Breaking: ಹೆಲಿಕಾಪ್ಟರ್ ಪತನ, ಸೇನಾ ಮುಖ್ಯಸ್ಥ ಬಿಪಿನ್ ರಾವತ್ ನಿಧನ
ಚೆನ್ನೈ, ಡಿಸೆಂಬರ್ 08: ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಪತನದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ನಿಧನರಾಗಿದ್ದಾರೆ.

ವಾಯುಪಡೆಯ Mi-17V5 ಹೆಲಿಕಾಪ್ಟರ್‌ನಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್.ಎಸ್.ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ಅಧಿಕಾರಿಗಳಾದ ಗುರುಸೇವಕ್ ಸಿಂಗ್, ಜಿತೇಂದ್ರ ಕುಮಾರ್, ವಿವೇಕ್ ಕುಮಾರ್, ಸಾಯಿತೇಜಾ, ಸತ್ಪಾಲ್ ಅವರೊಂದಿಗೆ ಪ್ರಯಾಣಿಸುತ್ತಿದ್ದರು. ತೀವ್ರವಾಗಿ ಗಾಯಗೊಂಡಿರುವ ಬಿಪಿನ್ ರಾವತ್ ಮತ್ತು ಇತರ ನಾಲ್ವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಒಟ್ಟು 12 ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ.
ದುರ್ಘಟನೆಯಲ್ಲಿ ಗಾಯಗೊಂಡ ಮೂವರನ್ನುವೆಲ್ಲಿಂಗ್ಟನ್‌ನ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.. ಗಾಯಗೊಂಡವರಲ್ಲಿ ಸಿಡಿಎಸ್ ಬಿಪಿನ್ ರಾವತ್ ಆರೋಗ್ಯ ಚಿಂತಾಜನಕವಾಗಿದ್ದು, ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರಾದೃಷ್ಟವಶಾತ್ ಅವರ ಪತ್ನಿ ಈ ದುರ್ಘಟನೆಯಲ್ಲಿ ಮೊದಲೇ ಮೃತಪಟ್ಟಿದ್ದರು. ಇನ್ನು ಘಟನೆ ಬೆನ್ನಲ್ಲೇ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೆಹಲಿಯಿಂದ ತಮಿಳುನಾಡಿಗೆ ಬಂದಿದ್ದರು.
ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ತುರ್ತು ಸಚಿವ ಸಂಪುಟ ಸಭೆಯನ್ನೂ ಕರೆದಿದ್ದರು.ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಹೆಲಿಕಾಪ್ಟರ್‌ನಲ್ಲಿದ್ದ 11 ಇತರರು ಈ ದುರದೃಷ್ಟಕರ ಘಟನೆಯಲ್ಲಿ ಮೃತಪಟ್ಟಿದ್ದಾರೆ.
ತೀವ್ರ ಗಾಯಗೊಂಡಿರುವ ಡಿಎಸ್‌ಎಸ್‌ಸಿಯ ಡೈರೆಕ್ಟಿಂಗ್ ಸ್ಟಾಫ್, ಕ್ಯಾಪ್ಟನ್ ವರುಣ್ ಸಿಂಗ್ ಎಸ್‌ಸಿ ಅವರು ಪ್ರಸ್ತುತ ವೆಲ್ಲಿಂಗ್ಟನ್‌ನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಾಯುಪಡೆ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿದೆ.
ಜನರಲ್ ಬಿಪಿನ್ ರಾವತ್ ಅವರೊಂದಿಗೆ ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್‌ಎಸ್ ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ನಾಯ್ಕ್ ಗುರುಸೇವಕ್ ಸಿಂಗ್, ನಾಯ್ಕ್ ಜಿತೇಂದರ್ ಕುಮಾರ್, ನಾಯ್ಕ್ ವಿವೇಕ್ ಕುಮಾರ್, ನಾಯ್ಕ್ ಬಿ ಸಾಯಿ ತೇಜಾ, ಹವಾಲ್ದಾರ್ ಸತ್ಪಾಲ್ ಮತ್ತು ಪೈಲಟ್‌ಗಳು ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದರು.
ರಾಜನಾಥ್ ಸಿಂಗ್ ಸಂತಾಪ: ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ ದೇಶಕ್ಕೆ ತುಂಬಲಾರದ ನಷ್ಟ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿದ ಅವರು, ತಮಿಳುನಾಡಿನಲ್ಲಿ ಇಂದು ನಡೆದ ಅತ್ಯಂತ ದುರದೃಷ್ಟಕರ ಹೆಲಿಕಾಪ್ಟರ್ ಅಪಘಾತದಲ್ಲಿ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ 11 ಸಶಸ್ತ್ರ ಪಡೆಗಳ ಸಿಬ್ಬಂದಿಯ ಹಠಾತ್ ನಿಧನದಿಂದ ತೀವ್ರ ದುಃಖವಾಗಿದೆ ಎಂದಿದ್ದಾರೆ.
Recommended Video
ಅವರ ಅಕಾಲಿಕ ಮರಣವು ನಮ್ಮ ಸಶಸ್ತ್ರ ಪಡೆಗಳಿಗೆ ಮತ್ತು ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಈ ಅಪಘಾತದಲ್ಲಿ ತಮ್ಮ ಆತ್ಮೀಯರನ್ನು ಕಳೆದುಕೊಂಡವರ ಕುಟುಂಬಗಳಿಗೆ ದುಖಃವನ್ನು ತಡೆದುಕೊಳ್ಳುವ ಶಕ್ತಿ ಸಿಗಲಿ ಎಂದು ಹೇಳಿದ್ದಾರೆ.












Click it and Unblock the Notifications