Delhi Crime : ಗನ್ ತೋರಿಸಿ ಕ್ಯಾಬ್‌ನಲ್ಲಿ ಪ್ರಯಾಣಿಸುತ್ತಿದ್ದವರ ದರೋಡೆ: ಎಲ್‌ಜಿ ವಿರುದ್ಧ ಸಿಎಂ ವಾಗ್ದಾಳಿ
ದೆಹಲಿ, ಜೂನ್ 26: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದಿನೇ ದಿನೇ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ನಡು ರಸ್ತೆಯಲ್ಲೇ ಕ್ಯಾಬ್ ಅಡ್ಡಗಟ್ಟಿ, ಮಾರಕಾಸ್ತ್ರ ತೋರಿಸಿ ದರೋಡೆ ಮಾಡಿರುವ ಘಟನೆ ನಡೆದಿದ್ದು, ಜನರನ್ನು ಬೆಚ್ಚಿಬೀಳಿಸಿದೆ. ದರೋಡೆ ಮಾಡುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.
ಶನಿವಾರ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ದೆಹಲಿಯ ಪ್ರಗತಿ ಮೈದಾನದ ಬಳಿಇರುವ ಅಂಡರ್ ಪಾಸ್‌ನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಎರಡು ಬೈಕ್‌ನಲ್ಲಿ ಬರುವ ಗೂಂಡಾಗಳ ಗುಂಪೊಂದು ಚಲಿಸುತ್ತಿದ್ದ ಕ್ಯಾಬ್ ಅನ್ನು ಅಡ್ಡಗಟ್ಟಿ, ಬಂದೂಕು ತೋರಿಸಿ ಕ್ಯಾಬ್‌ನಲ್ಲಿದ್ದ ಪ್ರಯಾಣಿಕರ ಬ್ಯಾಗ್ ಕಿತ್ತುಕೊಂಡು ಪರಾರಿಯಾಗುವ ಸಿಸಿಟಿವಿ ದೃಶ್ಯಾವಳಿಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

ಈ ದೃಶ್ಯಾವಳಿಗಳು ನೋಡುಗರಲ್ಲಿ ಭಯ ಹುಟ್ಟಿಸುವಂತೆ ಮಾಡುತ್ತವೆ. ದೆಹಲಿಯಂತಹ ರಾಜಧಾನಿಯಲ್ಲೇ ಈ ರೀತಿ ರಾಜಾರೋಷವಾಗಿ ನಡುರಸ್ತೆಯಲ್ಲಿ ದರೋಡೆ ಮಾಡಿದರೆ, ಪೊಲೀಸರ ವೈಫಲ್ಯದ ಬಗ್ಗೆ ಕೂಡ ಪ್ರಶ್ನೆಗಳು ಮೂಡುತ್ತವೆ. ಈ ಘಟನೆ ಈಗ ರಾಜಕೀಯ ಮೇಲಾಟದ ಅಸ್ತ್ರವಾಗಿದೆ.
ಎಲ್‌ಜಿ ವಿರುದ್ಧ ದೆಹಲಿ ಸಿಎಂ ವಾಗ್ದಾಳಿ
ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದಾರೆ. ಘಟನೆಯ ಹೊಣೆಯನ್ನು ಲೆಫ್ಟಿನೆಂಟ್ ಗವರ್ನರ್ ಮೇಲೆ ಹಾಕಿರುವ ಅವರು ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿದ್ದಾರೆ.
"ಲೆಫ್ಟಿನೆಂಟ್ ಗವರ್ನರ್ ರಾಜೀನಾಮೆ ನೀಡಿ. ದೆಹಲಿಯ ಜನರಿಗೆ ಸುರಕ್ಷತೆ ಮತ್ತು ಭದ್ರತೆಯನ್ನು ಒದಗಿಸುವವರಿಗೆ ದಾರಿ ಮಾಡಿಕೊಡಿ. ದೆಹಲಿಯನ್ನು ಸುರಕ್ಷಿತವಾಗಿಸಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗದಿದ್ದರೆ, ಅದನ್ನು ನಮಗೆ ಒಪ್ಪಿಸಿ. ನಗರವನ್ನು ಅದರ ನಾಗರಿಕರಿಗೆ ಹೇಗೆ ಸುರಕ್ಷಿತವಾಗಿಸುವುದು ಎಂಬುದನ್ನು ನಾವು ನಿಮಗೆ ತೋರಿಸುತ್ತೇವೆ." ಎಂದು ಕೇಜ್ರಿವಾಲ್ ಹೇಳಿದ್ದಾರೆ.
Delhi's Pragati Maidan tunnel. Four robbers robbed ₹2 Lakh cash from two persons who were going to deliver money in Gurugram via Rental Cab. #DelhiCrime pic.twitter.com/devDSUNYFG
— Jitender Sharma (@capt_ivane) June 26, 2023
ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್ ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದು. "ರಾಜಧಾನಿಯಲ್ಲಿ ಕಾನೂನುಬಾಹಿರ ಚಟುವಟಿಕೆ ಹೆಚ್ಚಾಗಿದೆ" ಎಂದು ಹೇಳಿದ್ದಾರೆ. "ದೆಹಲಿಯ ಕಾನೂನು ಮತ್ತು ಸುವ್ಯವಸ್ಥೆ ಕುಸಿದು ಬೀಳುತ್ತಿದೆ. ಇದು ಆತಂಕಕಾರಿ ಪರಿಸ್ಥಿತಿ, ಸಾರ್ವಜನಿಕ ಸುರಕ್ಷತೆಗೆ ಈಗಲೇ ಕಾರ್ಯನಿರ್ವಹಿಸಿ" ಎಂದು ಟ್ವೀಟ್ ಮಾಡಿದ್ದಾರೆ.
1.5-2 ಲಕ್ಷ ರೂಪಾಯಿ ದರೋಡೆ
ದಿ ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ಅಪರಿಚಿತ ಖದೀಮರು ಈ ಕೃತ್ಯ ಎಸಗಿದ್ದಾರೆ. ಬಂದೂಕು ತೋರಿಸಿ ಕ್ಯಾಬ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ವ್ಯಕ್ತಿಯಿಂದ 1.5 ರಿಂದ 2 ಲಕ್ಷ ರೂಪಾಯಿ ನಗದು ದೋಚಿದ್ದಾರೆ ಎಂದು ಹೇಳಲಾಗಿದೆ.
ಪೊಲೀಸ್ ಅಧಿಕಾರಿಗಳ ಪ್ರಕಾರ, ದೂರುದಾರರು ನಗದು ತುಂಬಿದ ಚೀಲವನ್ನು ತಲುಪಿಸಲು ಕ್ಯಾಬ್‌ನಲ್ಲಿ ಗುರಗಾಂವ್ ಕಡೆಗೆ ಹೋಗುತ್ತಿದ್ದಾಗ ದರೋಡೆ ಮಾಡಲಾಗಿದೆ. ದೂರುದಾರರನ್ನು ಪಟೇಲ್ ಸಜನ್ ಕುಮಾರ್ ಎಂದು ಗುರುತಿಸಲಾಗಿದ್ದು, ಚಾಂದಿನಿ ಚೌಕ್‌ನಲ್ಲಿರುವ ಸಂಸ್ಥೆಯೊಂದರಲ್ಲಿ ಡೆಲಿವರಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಘಟನೆ ವೇಳೆ ಆತ ತನ್ನ ಸ್ನೇಹಿತ ಜಿಗರ್ ಪಟೇಲ್ ಜೊತೆಗಿದ್ದ. ಇಬ್ಬರೂ ಚೀಲವನ್ನು ಗುರಗಾಂವ್‌ಗೆ ತೆಗೆದುಕೊಂಡು ಹೋಗುತ್ತಿದ್ದರು.
ಘಟನೆ ಬಗ್ಗೆ ನವದೆಹಲಿ ಡಿಸಿಪಿ ಪ್ರಣವ್ ತಯಾಲ್ ಪ್ರತಿಕ್ರಿಯೆ ನೀಡಿ, "ಅವರು ಲಾಲ್ ಕಿಲಾದಿಂದ ಕ್ಯಾಬ್ ಬಾಡಿಗೆಗೆ ಪಡೆದು ಗುರಗಾಂವ್‌ಗೆ ಹೋಗುತ್ತಿದ್ದರು ಎಂದು ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ನೀಡಿದ್ದಾರೆ. ಅವರು ಸುರಂಗವನ್ನು ಪ್ರವೇಶಿಸಿದಾಗ, ನಾಲ್ಕು ಜನರ ಗುಂಪು ಎರಡು ಬೈಕ್‌ಗಳಲ್ಲಿ ಕ್ಯಾಬ್ ಅಡ್ಡಗಟ್ಟು, ಬಂದೂಕು ತೋರಿಸಿ, ಚೀಲವನ್ನು ಕಸಿದು ಪರಾರಿಯಾಗಿದ್ದಾರೆ."
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದು ಒಳಗಿನ ಕೆಲಸವೇ ಎಂದು ತಿಳಿಯಲು ಪೊಲೀಸರು ದೂರುದಾರರನ್ನು, ಅವರ ಉದ್ಯೋಗದಾತ ಮತ್ತು ಇತರ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications