ಅರುಣ್ ಜೇಟ್ಲಿಗೆ ಕರ್ನಾಟಕದೊಂದಿಗಿತ್ತು ಉತ್ತಮ ಬಾಂಧವ್ಯ
ಬೆಂಗಳೂರು, ಆಗಸ್ಟ್ 24: ಕರ್ನಾಟಕದೊಂದಿಗೆ ಅರುಣ್ ಜೇಟ್ಲಿಗೆ ಉತ್ತಮ ಬಾಂಧವ್ಯವಿತ್ತು. ಆರ್‌ವಿ ದೇಶಾಂಪಡೆ ಮತ್ತು ಅರುಣ್ ಜೇಟ್ಲಿ ಉತ್ತಮ ಸ್ನೇಹಿತರೂ ಆಗಿದ್ದರು.
ಹಾಗೆಯೇ ವಕೀಲರಾಗಿದ್ದ ಅರುಣ್ ಜೇಟ್ಲಿಯವರಿಗೆ ನ್ಯಾಯಮೂರ್ತಿ ರಾಮಾಜೋಯಿಸ್ ಅವರೊಂದಿಗೂ ಉತ್ತಮ ಒಡನಾಟವಿತ್ತು. ಅರುಣ್ ಜೇಟ್ಲಿಯವರು 2002ರಲ್ಲಿ ಬಿಜೆಪಿಯ ಕರ್ನಾಟಕ ರಾಜ್ಯ ಉಸ್ತುವಾರಿಯಾಗಿ ನೇಮಕವಾದರು. ಅಲ್ಲಿಂದ ರಾಜ್ಯಕ್ಕೆ ಬಂದು ಹೋಗುತ್ತಾ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರು.
ಅರುಣ್ ಜೇಟ್ಲಿಯವರು 1957 ಡಿಸೆಂಬರ್ 28 ರಂದು ಕಿಶನ್ ಹಾಗೂ ರತನ್ ಪ್ರಭಾ ಜೇಟ್ಲಿ ಎಂಬ ದಂಪತಿಗೆ ದೆಹಲಿಯಲ್ಲಿ ಜನಿಸಿದರು. ಇವರ ತಂದೆ ವಕೀಲರಾಗಿದ್ದರು.
ಜೇಟ್ಲಿ 1969-70ನೇ ವರ್ಷದ ಅವಧಿಯಲ್ಲಿ ದೆಹಲಿಯ ಸೇಂಟ್ ಕ್ಸೇವಿಯರ್ಸ್ ಶಾಲೆಯಲ್ಲಿ ಅಭ್ಯಾಸ ಮಾಡಿದರು. ಬಳಿಕ 1973ರಲ್ಲಿ ಇಲ್ಲಿನ ಶ್ರೀರಾಮ್ ಕಾಲೇಜ್ ಆಫ್ ಕಾಮರ್ಸ್ ಕಾಲೇಜಿನಲ್ಲಿ ವಾಣಿಜ್ಯ ಪದವಿ ಪಡೆದರು. 1977ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದ ಫ್ಯಾಕಲ್ಟಿ ಆಫ್ ದಿ ಲಾ ಎಂಬಲ್ಲಿ ಕಾನೂನು ಪದವಿ ಪಡೆದರು. ತಮ್ಮ ವಿದ್ಯಾರ್ಥಿ ಜೀವನದಲ್ಲೇ ವಿದ್ಯಾಭ್ಯಾಸದ ಮೂಲಕ ಉತ್ತಮ ಮಟ್ಟದ ಸಾಧನೆ ಮಾಡಿ ಪ್ರಶಸ್ತಿಗಳನ್ನು ಗಳಿಸಿದ್ದರು.
ಅರುಣ್ ಜೇಟ್ಲಿ ವಿದ್ಯಾರ್ಥಿಯಾಗಿದ್ದ ದಿನಗಳಲ್ಲಿಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸಕ್ರಿಯ ಸದಸ್ಯರಾಗಿದ್ದರು. 1999ರ ಚುನಾವಣೆಯ ಸಮಯದಲ್ಲಿ ಬಿಜೆಪಿ ಪಕ್ಷದ ವಕ್ತಾರರಾದರು. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಅಡಿಯಲ್ಲಿ ವಾಜಪೇಯಿ ಸರ್ಕಾರ ಅಧಿಕಾರಕ್ಕೆ ಬಂದಾಗ, ಮಾಹಿತಿ ಹಾಗೂ ಪ್ರಸಾರದ ರಾಜ್ಯ ಮಂತ್ರಿಯಾಗಿ ಜೇಟ್ಲಿ ನೇಮಕಗೊಂಡರು.

ಬಿಎಸ್‌ವೈ, ಜೇಟ್ಲಿ ನೇತೃತ್ವದಲ್ಲಿ ಕರ್ನಾಟಕದಲ್ಲಿ 79 ಸೀಟು ಗೆದ್ದಿದ್ದ ಬಿಜೆಪಿ
2004ರಲ್ಲಿ ವಿಧಾನಸಭೆ ಚುನಾವಣೆ ನಡೆಯಿತು. ಆ ಚುನಾವಣೆಯಲ್ಲಿ ಅರುಣ್ ಜೇಟ್ಲಿ ಹಾಗೂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ 79 ಸ್ಥಾನಗಳನ್ನು ಗಳಿಸಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು.

ಅರುಣ್ ಜೇಟ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದರು
ಅರುಣ್ ಜೇಟ್ಲಿಯವರು ಬಿಜೆಪಿಯ ಪ್ರಧಾನ ಕಾರ್ಯದರ್ಶಿಯೂ ಆಗಿದ್ದರು. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅರುಣ್ ಜೇಟ್ಲಿ ಅವರನ್ನು ರಾಜ್ಯ ಉಸ್ತುವಾರಿಯನ್ನಾಗಿ ನೇಮಿಸಲಾಗಿತ್ತು. ರಾಷ್ಟ್ರಮಟ್ಟದ ಪ್ರಮುಖ ಘಟನೆಗಳಾದ ಅಯೋಧ್ಯೆ ವಿವಾದದ ಕಾನೂನಾತ್ಮಕ ಚರ್ಚೆ, ಆರ್ಟಿಕಲ್ 370 ಕುರಿತು ಸಾಕಷ್ಟು ಉಪನ್ಯಾಸಗಳನ್ನು ನೀಡಿದ್ದರು. ಹೀಗಾಗಿ ಅವರು ರಾಜ್ಯಕ್ಕೆ ಹೊಸಬರೇನು ಆಗಿರಲಿಲ್ಲ.

ಅರುಣ್ ಜೇಟ್ಲಿ 2014ರಲ್ಲಿ ಅಮೃತಸರದ ಚುನಾವಣೆಯಲ್ಲಿ ಸೋತಿದ್ದರು
ಅರುಣ್ ಜೇಟ್ಲಿ 2014ರಲ್ಲಿ ಅಮೃತಸರದ ವಿಧಾನಸಭೆ ಚುನಾವಣೆಯಲ್ಲಿ ಸೋಲನ್ನನುಭವಿಸಿದ್ದರು. ಜೇಟ್ಲಿ ಅವರ ಬೌದ್ಧಿಕ ವಿಚಾರಧಾರೆ ಮತ್ತು ಅವರ ಮಾತಿನಲ್ಲಿ ಜನರ ಮನಸ್ಸನ್ನು ಗೆದ್ದಿದ್ದರು. ಬಳಿಕ ಅವರನ್ನು ರಾಜ್ಯ ಸಭೆ ಸದಸ್ಯರನ್ನಾಗಿ ಕರೆತರಲಾಯಿತು. ಪ್ರತಿಪಕ್ಷಗಳು ಕೇಳುವ ಪ್ರಶ್ನೆಗಳಿಗೆ ನಿರರ್ಗಳವಾಗಿ ಉತ್ತರಿಸುತ್ತಿದ್ದರು.

ಕರ್ನಾಟಕಕ್ಕೆ ಆಗಾಗ ಬಂದು ಹೋಗುತ್ತಿದ್ದ ಜೇಟ್ಲಿ
ಅರುಣ್ ಜೇಟ್ಲಿಯವರು ಕರ್ನಾಟಕಕ್ಕೆ ಆಗಾಗ ಭೇಟಿ ನೀಡುತ್ತಿದ್ದರು. 2004ರ ನಂತರವೂ ಅವರು ಬಂದು ಹೋಗುವುದನ್ನು ಮಾಡುತ್ತಿದ್ದರು. 2004ರಲ್ಲಿ ಕೇಂದ್ರದಲ್ಲಿ ವಾಜಪೇಯಿ ನೇತೃತ್ವದ ಸರ್ಕಾರ ಅಧಿಕಾರ ಕಳೆದುಕೊಂಡಿತು. ಆದರೂ ರಾಜ್ಯದ ಜೊತೆಗಿನ ಒಡನಾಟವನ್ನು ಮುಂದುವರೆಸಿದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications