ಗುಜರಾತ್: ಕಡೇ ಘಳಿಗೆಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ
ಅಹಮದಾಬಾದ್, ಡಿಸೆಂಬರ್ 8: ಮತದಾನಕ್ಕೆ ಕೆಲವೇ ಗಂಟೆಗಳಿರುವಂತೆ ಗುಜರಾತ್ ವಿಧಾನಸಭೆ ಚುಣಾವಣೆಗೆ ಭಾರತೀಯ ಜನತಾ ಪಕ್ಷ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ನಾಳೆ ಮೊದಲ ಹಂತದ ಮತದಾನ ನಡೆಯಲಿ್ದು ಮತದಾನಕ್ಕೆ ಕೇವಲ 16 ಗಂಟೆಗಳಿರುವಾಗ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಒಂದು ಹಂತದಲ್ಲಿ ಗುಜರಾತ್ ನಲ್ಲಿ ಬಿಜೆಪಿ ಪ್ರಣಾಳಿಕೆಯನ್ನೇ ಬಿಡುಗಡೆ ಮಾಡದೆ ಚುನಾವಣೆ ಎದುರಿಸಲಿದೆ ಎಂದುಕೊಳ್ಳಲಾಗಿತ್ತು. ಆದರೆ ಸಾಂಪ್ರದಾಯಕತೆಯನ್ನು ನೆಚ್ಚಿಕೊಂಡ ಬಿಜೆಪಿ ತಾನೂ ಪ್ರಣಾಳಿಕೆ ಬಿಡುಗಡೆ ಮಾಡಿದೆ.
ಇಂದು ಮೂರು ಗಂಟೆಗೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಅರುಣ್ ಜೇಟ್ಲಿ, ಗುಜರಾತ್ ನ ಜಿಡಿಪಿ ದೇಶದ ಜಿಡಿಪಿಗಿಂತ ಹೆಚ್ಚಿದ. ಕಳೆದ ಐದು ವರ್ಷಗಳಲ್ಲಿ ಗುಜರಾತ್ ಶೇಕಡಾ 10ರ ಸರಾಸರಿಯಲ್ಲಿ ಜಿಡಿಪಿ ಅಭಿವೃದ್ಧಿ ದರವನ್ನು ದಾಖಲಸಿದೆ ಎಂದು ಹೇಳಿದರು.
ಗುಜರಾತ್ ನಲ್ಲಿ ಕಾಂಗ್ರೆಸ್ ನೀಡಿರುವ ಭರವಸೆಗಳು ಸಾಂವಿಧಾನಿಕವಾಗಿ ಮತ್ತು ಆರ್ಥಿಕವಾಗಿ ಕಾರ್ಯಸಾಧುವಲ್ಲ ಎಂದು ಅವರು ವಾಗ್ದಾಳಿ ನಡೆಸಿದರು.
ಗುಜರಾತಿನಲ್ಲಿ ನಾಳೆ ಅಂದರೆ ಡಿಸೆಂಬರ್ 9ರಂದು ಮೊದಲ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 14ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 18ರ ಸೋಮವಾರ ಚುನಾವಣೆಯ ಫಲಿತಾಂಶ ಹೊರ ಬೀಳಲಿದೆ.












Click it and Unblock the Notifications