Arvind Kejriwal: ದೆಹಲಿ ಸಿಎಂ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ಶಾಕ್
ನವದೆಹಲಿ, ಮೇ 29: ದೆಹಲಿ ಅಬಕಾರಿ ನೀತಿಗೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನಿನ ಅವಧಿ ವಿಸ್ತರಣೆಗೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ಅವರ ಅರ್ಜಿ ಸ್ವೀಕರಿಸದೇ ಶಾಕ್ ನೀಡಿದೆ.
ಹೌದು, ಸಾರ್ವತ್ರಿಕ ಚುನಾವಣೆ 2024ಹಿನ್ನೆಲೆಯಲ್ಲಿ ಜೂನ್ 2ರವರೆಗೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 2ರಂದು ಮತ್ತೆ ಶರಣವಾಗುವಂತೆ ಸೂಚಿಸಿ ಆದೇಶಿಸಿತ್ತು. ಈ ಆದೇಶವನ್ನು ಮುಂದಿನ ಏಳು ದಿನಗಳವರೆಗೆ ವಿಸ್ತರಣೆ ಮಾಡುವಂತೆ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಿದ್ದರು.

ಇಂದು ಅರ್ಜಿಯನ್ನು ಸ್ವೀಕರಿಸದ ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್, ನಿಮ್ಮ ಮನವಿಯನ್ನು ಆಲಿಸುವುದಿಲ್ಲ ಎಂದು ಅರ್ಜಿ ತಿರಸ್ಕರಿಸಿದೆ. ನಿಯಮಿತ ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯಕ್ಕೆ ತೆರಳಲು ದೆಹಲಿ ಮುಖ್ಯಮಂತ್ರಿಗೆ ಅನುಮತಿ ನೀಡಲಾಗಿದೆ. ಆದ್ದರಿಂದ ಈ ಅರ್ಜಿಯನ್ನು "ನಿರ್ವಹಿಸಲು ಸಾಧ್ಯವಿಲ್ಲ" ಎಂದು ನ್ಯಾಯಾಲಯ ಹೇಳಿದೆ.
ವೈದ್ಯಕೀಯ ಕಾರಣ
ಜೈಲುವಾಸದ ಅವಧಿಯಲ್ಲಿ ಆರೋಗ್ಯದ ತೊಂದರೆಗಳು, ವೈದ್ಯಕೀಯ ಕಾರಣ ನೀಡಿ ಜಾಮೀನು ಅವಧಿ ವಿಸ್ತರಣೆಗೆ ಮನವಿ ಮಾಡಿದ್ದರು. ಜೈಲುವಾಸದ ಅವಧಿಯಲ್ಲಿ ಸಂಭವನೀಯ ದೀರ್ಘಕಾಲೀನ ಅನಾರೋಗ್ಯದಿಂದ ರಕ್ಷಣೆ ಪಡೆಯಲು ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕು ಎಂದು ಕೇಜ್ರಿವಾಲ್ ಹೇಳಿದ್ದರು.
ಸಿಎಂ ಕೇಜ್ರಿವಾಲರ ಆರೋಗ್ಯ ಸ್ಥಿತಿ, ಮನವಿ ಬಗ್ಗೆ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಅವರು ಜಾಮೀನಿನ ಮೇಲೆ ಹೊರಗಿದ್ದಾಗಲೂ ಸಾರ್ವಜನಿಕ ಸೇವೆಯಲ್ಲಿ ಲಭ್ಯವಿದ್ದಾರೆ ಎಂಬ ವಿಷಯವನ್ನು ತಿಳಿಸಿದ್ದಾರೆ.
ಕಾನೂನು ಪ್ರಕ್ರಿಯೆ, ಷರತ್ತು ಅನುಸರಿಸಲಾಗುತ್ತಿದೆ
ದೆಹಲಿ ಸಿಎಂ ಕೇಜ್ರಿವಾಲ್ ಅವರು ಯಾವುದೇ ರೀತಿಯಲ್ಲೂ ಕಾನೂನು ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವುದಿಲ್ಲ. ಅಲ್ಲದೇ ಸುಪ್ರೀಂ ಕೋರ್ಟ್ (ಮಧ್ಯಂತರ ಜಾಮೀನಿಗಾಗಿ) ನಿಗದಿಪಡಿಸಿದ ಷರತ್ತುಗಳನ್ನು ಅವರು ಅನುಸರಿಸುತ್ತಿದ್ದಾರೆ.
ಅಬಕಾರಿ ನೀತಿ 'ಹಗರಣ'ಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ 21 ದಿನಗಳ ಮಧ್ಯಂತರ ಜಾಮೀನು ನೀಡಿತ್ತು. ಕೊನೆಯ ಹಂತದ ಮತದಾನ ಪೂರ್ಣಗೊಂಡ ನಂತರ ಜೂನ್ 2 ರಂದು ಕೇಜ್ರಿವಾಲ್ ಶರಣಾಗುವಂತೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿ ನಿರ್ದೇಶಿಸಿತ್ತು.












Click it and Unblock the Notifications