ಜಮ್ಮುವಿನಲ್ಲಿ ಉಗ್ರರ ದಾಳಿ: ಸೇನೆ ಪ್ರತಿದಾಳಿಗೆ ಇಬ್ಬರು ಉಗ್ರರ ಬಲಿ

ಜಮ್ಮು, ಕಾಶ್ಮೀರ, ಅಕ್ಟೋಬರ್ 24: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ದಾಳಿ ನಡೆಸಿದ್ದು, ಭಾರತೀಯ ಸೇನಾ ಪಡೆ ಬುಧವಾರ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

ಶ್ರೀನಗರ ಹೊರವಲಯವಾದ ನೌಗಾಮ್ ಸೂತು ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಖಚಿತ ಮಾಹಿತಿಗಳು ಲಭ್ಯವಾದ ಹಿನ್ನಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದರು.

ಸೇನಾಪಡೆಗಳು ಕಾರ್ಯಾಚರಣ ಆರಂಭಿಸುತ್ತಿದ್ದಂತೆಯೇ ಅಡಗಿಕುಳಿತಿದ್ದ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಕಾರ್ಯಾಚರಣೆಯನ್ನು ಚುರುಕುಗೊಳಿಸಿರುವ ಸೇನಾಪಡೆಗಳು ದಿಟ್ಟ ಉತ್ತರವನ್ನೇ ನೀಡಿದ್ದು, ಇದೀಗ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

Army shot two terrorists in Nowgam district

ಆ ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದಿವೆ. ಈ ನಡುವೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಅಧಿಕಾರಿಗಳು ಯಾವುದೇ ಅಹಿತಕರ ಘಟನೆಗಳು ಸಂಭವಿಸಬಾರದು ಎಂದು ಸ್ಥಳದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆಂದು ವರದಿಗಳು ತಿಳಿಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+