ಬೂಸ್ಟರ್ ಡೋಸ್ ಅಗತ್ಯಗಳ ಬಗ್ಗೆ ಪರಿಶೀಲಿಸುತ್ತೇವೆ ಎಂದ ಕೇಂದ್ರ
ನವದೆಹಲಿ, ಡಿಸೆಂಬರ್ 14: ಕೊರೊನಾವನ್ನು ಸಂಪೂರ್ಣವಾಗಿ ತೊಡೆದುಹಾಕಲು ಬೂಸ್ಟರ್ ಡೋಸ್‌ಗಳ ಅಗತ್ಯವಿದೆಯೇ ಎಂಬುದನ್ನು ಪರಿಶೀಲಿಸುತ್ತಿದ್ದೇವೆ ಎಂದು ದೆಹಲಿ ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದೆ. ನ್ಯಾಷನಲ್ ಟೆಕ್ನಿಕಲ್ ಅಡ್ವೈಸರಿ ಗ್ರೂಪ್ ಆಫ್ ಇಮ್ಯೂನೈಸೇಷನ್ ಮತ್ತು ನ್ಯಾಷನಲ್ ಎಕ್ಸ್‌ಪರ್ಟ್ ಗ್ರೂಪ್ ಆನ್ ಬ್ಯಾಕ್ಸಿನ್ ಅಡ್ಮಿನಿಸ್ಟ್ರೇಷನ್ ಫಾರ್ ಕೋವಿಡ್ ಬೂಸ್ಟರ್ ಡೋಸ್‌ಗಳ ಅಗತ್ಯಗಳ ಬಗ್ಗೆ ಪರಿಶೀಲಿಸುತ್ತಿದೆ ಎಂದಿದೆ.
ಕೇಂದ್ರ ಸರ್ಕಾರದ ಸ್ಥಾಯಿ ಸಮಿತಿ ವಕೀಲ ಅನುರಾಗ್ ಅಹ್ಲುವಾಲಿಯಾ ಸಲ್ಲಿಸಿದ ಅಫಿಡವಿಟ್‌ನಲ್ಲಿ ಎನ್‌ಟಿಎಜಿಐ ಹಾಗೂ ಎನ್‌ಇಜಿವಿಎಸಿ ಕೋವಿಡ್ ಲಸಿಕೆಗಳ ಡೋಸಿಂಗ್ ವೇಳಾಪಟ್ಟಿ, ಬೂಸ್ಟರ್ ಡೋಸ್‌ಗಳ ಅಗತ್ಯತೆಗೆ ಸಂಬಂಧಿಸಿದಂತೆ ಚರ್ಚಿಸುತ್ತಿವೆ ಎಂದು ಹೇಳಿದ್ದಾರೆ.
ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ , ದೇಶದಲ್ಲಿ ಸಾಕಷ್ಟು ಲಸಿಕೆ ದಾಸ್ತಾನು ಇದೆ ಎಂದು ಉಲ್ಲೇಖಿಸಿ, ಬೂಸ್ಟರ್ ಡೋಸ್‌ಗಾಗಿ ಕೋವಿಶೀಲ್ಡ್‌ಗೆ ಅನುಮೋದನೆ ನೀಡುವಂತೆ, ಡ್ರಗ್ ರೆಗ್ಯುಲೇಟರ್ ಆಫ್ ಇಂಡಿಯಾವನ್ನು ಕೇಳಿದೆ. ಮೂಲಗಳ ಪ್ರಕಾರ, ಕೊರೊನಾ ವೈರಸ್‌ನ ಹೊಸ ರೂಪಾಂತರವನ್ನು ಎದುರಿಸಲು ಬೂಸ್ಟರ್ ಶಾಟ್‌ನ ಅಗತ್ಯವಿದೆ ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಹೇಳಿದೆ.

ಭಾರತದ ಡಿಸಿಜಿಐಗೆ ಕಳುಹಿಸಿದ ಅರ್ಜಿಯಲ್ಲಿ, ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಯುಕೆ ಮೆಡಿಸಿನ್ಸ್ ಮತ್ತು ಹೆಲ್ತ್ ಕೇರ್ ಪ್ರಾಡಕ್ಟ್ಸ್ ರೆಗ್ಯುಲೇಟರ್ ಈಗಾಗಲೇ ಬೂಸ್ಟರ್ ಡೋಸ್ ಅನ್ನು ಅನುಮೋದಿಸಿದೆ ಎಂದು ಹೇಳಿದೆ. AstraZeneca ChAdOx1 nCoV-19 ಲಸಿಕೆಯ ಬೂಸ್ಟರ್ ಡೋಸ್ ನೀಡಲಾಗುತ್ತಿದೆ ಎಂದು ಹೇಳಿದೆ. ಕೋವಿಶೀಲ್ಡ್ ಎರಡೂ ಡೋಸ್ ಗಳನ್ನು ಈಗಾಗಲೇ ಪಡೆದಿರುವ ನಾಗರಿಕರು ನಿರಂತರವಾಗಿ ಬೂಸ್ಟರ್ ಡೋಸ್ ಗೆ ಬೇಡಿಕೆ ಇಡುತ್ತಿದ್ದಾರೆ ಎಂದು ಅದು ಹೇಳಿದೆ.
ಬೂಸ್ಟರ್ ಡೋಸ್‌ಗೆ ಬೇಡಿಕೆ ಇಟ್ಟಿರುವ ದೇಶಗಳು: ಈ ಸಾಂಕ್ರಾಮಿಕ ರೋಗದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಮೂರನೇ ಡೋಸ್ ಅಥವಾ ಬೂಸ್ಟರ್ ಡೋಸ್‌ನಿಂದ ವಂಚಿತರಾಗಬಾರದು ಎಂಬುದು ಈ ಸಮಯದ ಅಗತ್ಯವಾಗಿದೆ ಮತ್ತು ಪ್ರತಿಯೊಬ್ಬ ವ್ಯಕ್ತಿಯ ಆರಿಗ್ಯದ ಹಕ್ಕಾಗಿದೆ ಎಂದು DCGI ಹೇಳಿದೆ.
ಬೂಸ್ಟರ್ ಡೋಸ್‌ಗಳ ಅಗತ್ಯತೆಯ ವೈಜ್ಞಾನಿಕ ಪುರಾವೆಗಳನ್ನು ಪ್ರತಿರಕ್ಷಣೆ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು ಪರಿಗಣಿಸುತ್ತಿದೆ ಎಂದು ಕೇಂದ್ರ ಸರ್ಕಾರ ಈ ಮೊದಲು ಸಂಸತ್ತಿನಲ್ಲಿ ತಿಳಿಸಿದೆ. ಇತ್ತೀಚೆಗೆ, ಕೇರಳ, ರಾಜಸ್ಥಾನ, ಕರ್ನಾಟಕ ಮತ್ತು ಛತ್ತೀಸ್‌ಗಢವು SARS-CoV-2 ನ ಹೊಸ ರೂಪಾಂತರದ 'ಓಮಿಕ್ರಾನ್' ನ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು ಬೂಸ್ಟರ್ ಡೋಸ್‌ಗಳನ್ನು ಅನುಮತಿಸುವ ಬಗ್ಗೆ ನಿರ್ಧರಿಸಲು ಕೇಂದ್ರವನ್ನು ಒತ್ತಾಯಿಸಿವೆ.
ಈ ವಿಷಯವನ್ನು ನ್ಯಾಯಾಲಯವೂ ಹೇಳಿದೆ : ಮತ್ತೊಂದೆಡೆ, ದೆಹಲಿ ಹೈಕೋರ್ಟ್ ನವೆಂಬರ್ 25 ರಂದು ಆ ಜನರಿಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿತ್ತು. ಎರಡನೇ ಅಲೆಯ ತರಹದ ಪರಿಸ್ಥಿತಿ ಬರಬಾರದು ಹಾಗಾಗಿ ಎರಡೂ ಡೋಸ್ ಕೊರೊನಾ ವೈರಸ್ ಲಸಿಕೆ ಪಡೆದವರಿಗೆ ಮೂರನೇ ಡೋಸ್ ನೀಡಬಹುದು. ಈ ನಿಟ್ಟಿನಲ್ಲಿ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಕೋರ್ಟ್ ಹೇಳಿತ್ತು.












Click it and Unblock the Notifications