ಸೇನಾ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆ, 18 ಜನರ ಬಂಧನ
ಸೇನಾ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆದಿಂದಾಗಿ ಫೆ.26ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಈ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡಿದ 18 ಜನರನ್ನು ಬಂಧಿಸಲಾಗಿದೆ.
ನವದೆಹಲಿ, ಫೆಬ್ರವರಿ. 26 : ಸೇನಾ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತು ಗೋವಾದಲ್ಲಿ 18ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ನಾಸಿಕ್, ಪುಣೆ, ಗೋವಾ, ನಾಗ್ಪರ ಮೂಲದವರು ಎಂದು ತಿಳಿದು ಬಂದಿದೆ. ಸುಮಾರು 200 ವಿದ್ಯಾರ್ಥಿಗಳಿಂದ ತಲಾ 2 ಲಕ್ಷ ರು. ಪಡೆದು ಪ್ರಶ್ನೆ ಪತ್ರಿಕೆಗಳನ್ನು ಹಂಚಿದ್ದರು.
ಭಾನುವಾರ ಬೆಳಿಗ್ಗೆ 9 ಗಂಟೆಗೆ ಆರಂಭವಾದ ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಶನಿವಾರ ರಾತ್ರಿಯೇ ಅಭ್ಯರ್ಥಿಗಳಿಗೆ ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಭಾನುವಾರ (ಫ. 26) ದೇಶವ್ಯಾಪಿ ಆಯೋಜಿಸಿದ್ದ ನೇಮಕಾತಿ ಪರೀಕ್ಷೆಯನ್ನು ಸೇನಾ ಪ್ರಾಧಿಕಾರ ರದ್ದುಗೊಳಿಸಿದೆ.

#Correction: After paper leak, Army recruitment exam for diff posts cancelled in centres of Pune Zone & not across India,as reported earlier
— ANI (@ANI_news) February 26, 2017
ಸೋರಿಕೆ ಜಾಲದಲ್ಲಿ ಕೆಲ ಸೇನಾ ನೇಮಕಾತಿ ಪ್ರಾಧಿಕಾರದ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ. ಸೇನೆಯ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭಾನುವಾರ ಪರೀಕ್ಷೆ ನಡೆಸಲಾಗಿದೆ.
ಅಕ್ರಮ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಥಾಣೆ ಅಪರಾಧ ಪತ್ತೆದಳ ದಾಳಿ ನಡೆಸಿ ಜಾಲದ ಲ್ಲಿ ಭಾಗಿಯಾಗಿದ್ದ ಮಹಾರಾಷ್ಟ್ರ ಮತ್ತು ಗೋವಾ ಮೂಲದ 18 ಜನರನ್ನು ಬಂಧಿಸಿದ್ದಾರೆ.
ಈ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ 350 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿದೆ. ಆದರೆ, ಅವರ ವಿರುದ್ಧ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗುವುದು.
ಮತ್ತು ಪರೀಕ್ಷಾ ಪ್ರಾಧಿಕಾರಕ್ಕೆ ಅವರ ದಾಖಲೆಗಳನ್ನು ಕಳಿಸಿಕೊಡಲಾಗುವುದು ಎಂದು ಥಾಣೆ ಪೊಲೀಸ್ ಉಪ ಆಯುಕ್ತ ಪರಾಗ್ ಮನೆರೆ ತಿಳಿಸಿದ್ದಾರೆ. .












Click it and Unblock the Notifications