ಪಶ್ಚಿಮ ಬಂಗಾಲದಲ್ಲಿ ಸೇನಾ ಹೆಲಿಕಾಪ್ಟರ್ ಪತನ, 3 ಸಾವು

Posted By:
Subscribe to Oneindia Kannada

ಕೋಲ್ಕತ್ತಾ, ನವೆಂಬರ್ 30: ಪಶ್ಚಿಮ ಬಂಗಾಲದ ಸುಖ್ನಾ ಬಳಿ ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್ ಪತನಗೊಂಡಿದೆ. ಈ ದುರ್ಘಟನೆಯಲ್ಲಿ ಮೂವರು ಆರ್ಮಿ ಅಫೀಸರ್ಸ್ ಮೃತಪಟ್ಟಿದ್ದರೆ, ಮತ್ತೊಬ್ಬ ಅಧಿಕಾರಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡಿರುವ ಅಧಿಕಾರಿಯನ್ನು ಜ್ಯೂನಿಯರ್ ಕಮಿಷನ್ಡ್ ಅಧಿಕಾರಿ ಎಂದು ಗುರುತಿಸಲಾಗಿದ್ದು, ಅವರ ದೇಹ ಸ್ಥಿತಿ ತೀವ್ರವಾಗಿದ್ದು, ಜೀವನ್ಮರಣ ಹೋರಾಟ ನಡೆಸಿದ್ದಾರೆ.

Army Cheetah chopper crashed in Sukhna, West Bengal

ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ ಎಎಲ್) ನಿರ್ಮಿತ ಐದು ಸೀಟು ಸಾಮರ್ಥ್ಯವುಳ್ಳ ಚೀತಾ ಹೆಲಿಕಾಪ್ಟರ್ ಪತನಗೊಂಡಿದ್ದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.


ಎಲ್ಲಾ ರೀತಿ ಹವಾಮಾನ, ಎತ್ತರವನ್ನು ಸುಲಭವಾಗಿ ಕ್ರಮಿಸಬಲ್ಲ ಸಾಮರ್ಥ್ಯವುಳ್ಳ ಬಹುಪಯೋಗಿ ಹೆಲಿಕಾಪ್ಟರ್ ಬುಧವಾರ ಬೆಳಗ್ಗೆ 10.30ರ ಸುಮಾರಿಗೆ ಅಪಘಾತಕ್ಕೀಡಾಗಿದೆ ಎಂದು ಎಎನ್ ಐ ವರದಿ ಮಾಡಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Army Cheetah chopper crashed in Sukhna, West Bengal. 3 killed, 1 Junior Commissioned Officer critical. An enquiry ordered.
Please Wait while comments are loading...