ದೆಹಲಿ ಸಿಎಂ ಕೇಜ್ರಿವಾಲ್ ಸಿಬಿಐ ವಶಕ್ಕೆ
ದೆಹಲಿಯಲ್ಲಿನ ಮದ್ಯದ ನೀತಿಯಲ್ಲಿನ ಭ್ರಷ್ಟಾಚಾರ ಆರೋಪದ ಮೇಲೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿದೆ. ಇದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಕ್ಕೂ ಮೊದಲು ಜಾರಿ ನಿರ್ದೇಶನಾಲಯ (ಇಡಿ) ಮಾರ್ಚ್ 21 ರಂದು ಅವರನ್ನು ಬಂದಿಸಿತ್ತು.
ಸಿಬಿಐ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ತನ್ನ ಹಿಡಿತವನ್ನು ಬಿಗಿಗೊಳಿಸುತ್ತಿದೆ. ನ್ಯಾಯಾಲಯದ ಅನುಮತಿ ಮೇರೆಗೆ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿದೆ. ರೋಸ್ ಅವೆನ್ಯೂ ಕೋರ್ಟ್ ಸಿಬಿಐಗೆ ವಿಚಾರಣೆಗೆ ಅನುಮತಿ ನೀಡಿದೆ. ಇದಕ್ಕೂ ಮುನ್ನ ಸಿಬಿಐ ಅರವಿಂದ್ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಿಂದ ರೌಸ್ ಅವೆನ್ಯೂ ಕೋರ್ಟ್‌ಗೆ ಕರೆದುಕೊಂಡು ಬಂದಿತ್ತು. ಸಿಬಿಐ ಅರವಿಂದ್ ಕೇಜ್ರಿವಾಲ್ ಅವರನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗೆ ಒಳಪಡಿಸಿದೆ.

ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗಾಗಿ ಸಿಬಿಐ ನ್ಯಾಯಾಲಯದಿಂದ ಕಸ್ಟಡಿಗೆ ಕೋರಿತ್ತು. ಇದನ್ನು ನ್ಯಾಯಾಲಯ ಅನುಮೋದಿಸಿತು. ಪ್ರಸ್ತುತ, ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಮತ್ತು ಆಮ್ ಆದ್ಮಿ ಪಕ್ಷದ ಕಚೇರಿಯ ಹೊರಗೆ ಭಾರೀ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಪ್ರತಿಭಟನೆ ನಡೆಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಈ ನಿಯೋಜನೆ ಮಾಡಲಾಗಿದೆ.
ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯವು ಅರವಿಂದ್ ಕೇಜ್ರಿವಾಲ್ ಅವರನ್ನು ಮದ್ಯದ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಿತ್ತು. ಅಂದಿನಿಂದ ಅವರು ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.
ಜಾಮೀನಿಗೆ ತಡೆ
ಮಂಗಳವಾರ, ಕೇಜ್ರಿವಾಲ್‌ಗೆ ಜಾಮೀನು ನೀಡಲು ನಿರಾಕರಿಸುವ ಮೂಲಕ ಹೈಕೋರ್ಟ್ ಕೆಳ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಿತ್ತು. ಕೆಳ ಹಂತದ ನ್ಯಾಯಾಲಯ ಕೇಜ್ರಿವಾಲ್‌ಗೆ ಜಾಮೀನು ನೀಡಿತ್ತು ಆದರೆ ತನಿಖಾ ಸಂಸ್ಥೆ ಈ ಆದೇಶದ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.
2022 ರಲ್ಲಿ ಪ್ರಕರಣ ದಾಖಲು
ಸಿಬಿಐ ಮತ್ತು ಇಡಿ 2022ರ ಆಗಸ್ಟ್‌ನಲ್ಲಿ ದೆಹಲಿ ಮದ್ಯ ನೀತಿಯ ವಿಷಯದಲ್ಲಿ ಅಕ್ರಮಗಳ ಕುರಿತು ಪ್ರಕರಣಗಳನ್ನು ದಾಖಲಿಸಿದ್ದವು. ಮದ್ಯ ನೀತಿ ಪ್ರಕರಣದಲ್ಲಿ ಇಡಿ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಅವರನ್ನು ಬಂಧಿಸಿತ್ತು. ಇನ್ನು ದೇಶದಲ್ಲಿ ಲೋಕಸಭಾ ಚುನಾವಣೆಗಳು ಇದ್ದಿದ್ದರಿಂದ ಪಕ್ಷದ ಪರ ಪ್ರಚಾರ ಕಾರ್ಯಗಳಲ್ಲಿ ಭಾಗವಹಿಸಲು ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಅಲ್ಲದೆ ಜೂನ್ 2ರಂದು ಶರಣಾಗುವಂತೆ ಸೂಚಿಸಿತ್ತು.












Click it and Unblock the Notifications