ಇಂದಿರಾ ಗಾಂಧಿ ಸ್ವರ್ಗದಿಂದ ಬಂದರೂ 370ನೇ ಆರ್ಟಿಕಲ್ ಜಾರಿ ಮಾಡಲು ಸಾಧ್ಯವಿಲ್ಲ; ಅಮಿತ್ ಶಾ

ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ಮತ್ತೆ ಜಾರಿ ಮಾಡುವ ಬಗ್ಗೆ ಅಮಿತ್ ಶಾ ಮಾತನಾಡಿದ್ದು, ಇಂದಿರಾಗಾಂಧಿ ಸ್ವರ್ಗದಿಂದ ಮರಳಿ ಬಂದರೂ ಅದನ್ನು ಮಾಡಲು ಆಗುವುದಿಲ್ಲ ಎಂದು ಹೇಳಿದ್ದಾರೆ. 2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರವ ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ್ದಲ್ಲದೆ, ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಂಗಡಿಸಲಾಗಿದೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ನಿರತವಾಗಿರುವ ಅಮಿತ್ ಶಾ, ಈ ಹೇಳಿಕೆ ನೀಡುವ ಮೂಲಕ ಇಂಡಿಯಾ ಒಕ್ಕೂಟಕ್ಕೆ ತಿರುಗೇಟು ನೀಡಿದ್ದಾರೆ. "ಇಂದಿರಾ ಗಾಂಧಿಯವರು ಸ್ವರ್ಗದಿಂದ ವಾಪಸ್ ಬಂದರೂ, ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ಮರುಸ್ಥಾಪಿಸಲು ಆಗುವುದಿಲ್ಲ" ಎಂದು ಹೇಳಿದರು.

Article 370 will not be restored in jammu and kashmir amit shah indira gandhi

ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಇನ್ನು ನಾಲ್ಕು ತಲೆಮಾರು ಕಳೆದರೂ ದಲಿತರು, ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ಜಾತಿಗಳಿಗೆ ಮೀಸಲಾದ ಮೀಸಲಾತಿಯನ್ನು ಮುಸ್ಲಿಮರು ಪಡೆಯಲು ಸಾಧ್ಯವಿಲ್ಲ ಎನ್ನುವುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೆನಪಿಟ್ಟುಕೊಳ್ಳಬೇಕು ಎಂದು ಅಮಿತ್ ಶಾ ಗುಡುಗಿದರು.

ಕೆಲವು ದಿನಗಳ ಹಿಂದೆ ಮುಸ್ಲಿಂ ವಿಸ್ವಾಂಸರು ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿ ಮಾಡಿ ಮುಸ್ಲಿಮರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಮುಸ್ಲಿಮರಿಗೆ ಮೀಸಲಾತಿ ನೀಡಬೇಕಾದರೆ, ಎಸ್‌ಸಿ, ಎಸ್‌ಟಿ, ಒಬಿಸಿಗಳಿಗೆ ಮೀಸಲಾತಿಯನ್ನು ಕಡಿತಗೊಳಿಸಬೇಕು, ನೀವು ಮಾತ್ರವಲ್ಲ ನಿಮ್ಮ ನಾಲ್ಕು ತಲೆಮಾರುಗಳು ಬಂದರೂ ಎಸ್‌ಸಿ, ಎಸ್‌ಸಿ, ಒಬಿಸಿಗಳಿಗೆ ಮೀಸಲಾದ ಕೋಟವಾನ್ನು ರದ್ದುಗೊಳಿಸಿ ಮುಸ್ಲಿಮರಿಗೆ ನೀಡಲು ಸಾಧ್ಯವಿಲ್ಲ ಎಂದರು.

ಎಂವಿಎ ರಾಜ್ಯದ ಸಂಪನ್ಮೂಲಗಳನ್ನು ಬಳಸಿಕೊಂಡು ಮಹಾರಾಷ್ಟ್ರದ ಹಣವನ್ನು ದೆಹಲಿಗೆ ಕಳಿಸುತ್ತಾರೆ. ಆದರೆ ಬಿಜೆಪಿ ನೇತೃತ್ವದ ಮಹಾಯುತಿ ಅಧಿಕಾರಕ್ಕೆ ಬಂದರೆ, ಮೋದಿ ಸರ್ಕಾರವು ಮಹಾರಾಷ್ಟ್ರದ ಅಭಿವೃದ್ಧಿಗಾಗಿ ದೆಹಲಿಯಿಂದ ಹಣವನ್ನು ಕೊಡುತ್ತದೆ ಎಂದು ಅಮಿತ್ ಶಾ ಭರವಸೆ ನೀಡಿದರು.

ಚುನಾವಣಾ ಪ್ರಚಾರದ ವೇಲೆ ಸಂವಿಧಾನದ ಪ್ರತಿಯನ್ನು ಕೊಂಡೊಯ್ಯುವ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಇತ್ತೀಚೆಗೆ ರಾಹುಲ್ ಗಾಂಧಿ ಅಂಬೇಡ್ಕರ್ ಅವರ ಸಂವಿಧಾನದ ಪ್ರತಿಯನ್ನು ಜನತೆಗೆ ತೋರಿಸುತ್ತಿರುವುದು ಕಂಡುಬಂತು. ಸಂಸತ್ತಿನಲ್ಲಿ ಪ್ರಮಾಣ ವಚನ ಸ್ವೀಕರಿಸುವಾಗ ಅದೇ ಪ್ರತಿಯನ್ನು ಬಳಸಿದ್ದರು. ಆದರೆ ಕೆಲವು ಪತ್ರಕರ್ತರು ಅದನ್ನು ಪರಿಶೀಲನೆ ಮಾಡಿದಾಗ ಖಾಲಿ ಹಾಳೆಗಳು ಇರುವುದು ಗಮನಕ್ಕೆ ಬಂದಿದೆ, ಖಾಲಿ ಹಾಳೆಯನ್ನು ತೋರಿಸಿ ಸಂವಿಧಾನವೆಂದು ನಂಬಿಸಿ ಬಾಬಾ ಸಾಹೇಬರಿಗೆ ಅವಮಾನ ಮಾಡಲಾಗಿದೆ, ರಾಹುಲ್ ಗಾಂಧಿ ಸಂವಿಧಾನವನ್ನು ಓದಿಲ್ಲ ಎಂದು ಅಮಿತ್ ಶಾ ಟೀಕಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+