ಅರುಣಾಚಲಪ್ರದೇಶ: 3 ಬಿಜೆಪಿ ಶಾಸಕರು ಅವಿರೋಧವಾಗಿ ಆಯ್ಕೆ

ಇಟಾನಗರ್, ಮಾರ್ಚ್ 29: ಅರುಣಾಚಲಪ್ರದೇಶ ವಿಧಾನಸಭಾ ಚುನಾವಣೆ ನಡೆಯುವುದಕ್ಕೆ ಮುಂಚಿತವಾಗೇ ಬಿಜೆಪಿ ತನ್ನ ಖಾತೆಯನ್ನು ತೆರೆದಿದೆ. ಮೂವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಈ ಕ್ಷೇತ್ರಗಳಿಗೆ ಸಲ್ಲಿಕೆಯಾಗಿರುವ ಪ್ರತಿಪಕ್ಷಗಳ ಅಭ್ಯರ್ಥಿಗಳ ನಾಮಪತ್ರಗಳು ಅನರ್ಹಗೊಂಡಿರುವ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆಯನ್ನು ಖಚಿತಪಡಿಸಲಾಗಿದೆ.

ಮೂರು ಕ್ಷೇತ್ರಗಳಲ್ಲಿ ಜೆಡಿಯು ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡಿದೆ. ಜೊತೆಗೆ ಕಣದಲ್ಲಿದ್ದ 7 ಮಂದಿ ಪಕ್ಷೇತರ ಅಭ್ಯರ್ಥಿಗಳು ಕೊನೆಯ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಮತದಾನಕ್ಕೂ ಮುನ್ನವೇ ಬಿಜೆಪಿ 3 ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

Arunachal Pradesh Assembly elections: Three BJP candidates win unopposed

ಪಶ್ಚಿಮ ಸಿಯಾಂಗ್ ಜಿಲ್ಲೆಯ ಅಲಾಂಗ್ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಕೆಂಟೋ ಜಿನಿ, ಲರ್ ಸುಬಾನ್ಸಿರಿ ಜಿಲ್ಲೆಯ ಯಚುಲಿ ಕ್ಷೇತ್ರದಿಂದ ತಾಬಾ ತೇದಿರ್, ಪಶ್ಚಿಮ ಕಮೆಂಗ್ ಜಿಲ್ಲೆಯ ದಿರಾಂಗ್ ಸ್ಥಾನದಿಂದ ಕಣಕ್ಕಿಳಿದಿದ್ದ ಫುರ್ಪಾ ತ್ಸೆರಿಂಗ್ ಅವರು ಅವಿರೋಧವಾಗಿ ಅಯ್ಕೆಯಾಗಿದ್ದಾರೆ.

ನಾಮಪತ್ರ ತಿರಸ್ಕಾರ ಏಕೆ?: ಕಾಂಗ್ರೆಸ್ ಉಪಾಧ್ಯಕ್ಷ ಮಿಂಕಿರ್ ಲೊಲೆನ್ ಅವರು ತಮ್ಮ ತಂದೆ, ಸ್ವಾತಂತ್ರ್ಯ ಹೋರಾಟಗಾರ 104 ವರ್ಷದ ದೈನ್ ಲೊಲೆನ್ ಹೆಸರು ಬರೆಯುವ ಕಡೆ ಗ್ರಾಮದ ಹೆಸರು ಬರೆದಿದ್ದರು ವಯಸ್ಸು,ಮತದಾನ ಕ್ಷೇತ್ರದ ಬಗ್ಗೆ ಕೂಡಾ ವಿವರ ನೀಡಿರಲಿಲ್ಲ. ಉಳಿದ ಇಬ್ಬರು ಅಭ್ಯರ್ಥಿಗಳದ್ದು ಇದೇ ರೀತಿ ಸಮಸ್ಯೆಯಾಗಿದೆ.

2014ರ ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ 11 ವಿಧಾನಸಭಾ ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡಿತ್ತು.

ಅರುಣಾಚಲ ಪ್ರದೇಶದ 60 ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ 57 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ 47 ಹಾಗೂ ನ್ಯಾಷನಲ್ ಪೀಪಲ್ಸ್ ಪಾರ್ಟಿ(ಎನ್ ಪಿಪಿ) 30, ಜನತಾ ದಳ ಸೆಕ್ಯುಲರ್ 13, ಜೆಡಿಯು 17 ಹಾಗೂ ಎಐಪಿ 1 ಹಾಗೂ 17 ಪಕ್ಷೇತರರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.. ಅರುಣಾಚಲ ಪ್ರದೇಶದಲ್ಲಿ ಏಪ್ರಿಲ್ 11 ರಂದು ಒಂದೇ ಹಂತದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ಜೊತೆಯಲ್ಲೇ ನಡೆಯಲಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+