Arvind Kejriwal: ಮಧ್ಯಂತರ ಜಾಮೀನು ವಿಸ್ತರಣೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅರವಿಂದ್ ಕೇಜ್ರಿವಾಲ್
ನವದೆಹಲಿ, ಮೇ. 27: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ನೀಡಲಾಗಿರುವ ಮಧ್ಯಂತರ ಜಾಮೀನನ್ನು ಇನ್ನು ಏಳು ದಿನಗಳ ಕಾಲ ವಿಸ್ತರಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೆಚ್ಚುವರಿ ಏಳು ದಿನಗಳ ಮಧ್ಯಂತರ ಜಾಮೀನು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಗಂಭೀರವಾದ ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಪಿಇಟಿ-ಸಿಟಿ ಸ್ಕ್ಯಾನ್ ಮತ್ತು ಇತರ ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸುವು ಅತ್ಯಗತ್ಯ ಎಂದು ಹೇಳಿ ಜಾಮೀನು ವಿಸ್ತರಣೆಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಹೇಳಿದೆ.

ಲೋಕಸಭೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ, ಏಳು ಹಂತದ ಲೋಕಸಭೆ ಚುನಾವಣೆಯ ಕೊನೆಯ ದಿನವಾದ ಜೂನ್ 1 ರವರೆಗೆ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಜೂನ್ 2 ರಂದು ಶರಣಾಗಲು ಮತ್ತು ಜೈಲಿಗೆ ಮರಳಲು ಸೂಚಿಸಿದೆ. ಈಗ ಅರವಿಂದ್ ಕೇಜ್ರಿವಾಲ್ ಇನ್ನು ಏಳು ದಿನಗಳ ಕಾಲ ಜಾಮೀನು ವಿಸ್ತರಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಮ್ಯಾಕ್ಸ್ ಆಸ್ಪತ್ರೆಯ ವೈದ್ಯಕೀಯ ತಂಡ ಈಗಾಗಲೇ ಪ್ರಾಥಮಿಕ ಪರೀಕ್ಷೆಗಳನ್ನು ನಡೆಸಿದೆ. ಈ ಪರೀಕ್ಷೆಗಳು ಅವರ ಯೋಗಕ್ಷೇಮದ ವಿಚಾರಕ್ಕೆ ನಿರ್ಣಾಯಕ ಅಂಶಗಳಾಗಿವೆ ಎಂದು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ವಾದಿಸಿದ್ದಾರೆ. ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ಪೂರ್ಣಗೊಳಿಸಲು ಜಾಮೀನು ವಿಸ್ತರಣೆ ಬೇಕಿದ್ದು, ವಿಸ್ತರಣೆಯನ್ನು ಪರಿಗಣಿಸುವಂತೆ ನ್ಯಾಯಾಲಯವನ್ನು ಕೋರಿದ್ದಾರೆ.
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಅವರ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ ತಂಡವು ವಿಚಾರಣೆ ನಡೆಸಿ, ನಂತರ ಬಂಧಿಸಿತ್ತು. ಅದಕ್ಕೂ ಮುನ್ನ, ಮನೀಷ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರಂತಹ ಪ್ರಮುಖ ಎಎಪಿ ನಾಯಕರು ಭ್ರಷ್ಟಾಚಾರದ ಆರೋಪಗಳ ಮೇಲೆ ಈಗಾಗಲೇ ಜೈಲಿನಲ್ಲಿದ್ದಾರೆ. ಸಂಜಯ್ ಸಿಂಗ್ ಇತ್ತೀಚೆಗೆ ಜಾಮೀನಿನ ಮೇಲೆ ಹೊರಬಂದಿದ್ದಾರೆ.
ಅಬಕಾರಿ ನೀತಿ ಪ್ರಕರಣ ಸಂಪೂರ್ಣ ನಕಲಿ: ಕೇಜ್ರಿವಾಲ್
ಪ್ರಧಾನಿ ನರೇಂದ್ರ ಮೋದಿ ಅವರು ಅಬಕಾರಿ ನೀತಿ ಪ್ರಕರಣವನ್ನು 'ಸಂಪೂರ್ಣ ನಕಲಿ' ಎಂದು ಒಪ್ಪಿಕೊಂಡಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ. ಹೀಗಾಗಿ ಈ ವಿಷಯದಲ್ಲಿ ಬಂಧಿಸಿರುವ ಎಲ್ಲರನ್ನು ಈಗಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
"ತಾವು ಸಂಜಯ್ ಸಿಂಗ್ ಮತ್ತು ಮನೀಶ್ ಸಿಸೋಡಿಯಾ ಅವರೊಂದಿಗೆ 2021-22ರ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ ಎಂದು ಹೇಳಿದರು. ದೇಶಾದ್ಯಂತ 500 ಕ್ಕೂ ಹೆಚ್ಚು ದಾಳಿಗಳನ್ನು ನಡೆಸಲಾಗಿದೆ. ಹಲವಾರನ್ನು ಬಂಧಿಸಲಾಗಿದೆ. ಆದರೂ ಕೂಡ ಯಾವುದೇ ಸಾಕ್ಷಿಗಳು ಕಂಡುಬಂದಿಲ್ಲ" ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications