ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿತ್ತ ಸಚಿವ ಸ್ಥಾನಕ್ಕೆ ಅರುಣ್ ಜೇಟ್ಲಿ ಶೀಘ್ರವೇ ರಾಜಿನಾಮೆ?

ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರಿಂದ ಶೀಘ್ರವೇ ವಿತ್ತ ಸಚಿವ ಸ್ಥಾನಕ್ಕೆ ರಾಜಿನಾಮೆ ಸಲ್ಲಿಕೆ ಸಾಧ್ಯತೆ. ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅವರಿಗೆ ಗುಜರಾತ್ ಬಿಜೆಪಿ ಉಸ್ತುವಾರಿ ನೀಡಲು ಬಿಜೆಪಿ ಹೈಕಮಾಂಡ್ ಚಿಂತನೆ.

|
Google Oneindia Kannada News

Recommended Video

Modi Cabinet Reshuffle : Arun Jaitley wWll Be Out ? | Oneindia Kannada

ನವದೆಹಲಿ, ಸೆಪ್ಟಂಬರ್ 1: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರಿಗೆ ಇದೇ ವರ್ಷಾಂತ್ಯಕ್ಕೆ ಗುಜರಾತ್ ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಉಸ್ತುವಾರಿ ವಹಿಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ, ಜೇಟ್ಲಿ ಅವರು ಕೇಂದ್ರ ಸರ್ಕಾರದಲ್ಲಿ ಹೊಂದಿರುವ ಮಹತ್ವದ ವಿತ್ತ ಖಾತೆಗೆ ರಾಜಿನಾಮೆ ಸಲ್ಲಿಸಿ ಗುಜರಾತ್ ಚುನಾವಣೆಯ ಜವಾಬ್ದಾರಿಯನ್ನು ಹೊರಲಿದ್ದಾರೆಂದು ಕೆಲವು ಉನ್ನತ ಮೂಲಗಳು ತಿಳಿಸಿವೆ.

Arun Jaitly may lose the Finance ministry, takes Gujarat BJP responsibility

ಏತನ್ಮಧ್ಯೆ, ಕೇಂದ್ರ ಸಚಿವ ಸಂಪುಟ ವಿಸ್ತರಣೆಯ ಸರ್ಕಸ್ ಈಗಾಗಲೇ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ 13 ಸಚಿವರು ತಮ್ಮ ಸ್ಥಾನಗಳಿಗೆ ರಾಜಿನಾಮೆ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ. ಇವರಲ್ಲಿ ರಾಜೀವ್ ಪ್ರತಾಪ್ ರೂಡಿ, ಅಶೋಕ್ ಗಣಪತಿ ರಾಜು, ಉಮಾಭಾರತಿ ಪ್ರಮುಖರು.

ಇದೀಗ, ಜೇಟ್ಲಿ ಅವರನ್ನು ಸಂಪುಟ ಜವಾಬ್ದಾರಿಯಿಂದ ಹೊರತುಪಡಿಸಿ ಅವರಿಗೆ ಗುಜರಾತ್ ಜವಾಬ್ದಾರಿ ನೀಡಲು ನಿರ್ಧರಿಸಲಾಗಿದೆ.

ಏತನ್ಮಧ್ಯೆ, ಕರ್ನಾಟಕದಿಂದ ರಾಜ್ಯಸಭಾ ಸದಸ್ಯೆಯಾಗಿ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇಲ್ಲವಾಗಿದೆ. ಅವರ ಬದಲಿಗೆ ಕರ್ನಾಟಕದಿಂದ ಹೊಸ ಮುಖದ ವ್ಯಕ್ತಿಯೊಬ್ಬರಿಗೆ ಸಚಿವ ಸ್ಥಾನ ನೀಡಲು ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.

English summary
Central finance minister Arun Jaitley may lose his post as BJP high command has decided to give Gujarat BJP's responsibility as the state will face Assembly elections this year end, says the sources.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X