Srinagar Blast: ಶ್ರೀನಗರ ಭೀಕರ ಸ್ಫೋಟದ ಬಗ್ಗೆ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ
Srinagar Blast: ದೆಹಲಿಯ ಕೆಂಪು ಕೋಟೆ ಸ್ಫೋಟ ಪ್ರಕರಣ ಮುನ್ನವೇ ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ತಡರಾತ್ರಿ ಮತ್ತೊಂದು ಭೀಕರ ದುರಂತ ನಡೆದಿದೆ. ಘಟನೆಯಲ್ಲಿ ಸಾವು-ನೋವುಗಳು ಕೂಡ ಆಗಿವೆ. ಇನ್ನೂ ಕುರಿತು ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದಾರೆ. ಹಾಗಾದ್ರೆ ಅವರು ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈ ಶ್ರೀನಗರ ಸ್ಫೋಟ ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ಅವರವಿಂದ್ ಕೇಜ್ರಿವಾಲ್ ಅವರು, "ಇದು ಅಂತ್ಯತ ದುಃಖಕರ ವಿಷಯವಾಗಿದೆ," ಎಂದು ಹೇಳಿದ್ದಾರೆ. ಅಲ್ಲದೆ ಭದ್ರತಾ ಲೋಪದ ಬಗ್ಗೆ ಕೇಂದ್ರವನ್ನು ಪ್ರಶ್ನಿಸಿದ್ದಾರೆ. ಇನ್ನೈ ದುರಂತದಲ್ಲಿ ಕನಿಷ್ಠ 9 ಮಂದಿ ಸಾವನ್ನಪ್ಪಿದ್ದು, 24ಕ್ಕೂ ಹೆಚ್ಚು ಸಿಬ್ಬಂದಿ ಮತ್ತು ಮೂವರು ನಾಗರಿಕರು ಗಾಯಗೊಂಡಿರುವುದಾಗಿ ತಿಳಿದುಬಂದಿದೆ.

ಬೀಕರ ಸ್ಫೋಟದಲ್ಲಿ ಗಾಯಗೊಂಡವರನ್ನು ಶ್ರೀನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗಾಯಾಳುಗಳಲ್ಲಿ ಪೊಲೀಸರು, ವಿಧಿವಿಜ್ಞಾನ ಸಿಬ್ಬಂದಿ ಸೇರಿದ್ದಾರೆ ಎಂದು ಪೊಲೀಸ್ ಮೂಲಗಳಲು ತಿಳಿಸಿವೆ ಎಂದು ತಿಳಿದುಬಂದಿದೆ.
ಭಾರೀ ಸ್ಫೋಟ ಹಿನ್ನೆಲೆ ಠಾಣೆ ಕಟ್ಟಡಕ್ಕೂ ಹಾನಿ ಆಗಿದೆ. ಸ್ಥಳದಲ್ಲೇ ಏಳು ಮೃತದೇಹಗಳು ಪತ್ತೆ ಆಗಿದ್ದು, ಮತ್ತೆರಡು ಮೃತದೇಹಗಳನ್ನೂ ನಿಯಂತ್ರಣ ಕೊಠಡಿಗೆ ರವಾನೆ ಮಾಡಲಾಗಿದೆ. ಮೃತರ ಗುರುತು ಪತ್ತೆ ಮಾಡುವ ಕಾರ್ಯ ನಡೆಯುತ್ತಿದೆ. ಇತ್ತೀಚೆಗೆ ಹರಿಯಾಣದ ಫರಿದಾಬಾದ್‌ನಲ್ಲಿ ಪತ್ತೆಯಾದ ಮತ್ತು ವಶಪಡಿಸಿಕೊಂಡಿದ್ದ ಸ್ಫೋಟಕ ವಸ್ತುಗಳನ್ನು ನೌಗಮ್ ಠಾಣೆಯಲ್ಲಿ ಪರೀಕ್ಷಿಸುವ ವೇಳೆ ಈ ಸ್ಫೋಟ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ನೌಗಮ್‌ನಲ್ಲಿ ಮಧ್ಯರಾತ್ರಿ ಸುಮಾರಿಗೆ ಸ್ಫೋಟ ಸಂಭವಿಸಿದೆ. ಮಾದರಿಗಳನ್ನು ಸಂಗ್ರಹಿಸುವಾಗ ದೊಡ್ಡ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ನೌಗಮ್ ಪೊಲೀಸ್ ಠಾಣೆ ಆವರಣದಲ್ಲಿ ಭೀಕರ ಸ್ಫೋಟ ಸಂಭವಿಸಿದ ಕಾರಣ ಅಲ್ಲಿನ ಸುತ್ತಮುತ್ತಲಿನ ಜನರು ಬೆಚ್ಚಿಬಿದ್ದಿದ್ದಾರೆ. ಫರಿದಾಬಾದ್‌ನಲ್ಲಿರುವ ಡಾ.ಮುಜಮ್ಮಿಲ್ ಗನೈ ಅವರ ಬಾಡಿಗೆ ನಿವಾಸದಿಂದ ಜಮ್ಮು & ಕಾಶ್ಮೀರ ಪೊಲೀಸರು 360 ಕಿಲೋ ಗ್ರಾಂಗಳಷ್ಟು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.












Click it and Unblock the Notifications