Delhi Assembly Election 2025: ಚುನಾವಣಾ ಆಯೋಗಕ್ಕೆ ಕೇಜ್ರಿವಾಲ್ ವಿಶೇಷ ಬೇಡಿಕೆ
ನವದೆಹಲಿ, ಫೆಬ್ರವರಿ 02: ದೆಹಲಿ ವಿಧಾನಸಭೆ ಚುನಾವಣೆ-2025ರ ಮತದಾನಕ್ಕೆ ಎರಡು ದಿನ ಬಾಕಿ ಇದೆ. ಫೆಬ್ರವರಿ 5ರ ಬುಧವಾರ 70 ಸದಸ್ಯ ಬಲದ ವಿಧಾನಸಭೆಗೆ ಮತದಾನ ನಡೆಯಲಿದೆ, ಫೆಬ್ರವರಿ 8ರಂದು ಫಲಿತಾಂಶ ಘೋಷಣೆಯಾಗಲಿದೆ. ರಾಜ್ಯದ ಎಎಪಿ ಸರ್ಕಾರ ಚುನಾವಣಾ ಆಯೋಗದ ಕಾರ್ಯ ವೈಖರಿಯ ಬಗ್ಗೆ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸುತ್ತಿದೆ. ಎಎಪಿ ಮುಖ್ಯಸ್ಥ, ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಆಯೋಗದ ಮುಂದೆ ಹೊಸ ಬೇಡಿಕೆಯನ್ನು ಇಟ್ಟಿದ್ದಾರೆ.
ಕೇಂದ್ರ ಚುನಾವಣಾ ಆಯೋಗಕ್ಕೆ ಅರವಿಂದ ಕೇಜ್ರಿವಾಲ್ ಪತ್ರವೊಂದನ್ನು ಬರೆದಿದ್ದಾರೆ. ದೆಹಲಿ ಚುನಾವಣೆ ಉಸ್ತುವಾರಿ ನೋಡಿಕೊಳ್ಳಲು ಸ್ವತಂತ್ರ ವೀಕ್ಷಕರನ್ನು ನಿಯೋಜನೆ ಮಾಡಬೇಕು. ಎಎಪಿ ಕಾರ್ಯಕರ್ತರ ಮೇಲೆ ದಾಳಿ ನಡೆಯುವಾಗ ಕರ್ತವ್ಯ ನಿರ್ವಹಣೆ ಮಾಡಲು ವಿಫಲರಾದ ಪೊಲೀಸರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಧಿಕಾರಿಗಳ ದುರ್ಬಳಕೆ: ಅರವಿಂದ ಕೇಜ್ರಿವಾಲ್ ಚುನಾವಣೆಗೆ ನವದೆಹಲಿ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಕ್ಷೇತ್ರದಲ್ಲಿ ಮತದಾರರ ಪಟ್ಟಿಯನ್ನು ಬಿಜೆಪಿ ದುರ್ಬಳಕೆ ಮಾಡಿಕೊಂಡಿದೆ ಎಂದು ಅರವಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ. ಆದ್ದರಿಂದ ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ನವದೆಹಲಿ ಕ್ಷೇತ್ರದಲ್ಲಿ ಅಧಿಕಾರಿಗಳು ಬಿಜೆಪಿಯ ಆದೇಶದಂತೆ ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಎಎಪಿ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಪಕ್ಷಪಾತ ಮಾಡುವ ಅಧಿಕಾರಿಗಳನ್ನು ಅಮಾನತು ಮಾಡಿ, ಕ್ಷೇತ್ರಕ್ಕೆ ಸ್ವತಂತ್ರ ವೀಕ್ಷಕರನ್ನು ನೇಮಕ ಮಾಡಿ ಎಂದು ಅರವಿಂದ ಕೇಜ್ರಿವಾಲ್ ಒತ್ತಾಯಿಸಿದ್ದಾರೆ.
ನವದೆಹಲಿಯಲ್ಲಿ ಬಿಜೆಪಿಯಿಂದ ಪರ್ವೇಶ್ ವರ್ಮಾ ಮತ್ತು ಕಾಂಗ್ರೆಸ್‌ನಿಂದ ಸಂದೀಪ್ ದೀಕ್ಷಿತ್ ಅಭ್ಯರ್ಥಿಗಳು. ದೆಹಲಿಯ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಕಣಕ್ಕಿಳಿದಿರುವ ಕ್ಷೇತ್ರವಾಗಿರುವ ಕಾರಣ ಈ ಕ್ಷೇತ್ರದ ಮೇಲೆ ದೇಶದ ಗಮನವಿದೆ. ಚುನಾವಣೆಯಲ್ಲಿ ಎಎಪಿ ಗೆದ್ದರೆ ಕೇಜ್ರಿವಾಲ್ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಎಎಪಿ ಪಕ್ಷ ಈಗಾಗಲೇ ಘೋಷಣೆ ಮಾಡಿದೆ.
ಕ್ಷೇತ್ರದಲ್ಲಿ ಎಎಪಿ ಕಾರ್ಯಕರ್ತರಿಗೆ ರಕ್ಷಣೆ ಬೇಕಾಗಿದೆ. ಎಎಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಯುವಾಗ ಕರ್ತವ್ಯ ನಿರ್ವಹಣೆ ಮಾಡದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಎಂದು ಅರವಿಂದ ಕೇಜ್ರಿವಾಲ್ ಪತ್ರದಲ್ಲಿ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.
ಬಿಜೆಪಿ ಅಧಿಕಾರ ದುರುಪಯೋಗ ಮತ್ತು ಬೆದರಿಕೆ ತಂತ್ರದ ಮೂಲಕ ದೆಹಲಿ ಚುನಾವಣೆಯನ್ನು ಗೆಲ್ಲಲು ಹೊರಟಿದೆ. ಆದರೆ ದೆಹಲಿಯ ಜನರು ಬುದ್ಧಿವಂತರು ಅವರು ಮತಯಂತ್ರದ ಬಟನ್ ಒತ್ತುವ ಮೂಲಕ ಬಿಜೆಪಿಯವರನ್ನು ಹೀನಾಯವಾಗಿ ಸೋಲಿಸಲಿದ್ದಾರೆ ಎಂದು ಅರವಿಂದ ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬುಧವಾರ ನಡೆಯುವ ರಾಷ್ಟ್ರ ರಾಜಧಾನಿ ದೆಹಲಿಯ ಚುನಾವಣೆಯಲ್ಲಿ ಎಎಪಿ, ಬಿಜೆಪಿ, ಕಾಂಗ್ರೆಸ್ ಪ್ರಮುಖ ಎದುರಾಳಿಗಳು. ಬಿಜೆಪಿ ಮತ್ತು ಎಎಪಿ ನಡುವೆ ಪ್ರಬಲ ಪೈಪೋಟಿ ಇದೆ ಎಂಬ ಮಾಹಿತಿ ಸಿಕ್ಕಿದೆ. 2015, 2020ರ ಚುನಾವಣೆಯಲ್ಲಿ ಗೆದ್ದು ರಾಜ್ಯದಲ್ಲಿ ಅಧಿಕಾರ ಹಿಡಿದಿರುವ ಎಎಪಿ 2025ರ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸುವ ಉತ್ಸಾಹದಲ್ಲಿದೆ.
ನವದೆಹಲಿ ಕ್ಷೇತ್ರದಲ್ಲಿ 2013ರ ಮೊದಲ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ವಿರುದ್ಧ 44,269 ಮತಗಳ ಅಂತರದಿಂದ ಗೆಲುವು ಸಾಧಿಸಿದರು. 2015ರ ಚುನಾವಣೆಯಲ್ಲಿ ಅವರು 57,213 ಮತಗಳು ಮತ್ತು 2020ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ 46,758 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications