ಭಾರತೀಯ ಸೇನೆಯ ಮಹಿಳಾ ಅಧಿಕಾರಿ ಆತ್ಮಹತ್ಯೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆಯ ಮೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಶ್ರೀನಗರ, ಡಿಸೆಂಬರ್ 16: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆಯ ಮೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಜಮ್ಮು ಜಿಲ್ಲೆಯಲ್ಲಿ ಮಹಿಳಾ ಅಧಿಕಾರಿ 36 ವರ್ಷ ವಯಸ್ಸಿನ ಅನಿತಾ ಕುಮಾರಿ ಅವರು ತಮ್ಮ ಸರ್ವೀಸ್ ಪಿಸ್ತೂಲ್ ನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಿಸೆಂಬರ್ 14 ಹಾಗೂ 15ರ ನಡುವೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಅನಿತಾ ಹಿಮಾಚಲ ಪ್ರದೇಶದ ಚಂಬಾ ಪ್ರದೇಶವರಾದ ಅನಿತಾ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿಸು ಬಂದಿಲ್ಲ. ಬಾರಿ ಬ್ರಹ್ಮಣ ಅಧಿಕೃತ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಜಮ್ಮುವಿನ 259 ಫೀಲ್ಡ್ ಸಪ್ಲೈ ಡಿಪೋದಲ್ಲಿ ಕಾರ್ಯ ನಿರ್ವಹಿಸಲು ನಿಯೋಜಿಸಲಾಗಿತ್ತು.












Click it and Unblock the Notifications