ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಕೊರೊನಾ ಸೋಂಕು ಹೆಚ್ಚಳಕ್ಕೆ ರೂಪಾಂತರಿ ಸೋಂಕು ಕಾರಣವಲ್ಲ

|
Google Oneindia Kannada News

ನವದೆಹಲಿ, ಮಾರ್ಚ್ 03: ಭಾರತದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಲು ಮದುವೆ, ಪಾರ್ಟಿಗಳೇ ಕಾರಣ ಎಂದು ಹೇಳಲಾಗುತ್ತಿದೆ. ಭಾರತದಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚಾಗುತ್ತಿರುವುದಕ್ಕೆ ರೂಪಾಂತರಿ ಸೋಂಕು ಕಾರಣವಲ್ಲ, ಮದುವೆ ಸೇರಿದಂತೆ ಇನ್ನಿತರೆ ಕಾರ್ಯಕ್ರಮಗಳಲ್ಲಿ ಜನರು ಭಾಗಿಯಾಗುತ್ತಿದ್ದಾರೆ ಅದರಿಂದ ಸೋಂಕು ಹೆಚ್ಚುತ್ತಿದೆ ಎಂದು ಸರ್ಕಾರ ಹೇಳಿದೆ.

ಕೆಲವು ರಾಜ್ಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್ ಪ್ರಕರಣಗಳು ವಿಪರೀತ ಏರಿಕೆಯಾಗಿದ್ದು, ಕೊರೊನಾ ರೂಪಾಂತರದ ಪಾತ್ರ ಇದರಲ್ಲಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ನೀತಿ ಆಯೋಗದ ಆರೋಗ್ಯ ವಿಭಾಗದ ಸದಸ್ಯ ಡಾ ವಿ ಕೆ ಪೌಲ್ ಹೇಳುತ್ತಾರೆ.

ಇನ್ನು ಒಂದೇ ದಿನವೈರಸ್ 98 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,57,346ಕ್ಕೆ ಏರಿಕೆಯಾಗಿದೆ. ಈ ನಡುವೆ ಒಟ್ಟಾರೆ 1,11,39,516 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 13,123 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,08,12,044ಕ್ಕೆ ಏರಿಕೆಯಾಗಿದೆ.

ಪ್ರಸ್ತುತ ದೇಶದಲ್ಲಿ 1,70,126 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. ಇನ್ನು ಭಾರತದಲ್ಲಿ ಒಂದೇ ದಿನ 7,85,220 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 21,84,03,277 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

7 ವಾರಗಳಲ್ಲಿ ಜಾಗತಿಕವಾಗಿ ಕೊರೊನಾ ಸೋಂಕು ಹೆಚ್ಚಳ,WHO ಆತಂಕ7 ವಾರಗಳಲ್ಲಿ ಜಾಗತಿಕವಾಗಿ ಕೊರೊನಾ ಸೋಂಕು ಹೆಚ್ಚಳ,WHO ಆತಂಕ

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್‌ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,56,20,749 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಕೊರೊನಾ ಲಸಿಕೆಗಾಗಿ ಕೋವಿನ್ ಪೋರ್ಟಲ್‌ನಲ್ಲಿ 50 ಲಕ್ಷ ಜನರ ನೋಂದಣಿಕೊರೊನಾ ಲಸಿಕೆಗಾಗಿ ಕೋವಿನ್ ಪೋರ್ಟಲ್‌ನಲ್ಲಿ 50 ಲಕ್ಷ ಜನರ ನೋಂದಣಿ

 ಸಕ್ರಿಯ ಪ್ರಕರಣಗಳು ಕಡಿಮೆಯಾಗುತ್ತಿದೆ

ಸಕ್ರಿಯ ಪ್ರಕರಣಗಳು ಕಡಿಮೆಯಾಗುತ್ತಿದೆ

ಭಾರತದಲ್ಲಿ ಒಟ್ಟು ಕೋವಿಡ್ ಪ್ರಕರಣಗಳಲ್ಲಿ ಸದ್ಯ ಸಕ್ರಿಯ ಕೇಸುಗಳು ಶೇಕಡಾ 1.51ರಷ್ಟಿದ್ದು ಗುಣಮುಖ ಹೊಂದುತ್ತಿರುವವರ ಸಂಖ್ಯೆ ಶೇಕಡಾ 97ರಷ್ಟಿದೆ. ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಅತಿ ಹೆಚ್ಚು ಶೇಕಡಾ 67.84ರಷ್ಟು ಸಕ್ರಿಯ ಕೋವಿಡ್ ಪ್ರಕರಣಗಳಿವೆ.

 ರಾಜ್ಯಗಳಿಗೆ ಕೇಂದ್ರ ತಂಡ ಭೇಟಿ

ರಾಜ್ಯಗಳಿಗೆ ಕೇಂದ್ರ ತಂಡ ಭೇಟಿ

ರಾಜ್ಯಗಳಿಗೆ ಭೇಟಿ ನೀಡಿರುವ ಕೇಂದ್ರ ತಂಡ ಹಿಂತಿರುಗಿ ಬಂದು ಪ್ರತಿಕ್ರಿಯೆ ಮತ್ತು ವರದಿ ನೀಡಿದ ನಂತರ ಈ ಬಗ್ಗೆ ಸ್ಪಷ್ಟ ಚಿತ್ರಣ ಕಂಡುಬರಲಿದೆ. ಮದುವೆ, ಪಾರ್ಟಿಗಳಿಂದಾಗಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದೆ ಎಂದು ಅನಿಸುತ್ತಿದೆ ಎಂದು ನೀತಿ ಆಯೋಗದ ಆರೋಗ್ಯ ವಿಭಾಗದ ಸದಸ್ಯ ಡಾ ವಿ ಕೆ ಪೌಲ್ ಹೇಳುತ್ತಾರೆ.

ಕೊರೊನಾವೈರಸ್ ಕಥೆ: ಕರ್ನಾಟಕ ಸೇರಿದಂತೆ 7 ರಾಜ್ಯಗಳ ಸ್ಥಿತಿ ಹೀಗೇಕೆ?ಕೊರೊನಾವೈರಸ್ ಕಥೆ: ಕರ್ನಾಟಕ ಸೇರಿದಂತೆ 7 ರಾಜ್ಯಗಳ ಸ್ಥಿತಿ ಹೀಗೇಕೆ?

 ಕಳೆದ ಎರಡು ವಾರಗಳಿಂದ ಕೊರೊನಾ ಸೋಂಕು ಹೆಚ್ಚಳ

ಕಳೆದ ಎರಡು ವಾರಗಳಿಂದ ಕೊರೊನಾ ಸೋಂಕು ಹೆಚ್ಚಳ

ಕಳೆದ ಎರಡು ವಾರಗಳಲ್ಲಿ ದಿನಂಪ್ರತಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ತಮಿಳುನಾಡು ಮತ್ತು ಪಂಜಾಬ್ ರಾಜ್ಯಗಳಲ್ಲಿ ಕೇಂದ್ರ ತಂಡವನ್ನು ನಿಯೋಜಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

 ಭಾರತದಲ್ಲಿ 14,989 ಕೊರೊನಾ ಸೋಂಕಿತರು ಪತ್ತೆ

ಭಾರತದಲ್ಲಿ 14,989 ಕೊರೊನಾ ಸೋಂಕಿತರು ಪತ್ತೆ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,989 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,11,39,516ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

English summary
The government on Tuesday again stressed that the marginal spike in Covid cases daily is not due to new variants and added that it could be because of super spreader events such as weddings.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X