Arvind Kejriwal: ಜೈಲಿಗೆ ಮರಳುವ ಮುನ್ನ ಬಿಜೆಪಿ ಭವಿಷ್ಯ ನುಡಿದ ಅರವಿಂದ್ ಕೇಜ್ರಿವಾಲ್
ನವದೆಹಲಿ, ಜೂನ್. 02 : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಮತ್ತೆ ತಿಹಾರ್ ಜೈಲಿಗೆ ವಾಪಸ್ ಆಗಿದ್ದಾರೆ. ಅದಕ್ಕೂ ಮುನ್ನ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುವ ದೇಶದಲ್ಲಿ ಏನಾಗಲಿದೆ..? ಬಿಜೆಪಿ ಭವಿಷ್ಯವೇನು ಎಂದು ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.
ಜಾಮೀನು ಅವಧಿ ಮುಗಿದ ಕಾರಣ ವಾಪಸ್ ಜೈಲಿಗೆ ಹೊರಟ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸರ್ವಾಧಿಕಾರದ ವಿರುದ್ಧ ದನಿ ಎತ್ತಿದ್ದರಿಂದ ಅವರನ್ನು ಜೈಲಿಗೆ ಹಾಕಲಾಯಿತು ಎಂದು ಆರೋಪಿಸಿದ್ದಾರೆ. ಜೊತೆಗೆ ಜೂನ್ ನಾಲ್ಕರಂದು ಪ್ರಕಟವಾಗುವ ಅಧಿಕೃತ ಫಲಿತಾಂಶದಲ್ಲಿ ಬಿಜೆಪಿ ಗೆಲುವು ಸಾಧಿಸುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

ತಿಹಾರ್ ಜೈಲು ಅಧಿಕಾರಿಗಳಿಗೆ ಶರಣಾಗುವ ಮುನ್ನ ದೆಹಲಿಯ ಎಎಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ತಮ್ಮ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂದು ಪ್ರಧಾನಿ ಮೋದಿ ದೇಶದ ಮುಂದೆ ಒಪ್ಪಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇದಕ್ಕೂ ಮೊದಲು ಕೇಜ್ರಿವಾಲ್ ಅವರು ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿಯವರ ಸ್ಮಾರಕ ಮತ್ತು ಕನ್ನಾಟ್ ಪ್ಲೇಸ್‌ನಲ್ಲಿರುವ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿದರು. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅವರ ಮೂರು ವಾರಗಳ ಮಧ್ಯಂತರ ಜಾಮೀನು ಜೂನ್ 1 ರಂದು ಕೊನೆಗೊಂಡಿದೆ. ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಕೋರಿ ಕೇಜ್ರಿವಾಲ್ ಸಲ್ಲಿಸಿರುವ ಮನವಿಯ ವಿಚಾರಣೆ ನಡೆಸಿರುವ ದೆಹಲಿ ನ್ಯಾಯಾಲಯವು ಜೂನ್ 5 ರವರೆಗೆ ಪ್ರಕರಣ ಮುಂದೂಡಿದೆ.
ಹಿಂದಿನ ದಿನ, ದೆಹಲಿ ಮುಖ್ಯಮಂತ್ರಿ ಲೋಕಸಭೆ ಚುನಾವಣೆಯಲ್ಲಿ ಪ್ರಚಾರಕ್ಕಾಗಿ 21 ದಿನಗಳ ಮಧ್ಯಂತರ ಜಾಮೀನು ನೀಡಿದ್ದಕ್ಕಾಗಿ ಸುಪ್ರೀಂ ಕೋರ್ಟ್‌ಗೆ ಕೃತಜ್ಞತೆ ಸಲ್ಲಿಸಿದ್ದಾರೆ. ದೆಹಲಿಯ ಡಿಡಿಯು ಮಾರ್ಗ್‌ನಲ್ಲಿರುವ ಎಎಪಿ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿದ್ದಾರೆ.
ಇನ್ನು, ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲು ಸಂಖ್ಯೆ 2 ರಲ್ಲಿ ಇರಿಸಲಾಗುವುದು ಎಂದು ತಿಹಾರ್ ಜೈಲಿನ ಮೂಲಗಳು ತಿಳಿಸಿವೆ. ಜೈಲಿನ ನಿಯಮಗಳ ಪ್ರಕಾರ, ಖೈದಿಯೊಬ್ಬ ಸೂರ್ಯಾಸ್ತದ ಮೊದಲು ಅಧಿಕಾರಿಗಳ ಮುಂದೆ ಶರಣಾಗಬೇಕು. ಶರಣಾಗುವ ಮೊದಲು, ಕೇಜ್ರಿವಾಲ್ ಶನಿವಾರ ತಮ್ಮ ನಿವಾಸದಲ್ಲಿ ಎಎಪಿಯ ರಾಜಕೀಯ ವ್ಯವಹಾರಗಳ ಸಮಿತಿಯ ಸಭೆಯನ್ನು ನಡೆಸಿದ್ದರು. ಜೊತೆಗೆ ಇಂಡಿಯಾ ಬ್ಲಾಕ್‌ನ ಸಭೆಯಲ್ಲಿಯೂ ಭಾಗವಹಿಸಿದ್ದರು.

ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಮತ್ತೊಮ್ಮೆ ಕ್ಲೀನ್ ಸ್ವೀಪ್ ಮಾಡಲಿದೆ ಎಂದು ಎಕ್ಸಿಟ್ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಬಿಜೆಪಿಗೆ 6 ರಿಂದ 7 ಸ್ಥಾನಗಳು ಮತ್ತು ದೆಹಲಿಯಲ್ಲಿ ಎಎಪಿ-ಕಾಂಗ್ರೆಸ್ ಮೈತ್ರಿಕೂಟಕ್ಕೆ 0-1 ಸ್ಥಾನಗಳು ಸಿಗಲಿವೆ ಎಂದು ಭವಿಷ್ಯ ನುಡಿದಿದೆ.
ಕಳೆದ ವಾರ, ಎಎಪಿ ಮುಖ್ಯಸ್ಥರು ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನಿನ ಏಳು ದಿನಗಳ ವಿಸ್ತರಣೆ ಮಾಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಕೇಜ್ರಿವಾಲ್ ಅವರು ತೂಕವನ್ನು ಕಳೆದುಕೊಳ್ಳುತ್ತಿರುವುದರಿಂದ ಮತ್ತು ಹೆಚ್ಚಿನ ಕೀಟೋನ್ ಮಟ್ಟವನ್ನು ಹೊಂದಿರುವ ಕಾರಣ ಪರೀಕ್ಷೆಗಳನ್ನು ನಡೆಸಲು ಸಮಯ ಬೇಕಾಗುತ್ತದೆ ಎಂದು ಹೇಳಿಕೊಂಡಿದ್ದರು.
ಆದರೆ, ಸುಪ್ರೀಂ ಕೋರ್ಟ್ ಅವರ ಮನವಿಯ ತುರ್ತು ಪಟ್ಟಿಗೆ ಸೇರಿಸಲು ನಿರಾಕರಿಸಿತು. ನಂತರ ಅವರು ಮಧ್ಯಂತರ ಜಾಮೀನು ಕೋರಿ ವಿಶೇಷ ಸಿಬಿಐ-ಇಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ನ್ಯಾಯಾಲಯ ತನ್ನ ಆದೇಶವನ್ನು ಜೂನ್ 5ಕ್ಕೆ ಕಾಯ್ದಿರಿಸಿದೆ. ಜಾರಿ ನಿರ್ದೇಶನಾಲಯ (ED) ಕೇಜ್ರಿವಾಲ್ ಅವರ ಮನವಿಯನ್ನು ವಿರೋಧಿಸಿದೆ, ಅವರು ಚುನಾವಣೆಯ ಉದ್ದಕ್ಕೂ ಪ್ರಚಾರ ಮಾಡಿದ್ದಾರೆ. ಯಾವುದೇ ಆರೋಗ್ಯ ಸಮಸ್ಯೆಗಳಿಲ್ಲ ಎಂದು ವಾದಿಸಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications