ಶಾಸಕನನ್ನು ಬಂಧಿಸಿ: ಅಲಹಾಬಾದ್‌ ಹೈಕೋರ್ಟ್ ನಿರ್ದೇಶನ

Posted By:
Subscribe to Oneindia Kannada

ಲಖನೌ (ಉತ್ತರ ಪ್ರದೇಶ): ಉನ್ನಾವೊದಲ್ಲಿ ನಡೆದ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಅವರನ್ನು ವಶಕ್ಕೆ ತೆಗೆದುಕೊಂಡರೆ ಸಾಲದು, ಅವರನ್ನು ಬಂಧಿಸಿ ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಪ್ರಕರಣದ ತನಿಖೆಯ ಪ್ರಗತಿಯ ವರದಿಯನ್ನು ಮೇ 2ರಂದು ಸಲ್ಲಿಸುವಂತೆಯೂ ಹೈಕೋರ್ಟ್‌ ಸಿಬಿಐಗೆ ಸೂಚಿಸಿದೆ.

ಮೋದಿ ಮೌನ, ಸಚಿವರೂ ಮೌನ. ಬಾಯಿ ಬಿಟ್ಟಿದ್ದು ವಿಕೆ ಸಿಂಗ್ ಮಾತ್ರ

18 ವರ್ಷದ ಯುವತಿಯ ಮೇಲೆ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಕುಲದೀಪ್ ಸೆಂಗರ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಭರವಸೆ ನೀಡಿದ್ದರು. ಸೆಂಗರ್ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಆದರೆ ಬಂಧಿಸಿಲ್ಲ ಎಂದು ಉತ್ತರ ಪ್ರದೇಶ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿತ್ತು.

Arrest MLA Kuldeep Singh Sengar, Allahabad High Court directs CBI

ಕಾನೂನಿಗೆ ಅನುಗುಣವಾಗಿ ಕಟ್ಟುನಿಟ್ಟಾಗಿ ವಿಚಾರಣೆ ನಡೆಸಬೇಕು. ಪ್ರಕರಣದಲ್ಲಿ ಇತರೆ ಆರೋಪಿಗಳ ಜಾಮೀನು ರದ್ದು ಮಾಡುವ ಸಂಬಂಧ ಅರ್ಜಿ ಸಲ್ಲಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ.ಬಿ. ಭೋಸಲೆ ಮತ್ತು ನ್ಯಾಯಮೂರ್ತಿ ಸುನೀತ್ ಕುಮಾರ್, ಸಿಬಿಐಗೆ ನಿರ್ದೇಶನ ನೀಡಿದೆ.

ಉನ್ನಾವೋ ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕನನ್ನು ವಶಕ್ಕೆ ಪಡೆದ ಸಿಬಿಐ

ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯದ ಪರಿವೀಕ್ಷಣೆಯಡಿ ನಡೆಸಬೇಕು ಮತ್ತು ಈ ಅರ್ಜಿಯನ್ನು ಸಾರ್ಜನಿಕ ಹಿತಾಸಕ್ತಿ ಅರ್ಜಿ ಎಂದು ಪರಿಗಣಿಸಬೇಕು ಎಂಬುದಾಗಿ ಹಿರಿಯ ವಕೀಲ ಗೋಪಾಲ್ ಸ್ವರೂಪ್ ಚತುರ್ವೇದಿ ಅವರ ಪತ್ರದ ಆಧಾರದಲ್ಲಿ ನ್ಯಾಯಪೀಠ ಈ ಆದೇಶ ಹೊರಡಿಸಿದೆ.

ಅತ್ಯಾಚಾರ ಘಟನೆಗೆ ಸಂಬಂಧಿಸಿದಂತೆ ಸಿಬಿಐ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದು, ಸೆಂಗರ್ ಅವರನ್ನು ಶುಕ್ರವಾರ ಮುಂಜಾನೆ ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Allahabad High Court on Friday directed the CBI to arrest uttar pradesh BJP MLA Kuldeep Singh Sengar, accused in the Unnao rape case.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ