ಅರಾವಳಿ ಪರ್ವತ ಶ್ರೇಣಿ: ನಿಲ್ಲದ ಅಕ್ರಮ ಗಣಿಗಾರಿಕೆ, ಕಾಂಗ್ರೆಸ್ - ಬಿಜೆಪಿ ಯಾವ ಅವಧಿಯಲ್ಲಿ ಹೆಚ್ಚು
ರಾಜಸ್ಥಾನ: ರಾಜಸ್ಥಾನದ ಅರಾವಳಿ ಪರ್ವತ ಶ್ರೇಣಿಯಲ್ಲಿ ಗಣಿಗಾರಿಕೆ ವಿಚಾರವು ಇದೀಗ ಹಲವು ಹೊಸ ಚರ್ಚೆಗಳಿಗೆ ಕಾರಣವಾಗಿದೆ. ಅರಾವಳಿ ಪರ್ವತ ಶ್ರೇಣಿಯಲ್ಲಿ ಅಕ್ರಮ ಗಣಿಗಾರಿಕೆ ಅವ್ಯಾತವಾಗಿ ನಡೆದಿದೆ ಎನ್ನುವ ವಿಚಾರವು ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ. ರಾಜಸ್ಥಾನದಲ್ಲಿ ಕಳೆದ ಏಳು ವರ್ಷಗಳಲ್ಲಿ ಅಕ್ರಮ ಗಣಿಗಾರಿಕೆ, ಸಾಗಣೆ, ದಾಸ್ತಾನು ಇತ್ಯಾದಿಗಳಿಗೆ ಸಂಬಂಧಿಸಿದಂತೆ 7,173 ಎಫ್‌ಐಆರ್‌ಗಳು ವರದಿಯಾಗಿವೆ. ಅವುಗಳಲ್ಲಿ 4,181 ಅರಾವಳಿ ಜಿಲ್ಲೆಗಳಲ್ಲಿ ಮಾತ್ರ ದಾಖಲಾಗಿವೆ ಎಂದು The India Express ವರದಿ ಮಾಡಿದೆ.
ರಾಜಸ್ಥಾನದ ಅರಾವಳಿ ಪ್ರದೇಶದಲ್ಲಿ ಗಣಿಗಾರಿಕೆ ವಿಚಾರದಲ್ಲಿ ಕೆಲವು ಪ್ರಮುಖ ನಿಯಮಗಳನ್ನು ಸಡಿಸಲಾಗಿದ್ದು ಇದು ದೇಶದಾದ್ಯಂತ ಭಾರೀ ಚರ್ಚೆ ಹಾಗೂ ಆಕ್ರೋಶಕ್ಕೆ ಕಾರಣವಾಗಿತ್ತು. ಕಳೆದ ಏಳು ವರ್ಷಗಳಲ್ಲಿ ರಾಜಸ್ಥಾನವೊಂದರಲ್ಲೇ 71,322 ಅಕ್ರಮ ಗಣಿಗಾರಿಕೆ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಇವುಗಳಲ್ಲಿ ಪ್ರಮುಖ ಮತ್ತು ಸಣ್ಣ ಉಲ್ಲಂಘನೆಗಳು ಸೇರಿವೆ. ಇವುಗಳಲ್ಲಿ 40,175 ಪ್ರಕರಣಗಳು ಅರಾವಳಿ ಜಿಲ್ಲೆಗಳಿಂದ ಮಾತ್ರ ವರದಿಯಾಗಿವೆ.

ಐದು ವರ್ಷಗಳ ಕಾಂಗ್ರೆಸ್ ಆಡಳಿತ ಮತ್ತು ಎರಡು ವರ್ಷಗಳ ಬಿಜೆಪಿ ಸರ್ಕಾರದ ಅಂಕಿ - ಅಂಶಗಳನ್ನು ಹೋಲಿಸಿದ ನಂತರ ಈ ಭಾಗದ ಮಾಜಿ ಶಾಸಕ ರಾಮ್‌ಲಾಲ್ ಶರ್ಮಾ ಅವರು, ಅರಾವಳಿಯಲ್ಲಿ ಒಂದೇ ಒಂದು ಕಲ್ಲಿಗೆ ಹಾನಿಯಾಗಬಾರದು ಎಂಬುದು ರಾಜಸ್ಥಾನ ಸರ್ಕಾರ ಮತ್ತು ಮುಖ್ಯಮಂತ್ರಿಯ ಸ್ಪಷ್ಟ ಉದ್ದೇಶವಾಗಿದೆ ಎಂದು ಹೇಳಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಗಣಿಗಾರಿಕೆ ಮಾಫಿಯಾ ವಿರುದ್ಧ ಬಿಜೆಪಿ ಸರ್ಕಾರ ನಿರ್ಣಾಯಕ ಕ್ರಮ ಕೈಗೊಂಡಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.
ಶರ್ಮಾ ಅವರು ಹಂಚಿಕೊಂಡ ಅಧಿಕೃತ ದತ್ತಾಂಶದ ಪ್ರಕಾರ, ಡಿಸೆಂಬರ್ 15, 2018 ಮತ್ತು ಡಿಸೆಂಬರ್ 14, 2023 ರ ನಡುವೆ ಅರಾವಳಿ ಜಿಲ್ಲೆಗಳಲ್ಲಿ 29,209 ಅಕ್ರಮ ಗಣಿಗಾರಿಕೆ ಪ್ರಕರಣಗಳು ವರದಿಯಾಗಿವೆ. ಆದರೆ, ಈ ಅಂಕಿ ಅಂಶವು ಡಿಸೆಂಬರ್ 15, 2023 ರಿಂದ ಡಿಸೆಂಬರ್ 15, 2025 ರವರೆಗಿನ ಶರ್ಮಾ ಸರ್ಕಾರದ ಮೊದಲ ಎರಡು ವರ್ಷಗಳಲ್ಲಿ 10,966 ಆಗಿತ್ತು. ರಾಜಸ್ಥಾನದ ಅರಾವಳಿ ಪಟ್ಟಿಯಲ್ಲಿ 20 ಜಿಲ್ಲೆಗಳಿವೆ.
ಕಾಂಗ್ರೆಸ್ ಆಳ್ವಿಕೆಯಲ್ಲಿ ಅರಾವಳಿ ಜಿಲ್ಲೆಗಳಲ್ಲಿ ಅಕ್ರಮ ಗಣಿಗಾರಿಕೆ ಚಟುವಟಿಕೆಗಳಿಗೆ ಸಂಬಂಧಿಸಿದಂತೆ 3,179 ಎಫ್‌ಐಆರ್‌ಗಳು ದಾಖಲಾಗಿದ್ದರೆ, ಬಿಜೆಪಿ ಸರ್ಕಾರದ ಎರಡು ವರ್ಷಗಳಲ್ಲಿ 1,002 ಎಫ್‌ಐಆರ್‌ಗಳು ದಾಖಲಾಗಿವೆ. ವರದಿಯಾದ ಪ್ರಕರಣಗಳಲ್ಲಿ ಅಕ್ರಮ ಗಣಿಗಾರಿಕೆ, ಸಾಗಣೆ ಮತ್ತು ಸಂಗ್ರಹಣೆ ಸೇರಿವೆ. ಅವುಗಳಲ್ಲಿ ಹೆಚ್ಚಿನವು ರಾಜಿ ಮಾಡಿಕೊಳ್ಳಬಹುದಾದವು ಮತ್ತು ಹಲ್ಲೆ, ಕಳ್ಳತನ ಇತ್ಯಾದಿಗಳು ನಡೆದರೆ ಅದು ಎಫ್‌ಐಆರ್ ಆಗಿ ಪರಿವರ್ತನೆಯಾಗಬಹುದು ಎಂದು ಅವರು ಹೇಳಿದ್ದಾರೆ.
ಈ ವರ್ಷದ ಆರಂಭದಲ್ಲಿ ವಿರೋಧ ಪಕ್ಷದ ನಾಯಕ ಟಿಕಾ ರಾಮ್ ಜುಲ್ಲಿ ಅವರು ರಾಜಸ್ಥಾನದ ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದು ಅದರಲ್ಲಿ 2024 ರಲ್ಲಿ ಗಣಿಗಾರಿಕೆ ಮಾಫಿಯಾದಿಂದ 311 ಅಧಿಕಾರಿಗಳು ಮತ್ತು ಕಾರ್ಮಿಕರ ವಿರುದ್ಧ 93 ದಾಳಿಗಳು ನಡೆದಿವೆ ಎಂದು ಹೇಳಿದ್ದಾರೆ.
ಒಟ್ಟಾರೆಯಾಗಿ ರಾಜ್ಯದಲ್ಲಿ ಕಳೆದ ಏಳು ವರ್ಷಗಳಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ 637.16 ಕೋಟಿ ರೂ. ದಂಡವನ್ನು ಸಂಗ್ರಹಿಸಲಾಗಿದೆ. ಇದರಲ್ಲಿ ಕಾಂಗ್ರೆಸ್ ಆಳ್ವಿಕೆಯಲ್ಲಿದ್ದ ಅರಾವಳಿ ಜಿಲ್ಲೆಗಳಿಂದ 231.75 ಕೋಟಿ ರೂ.ಗಳನ್ನು ಮತ್ತು ಪ್ರಸ್ತುತ ಬಿಜೆಪಿ ಸರ್ಕಾರದ ಅವಧಿಯಲ್ಲಿ 136.78 ಕೋಟಿ ರೂ.ಗಳನ್ನು ಸಂಗ್ರಹಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ.
ರಾಜ್ಯಾದ್ಯಂತ ಅಕ್ರಮ ಗಣಿಗಾರಿಕೆಗಾಗಿ ಏಳು ವರ್ಷಗಳಲ್ಲಿ 3,736 ಜನರನ್ನು ಬಂಧಿಸಲಾಗಿದೆ. ಇದರಲ್ಲಿ ಅಶೋಕ್ ಗೆಹ್ಲೋಟ್ ಸರ್ಕಾರದ ಅವಧಿಯಲ್ಲಿ 1,415 ಜನರನ್ನು ಮತ್ತು ಶರ್ಮಾ ಸರ್ಕಾರದ ಅವಧಿಯಲ್ಲಿ 300 ಜನರನ್ನು ಅರಾವಳಿ ಜಿಲ್ಲೆಗಳಿಂದ ಬಂಧಿಸಲಾಗಿದೆ. ಕಳೆದ ಏಳು ವರ್ಷಗಳಲ್ಲಿ ರಾಜ್ಯಾದ್ಯಂತ 70,399 ವಾಹನಗಳು ಹಾಗೂ ಯಂತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳಲ್ಲಿ, 29,138 ವಾಹನಗಳು ಕಾಂಗ್ರೆಸ್ ಆಳ್ವಿಕೆಯಲ್ಲಿದ್ದ ಅರಾವಳಿ ಜಿಲ್ಲೆಗಳಿಂದ ಮತ್ತು 10,616 ಬಿಜೆಪಿ ಸರ್ಕಾರದ ಅಡಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications