ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಬಳಿ ಸೇನಾ ಹೆಲಿಕಾಪ್ಟರ್ ಪತನ
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದೆ ಎಂದು ವರದಿಯಾಗಿದೆ. ಗುರುವಾರ ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದ್ದು, ಹೆಲಿಕಾಪ್ಟರ್ ನಲ್ಲಿ ಮೂವರು ಸೇನಾ ಸಿಬ್ಬಂದಿ ಇದ್ದರು ಎಂದು ಹೇಳಲಾಗಿದೆ.
ವರದಿಗಳ ಪ್ರಕಾರ ಕಿಶ್ತ್ವಾರ್ ಜಿಲ್ಲೆಯ ಮಚ್ನಾ ಎನ್ನುವ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಸುಧಾರಿತ ಲಘು ಹೆಲಿಕಾಪ್ಟರ್ ಧ್ರುವ್ ಪತನಗೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ ಎರಡು ತಿಂಗಳಿನಲ್ಲಿ ಮೂರನೇ ಬಾರಿ ಸುಧಾರಿತ ಲಘು ಹೆಲಿಕಾಪ್ಟರ್ ಧ್ರುವ್ ಪತನಗೊಂಡಿದೆ. ಹೆಲಿಕಾಪ್ಟರ್ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಲಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

"ಹೆಲಿಕ್ಯಾಪ್ಟರ್ ನಲ್ಲಿ ಇಬ್ಬರಿಂದ ಮೂವರು ಸಿಬ್ಬಂದಿಯಿದ್ದರು ಎಂದು ತಿಳಿದುಬಂದಿದೆ. ಎಲ್ಲರೂ ಗಾಯಗೊಂಡಿದ್ದಾರೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಜನನಿಬಿಡ ಪ್ರದೇಶದಿಂದ ದೂರದಲ್ಲಿ ಹೆಲಿಕಾಪ್ಟರ್ ಪತನವಾಗಿರುವುದರಿಂದ ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷೆ ಮಾಡಲಾಗಿದೆ.












Click it and Unblock the Notifications