರಗಳು ಎಲ್ಲಾ ಪರಿಸರ ಸುರಕ್ಷತೆಗಳೊಂದಿಗೆ ಕಟ್ಟುನಿಟ್ಟಾದ ನಿಯಮ ಪಾಲನೆ ಮಾಡಬೇಕು ಎಂದು ಹೇಳಲಾಗಿದೆ.
ಅರಾವಳಿ ಪರ್ವತ ಶ್ರೇಣಿ ಏನಿದು ?
ಅರಾವಳಿ ಪರ್ವತ ಶ್ರೇಣಿಯು ಉತ್ತರ ಭಾರತದ ಹಸಿರು ತಡೆಗೋಡೆ ಅಂತಲೇ ಖ್ಯಾತಿ ಗಳಿಸಿದೆ. ದೆಹಲಿ ಸಮೀಪದಲ್ಲಿ ಪ್ರಾರಂಭವಾಗಿ ಹರಿಯಾಣ, ರಾಜಸ್ಥಾನ ಮತ್ತು ಗುಜರಾತ್ ಮೂಲಕ ಹಾದುಹೋಗುತ್ತದೆ. ಈ ಪವರ್ತ ಶ್ರೇಣಿಯು 670 ಕಿಮೀ ಉದ್ದವಾಗಿದೆ.
ಇದು ಭಾರತದ ಎರಡು ಶತಕೋಟಿ ವರ್ಷಗಳಷ್ಟು ಹಳೆಯದಾದ ಪರ್ವತ ಶ್ರೇಣಿಯಾಗಿದೆ. ದೆಹಲಿ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಈ ಗಣಿಗಾರಿಕೆ ಬೇಡ ಎಂದು ಜನ ಬೀದಿಗೆ ಇಳಿದು ಪ್ರತಿಭಟನೆ ಮಾಡಿದ್ದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications