ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download
LIVE

Army Helicopter Crash updates: ಬಿಪಿನ್ ರಾವತ್ ಪಾರ್ಥಿವ ಶರೀರಕ್ಕೆ ಗಣ್ಯರ ಗೌರವ ನಮನ

|
Google Oneindia Kannada News

ನವದೆಹಲಿ, ಡಿಸೆಂಬರ್ 9: ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸಹಿತ 14 ಜನರಿದ್ದ ಸೇನಾ ಹೆಲಿಕಾಪ್ಟರ್ ಪತನವಾಗಿರುವ ಘಟನೆ ತಮಿಳುನಾಡಿನ ನೀಲ್‌ಗಿರಿ ಜಿಲ್ಲೆಯ ಕುನೂರ್ ಬಳಿ ನಡೆದಿದೆ. ಐಎಎಫ್ ಎಂಐ-17ವಿ5 ಹೆಲಿಕಾಪ್ಟರ್ ಇದಾಗಿದ್ದು, ಹೆಲಿಕಾಪ್ಟರ್‌ನಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 13 ಮಂದಿ ದುರ್ಮರಣಕ್ಕೀಡಾಗಿರುವುದನ್ನು ಇರುವುದನ್ನು ಭಾರತೀಯ ಸೇನೆ ಈಗಾಗಲೇ ಖಚಿತಪಡಿಸಿದ್ದು, ತನಿಖೆಗೆ ಆದೇಶಿಸಿದೆ.

'CDS ಜನರಲ್ ಬಿಪಿನ್ ರಾವತ್ ಅವರಿದ್ದ IAF Mi-17V5 ಹೆಲಿಕಾಪ್ಟಾರ್ ಇದು ತಮಿಳುನಾಡು ಕೂನೂರ್ ಬಳಿ ಅಪಘಾತಕ್ಕೀಡಾಗಿದೆ. ಆರಂಭದಲ್ಲಿ ಈವರೆಗೆ ಮೂವರನ್ನು ರಕ್ಷಿಸಲಾಗಿದ್ದು, ಇತರರಿಗಾಗಿ ಶೋಧ ನಡೆಸಲಾಗುತ್ತಿದೆ' ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದರು. ಸೇನೆ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ಮುಂದುವರೆಸಿದ್ದಾರೆ.

Breaking: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ಪತನBreaking: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ಪತನ

ದೆಹಲಿಯಿಂದ ಸೂಳೂರು ನಂತರ ವೆಲ್ಲಿಂಗ್ಟನ್ ಮಿಲಿಟರಿ ಕಾಲೇಜಿನಲ್ಲಿ ಉಪನ್ಯಾಸ ನೀಡಲು ಜನರಲ್ ರಾವತ್ ಪ್ರಯಾಣಿಸುತ್ತಿದ್ದರು. ಪೂರ್ವ ನಿಗದಿಯಾಗಿದ್ದ ಸಮಾರಂಭಕ್ಕೆ ತೆರಳುತ್ತಿದ್ದರು. ಬಿಪಿನ್ ರಾವತ್ ಪತ್ನಿ ಹಾಗೂ ಬ್ರಿಗೆಡಿಯರ್, ಲ್ಯಾನ್ಸ್ ನಾಯಕ್, ಸೇರಿದಂತೆ ಇತರೆ ಅಧಿಕಾರಿಗಳು, ನಾಲ್ವರು ಹೆಲಿಕಾಪ್ಟರ್ ಸಿಬ್ಬಂದಿ ಇದ್ದರು.

Mi-17V5 With CDS Bipin Rawat on Board Crashes Latest News in Kannada

ಹವಾಮಾನ ವೈಪರೀತ್ಯವೇ ಹೆಲಿಕಾಪ್ಟರ್ ಪತನಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಕೊಯಮತ್ತೂರು, ಸುಳೂರ್ ನಡುವೆ ಈ ಘಟನೆ ನಡೆದಿದೆ. ಇಬ್ಬರನ್ನು ರಕ್ಷಿಸಲಾಗಿದ್ದು, ಶೇ.80ರಷ್ಟು ಸುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ. ಗುರುತು ಪತ್ತೆ ಹಚ್ಚಲಾಗುತ್ತಿದೆ. 9 ಪ್ರಯಾಣಿಕರು ಹಾಗೂ 5 ಮಂದಿ ಕ್ರ್ಯೂ ಸೇರಿ ಒಟ್ಟು 14 ಮಂದಿ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದರು. ರಕ್ಷಣೆ ಮಾಡಲಾಗಿದ್ದ ಮೂವರಲ್ಲಿ ಬಿಪಿನ್ ರಾವತ್ ಕೂಡ ಒಬ್ಬರು ಎಂಬ ಮಾಹಿತಿಯಿದೆ.

ಭಾರತೀಯ ಸೇನಾ ಹೆಲಿಕಾಪ್ಟರ್ ಪತನದ ಘಟನೆ ಹಾಗೂ ಅದರ ಸುತ್ತಲಿನ ಕ್ಷಣಕ್ಷಣದ ಅಪ್‌ಡೇಟ್‌ಗಳನ್ನು ಇಲ್ಲಿ ತಿಳಿಯಿರಿ.

Recommended Video

      ವಾಯುಪಡೆಯ Mi-17V5 ಹೆಲಿಕಾಪ್ಟರ್ ಸ್ಪೆಷಾಲಿಟಿ ಏನು? | Oneindia Kannada

      Newest FirstOldest First
      11:54 PM, 9 Dec

      ಸಿಡಿಎಸ್ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಪಾರ್ಥಿವ ಶರೀರವನ್ನು ಪಾಲಂ ವಾಯುನೆಲೆಯಲ್ಲಿ ಇರಿಸಲಾಗಿದೆ

      ಸಿಡಿಎಸ್ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಪಾರ್ಥಿವ ಶರೀರವನ್ನು ಪಾಲಂ ವಾಯುನೆಲೆಯಲ್ಲಿ ಇರಿಸಲಾಗಿದೆ
      11:53 PM, 9 Dec

      ಚಿತ್ರಗಳು: ಸಿಡಿಎಸ್ ಬಿಪಿನ್ ರಾವತ್ ಸೇರಿ 13 ಮಂದಿಗೆ ದೇಶಾದ್ಯಂತ ಭಾವಪೂರ್ಣ ಶ್ರದ್ಧಾಂಜಲಿ

      ಸಿಡಿಎಸ್ ಬಿಪಿನ್ ರಾವತ್ ಸೇರಿ 13 ಮಂದಿಗೆ ದೇಶಾದ್ಯಂತ ಭಾವಪೂರ್ಣ ಶ್ರದ್ಧಾಂಜಲಿ
      9:15 PM, 9 Dec

      ಭೂ, ವಾಯು, ನೌಕಾ ಸೇನೆ ಮುಖ್ಯಸ್ಥರಿಂದ ಅಂತಿಮ ನಮನ:

      ಸಿಡಿಎಸ್ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ 11 ಸಶಸ್ತ್ರ ಪಡೆಗಳ ಸೈನಿಕರಿಗೆ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಮತ್ತು ಐಎಎಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅಂತಿಮ ನಮನ ಸಲ್ಲಿಸಿದರು.
      9:11 PM, 9 Dec

      NSA ಅಜಿತ್ ದೋವಲ್ ಶ್ರದ್ಧಾಂಜಲಿ:

      NSA ಅಜಿತ್ ದೋವಲ್ ಶ್ರದ್ಧಾಂಜಲಿ:
      IAF ಹೆಲಿಕಾಪ್ಟರ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಸಿಡಿಎಸ್ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ 11 ಸಶಸ್ತ್ರ ಪಡೆಗಳ ಸಿಬ್ಬಂದಿಗೆ NSA ಅಜಿತ್ ದೋವಲ್ ಶ್ರದ್ಧಾಂಜಲಿ ಸಲ್ಲಿಸಿದರು.
      9:08 PM, 9 Dec

      ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಂತಿಮ ನಮನ:

      ತಮಿಳುನಾಡು ಚಾಪರ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಸಿಡಿಎಸ್ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ 11 ಸಶಸ್ತ್ರ ಪಡೆಗಳ ಸಿಬ್ಬಂದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಂತಿಮ ನಮನ ಸಲ್ಲಿಸಿದರು.
      9:06 PM, 9 Dec

      ಬೆಂಗಳೂರಿನ ವಾಯುಪಡೆ ಕಮಾಂಡ್ ಆಸ್ಪತ್ರೆಗೆ ಸಿಎಂ, ರಾಜ್ಯಪಾಲರ ಭೇಟಿ

      ತಮಿಳುನಾಡು ಚಾಪರ್ ಅಪಘಾತದಲ್ಲಿ ಬದುಕುಳಿದ ಏಕೈಕ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದ್ದು, ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಬೆಂಗಳೂರಿನ ವಾಯುಪಡೆಯ ಕಮಾಂಡ್ ಆಸ್ಪತ್ರೆಗೆ ಭೇಟಿ ನೀಡಿದರು.
      9:04 PM, 9 Dec

      ತಮಿಳುನಾಡು ಹೆಲಿಕಾಪ್ಟರ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಸಿಡಿಎಸ್ ಜನರಲ್ ಬಿಪಿನ್ ರಾವತ್ ಮತ್ತು ಇತರ ಸಶಸ್ತ್ರ ಪಡೆ ಸಿಬ್ಬಂದಿಯ ಕುಟುಂಬ ಸದಸ್ಯರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪಾಲಂ ವಾಯುನೆಲೆಯಲ್ಲಿ ಭೇಟಿ ಮಾಡಿದರು
      Advertisement
      9:01 PM, 9 Dec

      ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಪಾರ್ಥಿವ ಶರೀರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಂತಿಮ ನಮನ ಸಲ್ಲಿಸಿದರರು.
      8:45 PM, 9 Dec

      ಪಾಲಂ ವಾಯು ನೆಲೆಯಲ್ಲಿ ಅಂತಿಮ ಗೌರವ:

      ಪಾಲಂ ವಾಯು ನೆಲೆಯಲ್ಲಿ ಅಂತಿಮ ಗೌರವ:
      ತಮಿಳುನಾಡು ಸೇನಾ ಹೆಲಿಕಾಪ್ಟರ್ ಪತನದಲ್ಲಿ ಮೃತಪಟ್ಟ ಸಿಡಿಎಸ್ ಜನರಲ್ ಬಿಪಿನ್ ರಾವತ್, ಮಧುಲಿಕಾ ರಾವತ್, ಎಲ್/ಎನ್‌ಕೆ ವಿವೇಕ್ ಕೆಆರ್, ಎನ್‌ಕೆ ಗುರುಶೇವಕ್ ಸಿಂಗ್, ಎಲ್/ಎನ್‌ಕೆ ಬಿಎಸ್ ತೇಜ, ನಾಯಕ್ ಜಿತೇಂದರ್ ಕೆಆರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ಬ್ರಿಗ್ ಎಲ್‌ಎಸ್ ಲಿಡರ್, ಹವಾಲ್ದಾರ್ ಸತ್ಪಾಲ್ ರಾಜ್, ಡಬ್ಲ್ಯುಜಿ ಸಿಡಿಆರ್ ಪಿ ಎಸ್ ಚೌಹಾಣ್, ಸ್ಕ್ಎನ್ ಲೀಡರ್ ಕೆ ಸಿಂಗ್, ಜೆಡಬ್ಲ್ಯೂಒ ರಾಣಾ ಪ್ರತಾಪ್ ದಾಸ್ ಮತ್ತು ಜೆಡಬ್ಲ್ಯೂಒ ಪ್ರದೀಪ್ ಎ. ಪಾರ್ಥಿವ ಶರೀರವನ್ನು ಪಾಲಂ ವಾಯು ನೆಲೆಯಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದೆ.
      8:25 PM, 9 Dec

      ಜನರಲ್ ಬಿಪಿನ್ ರಾವತ್ ಅವರ ಪತ್ನಿ ಮಧುಲಿಕಾ ರಾವತ್ ಅವರ ಪಾರ್ಥಿವ ಶರೀರವನ್ನು ಪಾಲಂ ವಾಯುನೆಲೆಯಲ್ಲಿ ಇರಿಸಲಾಗಿದೆ.
      8:07 PM, 9 Dec

      ಪಾಲಂ ವಾಯುನೆಲೆಗೆ ರಾವತ್ ಪಾರ್ಥಿವ ಶರೀರ:

      ತಮಿಳುನಾಡು ಚಾಪರ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಜನರಲ್ ಬಿಪಿನ್ ರಾವತ್ ಅವರ ಪಾರ್ಥಿವ ಶರೀರವನ್ನು ಸೂಲೂರಿನಿಂದ ಪಾಲಂ ವಾಯುನೆಲೆಗೆ ಆಗಮಿಸಿದ IAF ವಿಮಾನದಿಂದ ಹೊರತರಲಾಯಿತು.
      8:05 PM, 9 Dec

      ಪಾಲಮ್ ವಾಯುನೆಲೆಯಲ್ಲಿ ಬ್ರಿಗ್ ಎಲ್ಎಸ್ ಲಿಡ್ಡರ್ ಅವರ ಪಾರ್ಥಿವ ಶರೀರವನ್ನು ಇರಿಸಲಾಗಿದೆ.
      Advertisement
      7:03 PM, 9 Dec

      ಎಲ್ಲಾ ಮೃತರ ಅಂತ್ಯಕ್ರಿಯೆಗಳನ್ನು ಸೂಕ್ತ ಸೇನಾ ಗೌರವಗಳೊಂದಿಗೆ ನೆರವೇರಿಸಲು ಎಲ್ಲ ರೀತಿ ತಯಾರಿ ಮಾಡಿಕೊಳ್ಳಲಾಗುತ್ತಿದ್ದು, ಈ ಸಂಬಂಧ ಕುಟುಂಬ ಸದಸ್ಯರೊಂದಿಗೆ ನಿಕಟ ಸಮಾಲೋಚನೆ ನಡೆಸಲಾಗುತ್ತಿದೆ: ಭಾರತೀಯ ಸೇನೆ
      6:47 PM, 9 Dec

      ಶ್ರೀಲಂಕಾದ ಸೇನಾ ಕಮಾಂಡರ್, ಜನರಲ್ ಶವೇಂದ್ರ ಸಿಲ್ವಾ ಅವರು ಸಿಡಿಎಸ್ ಜನರಲ್ ಬಿಪಿನ್ ರಾವತ್ ಅಂತಿಮ ವಿಧಿಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
      6:17 PM, 9 Dec

      ಕೂನೂರು ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕುಳಿದ ಏಕೈಕ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
      5:54 PM, 9 Dec

      ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ದಿವಂಗತ ಸಿಡಿಎಸ್ ಬಿಪಿನ್ ರಾವತ್ ಮತ್ತು ಇತರ ಸಶಸ್ತ್ರ ಪಡೆ ಸಿಬ್ಬಂದಿಗೆ ಪ್ರಧಾನಿ ಮೋದಿ ಗೌರವ ಸಲ್ಲಿಸಲಿದ್ದಾರೆ. ರಕ್ಷಣಾ ಸಚಿವರು, ರಕ್ಷಣಾ ರಾಜ್ಯ ಸಚಿವರು, ರಾಷ್ಟ್ರೀಯ ಭದ್ರತಾ ಸಲಹೆಗಾರರು ಮತ್ತು ಮೂರು ಸೇವಾ ಮುಖ್ಯಸ್ಥರು ಸಹ ಉಪಸ್ಥಿತರಿರುತ್ತಾರೆ.
      5:08 PM, 9 Dec

      ಜನರಲ್ ಬಿಪಿನ್ ರಾವತ್ ಅವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನನಲ್ಲಿ ಅಪಘಾತಕ್ಕೀಡಾಗಿ ಸಾವನ್ನಪ್ಪಿದ ನಾಯಕ್ ಗುರುಸೇವಕ್ ಸಿಂಗ್ ಅವರ ಸಾವಿನಿಂದ ಇಲ್ಲಿನ ದೊಡೆ ಸೋಧಿಯಾನ್ ಗ್ರಾಮದಲ್ಲಿ ಶೋಕ ಆವರಿಸಿದೆ.
      5:06 PM, 9 Dec

      ಎರಡು C130 ಹರ್ಕ್ಯುಲಸ್ ವಿಮಾನಗಳು ಸುಲೂರ್ ವಾಯುಪಡೆಯ ನೆಲೆಯಿಂದ ಹೊರಡುತ್ತವೆ. ಒಂದು ಸಿಡಿಎಸ್ ಬಿಪಿನ್ ರಾವತ್ ಮತ್ತು ಇತರ 12 ಮಂದಿಯ ಪಾರ್ಥಿವ ಶರೀರವನ್ನು ದೆಹಲಿಗೆ ರವಾನಿಸಲಾಗುತ್ತಿದ್ದರೆ, ಇನ್ನೊಂದು ವಿಮಾನದಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಬೆಂಗಳೂರಿಗೆ ರವಾನಿಸಲಾಗುತ್ತಿದೆ.
      4:43 PM, 9 Dec

      ಜಮ್ಮು ಮತ್ತು ಕಾಶ್ಮೀರ| ಲೆಫ್ಟಿನೆಂಟ್ ಜನರಲ್ ಡಿಪಿ ಪಾಂಡೆ, GOC, ಶ್ರೀನಗರದ ಚಿನಾರ್ ಕಾರ್ಪ್ಸ್, ಬಾರಾಮುಲ್ಲಾದ ಶೆರ್ವಾನಿ ಸಮುದಾಯ ಭವನದಲ್ಲಿ ದಿವಂಗತ CDS ಜನರಲ್ ಬಿಪಿನ್ ರಾವತ್ ಅವರಿಗೆ ಗೌರವ ಸಲ್ಲಿಸಿದರು.
      3:50 PM, 9 Dec

      ತಮಿಳುನಾಡು: ಜನರಲ್ ರಾವತ್ ಪಾರ್ಥಿವ ಶರೀರವನ್ನು ಹೊತ್ತೊಯ್ಯುವ ಆಂಬ್ಯುಲೆನ್ಸ್‌ಗಳ ಮೇಲೆ ಹೂವು ಎಸೆದ ಸ್ಥಳೀಯರು 'ಭಾರತ್ ಮಾತಾ ಕಿ ಜೈ' ಎಂದು ಘೋಷಣೆ ಕೂಗಿದರು.
      3:43 PM, 9 Dec

      ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಚಿವ ಅಜಯ್ ಭಟ್ ಮತ್ತು ಎನ್ಎಸ್ಎ ಅಜಿತ್ ದೋವಲ್ ಅವರು ಇಂದು ಸಂಜೆ ಪಾಲಂ ತಾಂತ್ರಿಕ ಪ್ರದೇಶದಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ 11 ಸಿಬ್ಬಂದಿಯ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸುವ ಸಾಧ್ಯತೆಯಿದೆ: ಮೂಲಗಳು
      3:39 PM, 9 Dec

      ಕೂನೂರು ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕುಳಿದ ಏಕೈಕ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಉತ್ತಮ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲು ಗುರುವಾರ ವೆಲ್ಲಿಂಗ್ಟನ್‌ನಿಂದ ಸೂಲೂರಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಸ್ಥಿತಿ ಇನ್ನೂ ಚಿಂತಾಜನಕವಾಗಿದೆ ಎಂದು ಅವರು ತಿಳಿಸಿದ್ದಾರೆ. ಅಪಘಾತದ ನಂತರ ಬುಧವಾರ ತೀವ್ರ ಸುಟ್ಟ ಗಾಯಗಳೊಂದಿಗೆ ಗ್ರೂಪ್ ಕ್ಯಾಪ್ಟನ್ ಅವರನ್ನು ವೆಲ್ಲಿಂಗ್ಟನ್‌ನ ಆಸ್ಪತ್ರೆಗೆ ದಾಖಲಿಸಲಾಯಿತು.
      2:41 PM, 9 Dec

      ಸೇನಾ ಹೆಲಿಕಾಪ್ಟರ್ ದುರಂತಕ್ಕೆ ದೇಶಕ್ಕೆ ದೇಶವೇ ಮರುಗುತ್ತಿದ್ದು, ಈ ದುರ್ಘಟನೆಯಲ್ಲಿ ಉಡುಪಿ ಜಿಲ್ಲೆಯ ಅಳಿಯ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಸಹ ಹುತಾತ್ಮರಾಗಿದ್ದು, ಈಗ ಕಾರ್ಕಳದಲ್ಲಿ ನೀರವ ಮೌನ ಆವರಿಸಿದೆ.
      1:11 PM, 9 Dec

      ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ವೆಲ್ಲಿಂಗ್ಟನ್‌ನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಜೀವ ಉಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ: ತಮಿಳುನಾಡಿನಲ್ಲಿ ಮಿಲಿಟರಿ ಹೆಲಿಕಾಪ್ಟರ್ ಅಪಘಾತದ ಕುರಿತು ಲೋಕಸಭೆಯಲ್ಲಿ ಹೇಳಿಕೆ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
      12:30 PM, 9 Dec

      ಜನರಲ್ ರಾವತ್ ಮತ್ತು ಅವರ ಪತ್ನಿಯ ಪಾರ್ಥಿವ ಶರೀರ ಗುರುವಾರ ಸಂಜೆ ರಾಷ್ಟ್ರ ರಾಜಧಾನಿ ನವದೆಹಲಿಗೆ ಆಗಮಿಸುವ ಸಾಧ್ಯತೆಯಿದೆ ಮತ್ತು ಅವರ ಅಂತ್ಯಕ್ರಿಯೆ ಶುಕ್ರವಾರ ದೆಹಲಿ ಕಂಟೋನ್ಮೆಂಟ್‌ನಲ್ಲಿ ನಡೆಯಲಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
      12:23 PM, 9 Dec

      ಸುದ್ದಿ ಸಂಸ್ಥೆ ANI ತಮಿಳುನಾಡಿನ ಕುನೂರ್ ಬಳಿ Mi-17 ಹೆಲಿಕಾಪ್ಟರ್ ಪತನಗೊಳ್ಳುವ ಮೊದಲು ಅದರ ಅಂತಿಮ ಕ್ಷಣಗಳನ್ನು ತೋರಿಸುವ ವೀಡಿಯೊವನ್ನು ಗುರುವಾರ ಹಂಚಿಕೊಂಡಿದೆ.
      11:09 AM, 9 Dec

      ಸಂಸತ್ತಿನಲ್ಲಿ ಹೆಲಿಕಾಪ್ಟರ್ ದುರಂತಕ್ಕೆ ಕಂಬನಿ

      ಸಂಸತ್ತಿನಲ್ಲಿ ಹೆಲಿಕಾಪ್ಟರ್ ದುರಂತದ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಸ್ತಾವನೆ ಮಾಡಿ, ಮೃತರ ಬಗ್ಗೆ ವಿವರ ನೀಡಿದರು. ನಂತರ ಸದಸ್ಯರೆಲ್ಲರೂ ಮೃತರ ಆತ್ಮಕ್ಕೆ ಶಾಂತಿ ಕೋರಿ ನಮನ ಸಲ್ಲಿಸಿದರು.
      10:52 AM, 9 Dec

      ಘಟನಾ ಸ್ಥಳಕ್ಕೆ ಐಎಎಫ್ ಮುಖ್ಯಸ್ಥರ ಭೇಟಿ

      ಭಾರತೀಯ ವಾಯುಸೇನೆ ಮುಖ್ಯಸ್ಥ ಏರ್ ಛೀಫ್ ಮಾರ್ಷಲ್ ವಿಆರ್ ಚೌಧರಿ ಹಾಗೂ ತಮಿಳುನಾಡು ಡಿಜಿಪಿ ಸಿ ಶೈಲೇಂದ್ರ ಬಾಬು ಅವರು ಹೆಲಿಕಾಪ್ಟರ್ ಪತನವಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
      10:44 AM, 9 Dec

      ಹೆಲಿಕಾಪ್ಟರ್ ಬ್ಲಾಕ್ ಬಾಕ್ಸ್ ವಶಕ್ಕೆ

      ಹೆಲಿಕಾಪ್ಟರ್ ಬ್ಲಾಕ್ ಬಾಕ್ಸ್ ವಶಕ್ಕೆ
      ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಂಐ-17ವಿ5 ಪತನಗೊಂಡಿದೆ. ಘಟನೆಯ ಬಗ್ಗೆ ತನಿಖೆ ನಡೆಸುತ್ತಿರುವ ತಂಡ ಹೆಲಿಕಾಪ್ಟರ್ ಬ್ಲಾಕ್ ಬಾಕ್ಸ್ ವಶಕ್ಕೆ ಪಡೆದಿದೆ.
      9:28 AM, 9 Dec
      ತಮಿಳುನಾಡು

      ಜನರಲ್ ಜೀವಂತವಾಗಿದ್ದರು, ಆಸ್ಪತ್ರೆಯಲ್ಲೇ ಅಸುನೀಗಿದರು

      ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರು ಘಟನಾ ಸ್ಥಳದಲ್ಲಿ ಜೀವಂತವಾಗಿದ್ದರು ಆದರೆ, ತೀವ್ರವಾಗಿ ಗಾಯಗೊಂಡಿದ್ದರು ಮತ್ತು ಎಂಐ-17ವಿ5 ಹೆಲಿಕಾಪ್ಟರ್‌ನ ಅವಶೇಷಗಳಿಂದ ಮತ್ತೊಬ್ಬ ಪ್ರಯಾಣಿಕನೊಂದಿಗೆ ಹೊರತೆಗೆಯಲ್ಪಟ್ಟಾಗ ಅವರ ಹೆಸರನ್ನು ಹೇಳಿದರು, ಅವರು ಹೇಳಿದ ಆ ವ್ಯಕ್ತಿಯೇ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಎಂದು ಗುರುತಿಸಲಾಗಿದೆ ಎಂದು ಹಿರಿಯ ಪ್ರಮುಖ ಅಗ್ನಿಶಾಮಕ ಸಿಬ್ಬಂದಿ ಹೇಳಿದ್ದಾರೆ.
      READ MORE

      English summary
      Army Helicopter Crash Live Updates in Kannada: Mi-17V5 With CDS Bipin Rawat with his staff and family members on board crashed in Tamil Nadu. Check latest news and live updates.
      ತಾಜಾ ಸುದ್ದಿ ತಕ್ಷಣ ಪಡೆಯಿರಿ
      Enable
      x
      Notification Settings X
      Time Settings
      Done
      Clear Notification X
      Do you want to clear all the notifications from your inbox?
      Settings X