Get Updates
Get notified of breaking news, exclusive insights, and must-see stories!

ಸುಗ್ರೀವಾಜ್ಞೆ: ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿರನ್ನು ಭೇಟಿ ಮಾಡಲಿರುವ ಅರವಿಂದ್ ಕೇಜ್ರಿವಾಲ್

ನವದೆಹಲಿ, ಮೇ. 26: ದೆಹಲಿ ಆಡಳಿತಾತ್ಮಕ ಸೇವೆಗಳ ಮೇಲಿನ ಹಿಡಿತದ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರದ ಸುಗ್ರೀವಾಜ್ಞೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಯೋಜಿಸುತ್ತಿದ್ದೇನೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ ಹೇಳಿದ್ದಾರೆ.

ಗುರುವಾರ ಮುಂಬೈನ ಯಶವಂತರಾವ್ ಚವಾಣ್ ಸೆಂಟರ್‌ನಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾದ ನಂತರ ಅರವಿಂದ್ ಕೇಜ್ರಿವಾಲ್, ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಈ ವೇಳೆ ಅವರೊಂದಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಇದ್ದರು.

Arvind Kejriwal plans to meet Mallikarjun Kharge, Rahul Gandhi

ಶರದ್ ಪವಾರ್ ಅವರೊಂದಿಗಿನ ಭೇಟಿಯ ನಂತರ ಅರವಿಂದ್ ಕೇಜ್ರಿವಾಲ್, "ನಾಳೆ ನಾನು ಔಪಚಾರಿಕವಾಗಿ ಮಲ್ಲಿಕಾರ್ಜುನ ಖರ್ಗೆ ಜಿ ಮತ್ತು ರಾಹುಲ್ ಗಾಂಧಿಯವರ ಸಮಯವನ್ನು ತೆಗೆದುಕೊಂಡು ಈ ವಿಷಯದ ಬಗ್ಗೆ ಮಾತನಾಡುತ್ತೇನೆ" ಎಂದು ಮಾಧ್ಯಮದವರಿಗೆ ಹೇಳಿದ್ದಾರೆ.

ದೆಹಲಿ ಜನತೆಗೆ ಸಾಕಷ್ಟು ಅನ್ಯಾಯವಾಗುತ್ತಿದೆ ಎಂದು ಹೇಳಿರುವ ಅವರು, "2015 ರಿಂದ 2023 ರವರೆಗೆ ನಾವು ನ್ಯಾಯಾಲಯದಲ್ಲಿ ಪ್ರಕರಣದ ವಿರುದ್ಧ ಹೋರಾಡುತ್ತಿದ್ದೇವೆ. ಎಂಟು ವರ್ಷಗಳ ನಂತರ ದೆಹಲಿ ಜನರ ಪರವಾಗಿ ಆದೇಶವನ್ನು ನೀಡಲಾಗಿದೆ. ಆದರೆ, ಎಂಟು ದಿನಗಳಲ್ಲಿ ಅವರು ನಮ್ಮ ಅಧಿಕಾರವನ್ನು ಕಸಿದುಕೊಳ್ಳಲು ಸುಗ್ರೀವಾಜ್ಞೆಯನ್ನು ತಂದಿದ್ದಾರೆ" ಎಂದು ಕಿಡಿಕಾರಿದ್ದಾರೆ.

Arvind Kejriwal plans to meet Mallikarjun Kharge, Rahul Gandhi

ಸುಗ್ರೀವಾಜ್ಞೆ ವಿರುದ್ಧದ ಹೋರಾಟದಲ್ಲಿ ಬೆಂಬಲ ಕೋರಲು ಎಎಪಿ ಪ್ರತಿ ಪಕ್ಷವನ್ನು ಸಂಪರ್ಕಿಸುತ್ತಿದೆ ಎಂದು ದೆಹಲಿ ಸಿಎಂ ಹೇಳಿದ್ದಾರೆ. ಆದರೆ, ಕೇಂದ್ರದ ಸುಗ್ರೀವಾಜ್ಞೆ ವಿರುದ್ಧದ ಹೋರಾಟದಲ್ಲಿ ಎಎಪಿಯನ್ನು ಬೆಂಬಲಿಸುವ ಬಗ್ಗೆ ಕಾಂಗ್ರೆಸ್ ಇದುವರೆಗೆ ಯಾವುದೇ ನಿಲುವು ತೆಗೆದುಕೊಂಡಿಲ್ಲ.

"ಕಾಂಗ್ರೆಸ್ ಪಕ್ಷವು ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ ದೆಹಲಿಯ ಎನ್‌ಸಿಟಿ ಸರ್ಕಾರದ ಅಧಿಕಾರಗಳ ಮೇಲೆ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ತರಲಾದ ಸುಗ್ರೀವಾಜ್ಞೆಯ ವಿಷಯದ ಬಗ್ಗೆ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಇದು ತನ್ನ ರಾಜ್ಯ ಘಟಕಗಳು ಮತ್ತು ಇತರ ಸಮಾನ ಮನಸ್ಕ ಪಕ್ಷಗಳೊಂದಿಗೆ ಸಮಾಲೋಚಿಸಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.

ಆದರೆ, ಹಿರಿಯ ಕಾಂಗ್ರೆಸ್ ನಾಯಕ ಅಜಯ್ ಮಾಕನ್ ಸೇರಿದಂತೆ ಕೆಲವು ದೆಹಲಿ ಕಾಂಗ್ರೆಸ್ ನಾಯಕರು ಈ ವಿಷಯದಲ್ಲಿ ಪಕ್ಷವು ಎಎಪಿಯನ್ನು ಬೆಂಬಲಿಸುವ ಯೋಜನೆಗೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಟ್ವಿಟ್ಟರ್ ಪೋಸ್ಟ್‌ನಲ್ಲಿ, ಅಜಯ್ ಮಾಕೆನ್ ಅವರು ದೆಹಲಿ ಸಿಎಂಗೆ ಬೆಂಬಲ ನೀಡುವುದರ ವಿರುದ್ಧ ಆಡಳಿತಾತ್ಮಕದಿಂದ ಕಾನೂನಿನವರೆಗೆ ಕಾರಣಗಳನ್ನು ಸಹ ಹಾಕಿದ್ದಾರೆ. ಕೇಜ್ರಿವಾಲ್ ಅವರನ್ನು ಬೆಂಬಲಿಸುವುದು ನೆಹರು ಮತ್ತು ಅಂಬೇಡ್ಕರ್ ಅವರ ಬುದ್ಧಿವಂತಿಕೆಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಇತರ ಪಕ್ಷಗಳ ಬೆಂಬಲ ಕೇಳಿದ ಎಎಪಿ

ದೆಹಲಿಯಲ್ಲಿ ಸೇವೆಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಸುಗ್ರೀವಾಜ್ಞೆಯನ್ನು ವಿರೋಧಿಸಲು ಅರವಿಂದ್ ಕೇಜ್ರಿವಾಲ್, ಇತರ ಆಮ್ ಆದ್ಮಿ ಪಕ್ಷದ ನಾಯಕರೊಂದಿಗೆ ಸೇರಿ ವಿವಿಧ ಪಕ್ಷಗಳ ಬೆಂಬಲವನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಶರದ್ ಪವಾರ್ ಅವರನ್ನು ಭೇಟಿ ಮಾಡುವ ಮೊದಲು, ಕೇಜ್ರಿವಾಲ್ ಅವರು ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಅವರನ್ನು ಬುಧವಾರ ಅವರ ನಿವಾಸದಲ್ಲಿ ಭೇಟಿಯಾಗಿದ್ದರು.

ಇದಕ್ಕು ಮುನ್ನ ಮಂಗಳವಾರ ಕೋಲ್ಕತ್ತಾದಲ್ಲಿ ಅರವಿಂದ್ ಕೇಜ್ರಿವಾಲ್ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ಬೆಂಬಲ ಕೇಳಿದ್ದರು. ಉದ್ಧವ್ ಠಾಕ್ರೆ ಮತ್ತು ಮಮತಾ ಬ್ಯಾನರ್ಜಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬೆಂಬಲ ನೀಡುವ ಭರವಸೆ ನೀಡಿದ್ದಾರೆ. ಆದರೆ, ಕಾಂಗ್ರೆಸ್ ಇದುವರೆಗೂ ತನ್ನ ನಿಲುವು ತಿಳಿಸಿಲ್ಲ. ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಭೇಟಿ ಬಳಿಕ ಇದಕ್ಕೆ ಅಂತ್ಯ ದೊರೆಯಲಿದೆ.

ಕಳೆದ ವಾರ, ದೆಹಲಿ, ಅಂಡಮಾನ್ ಮತ್ತು ನಿಕೋಬಾರ್, ಲಕ್ಷದ್ವೀಪ, ದಮನ್ ಮತ್ತು ದಿಯು ಮತ್ತು ದಾದ್ರಾ ಮತ್ತು ನಗರ ಹವೇಲಿ ಗ್ರೂಪ್-ಎ ಅಧಿಕಾರಿಗಳ ವಿರುದ್ಧ ವರ್ಗಾವಣೆ ಮತ್ತು ಶಿಸ್ತಿನ ಪ್ರಕ್ರಿಯೆಗಾಗಿ ರಾಷ್ಟ್ರೀಯ ರಾಜಧಾನಿ ನಾಗರಿಕ ಸೇವಾ ಪ್ರಾಧಿಕಾರವನ್ನು ಸ್ಥಾಪಿಸಲು ಕೇಂದ್ರವು ಸುಗ್ರೀವಾಜ್ಞೆಯನ್ನು ತಂದಿದೆ. ಮೇ 11 ರಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪಿನಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್ ಸೇರಿದಂತೆ ಸೇವಾ ವಿಷಯಗಳಲ್ಲಿ ದೆಹಲಿ ಸರ್ಕಾರಕ್ಕೆ ಕಾರ್ಯನಿರ್ವಾಹಕ ಅಧಿಕಾರವನ್ನು ನೀಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+