ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಬಸ್ ನಿಲ್ಲಿಸದ ಚಾಲಕರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಕೇಜ್ರಿವಾಲ್!

ನವದೆಹಲಿ, ಮೇ. 18: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಪ್ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆ ಘೋಷಿಸಿದೆ. ಆದರೆ, ದೇವರು ಕೊಟ್ಟರು ಪೂಜಾರಿ ಕೊಡುತ್ತಿಲ್ಲ ಎಂಬಂತೆ, ಬಸ್ ಚಾಲಕರು ಬಸ್‌ಗಳನ್ನೇ ನಿಲ್ಲಿಸುತ್ತಿಲ್ಲ. ಇದಕ್ಕೆ ಮಹಿಳೆಯರಿಗಾಗಿ ಬಸ್ ನಿಲುಗಡೆ ಮಾಡದ ಡಿಟಿಸಿ ಬಸ್‌ಗಳ ಚಾಲಕರು ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಗುರುವಾರ ಎಚ್ಚರಿಕೆ ನೀಡಿದ್ದಾರೆ.

ದೆಹಲಿಯಲ್ಲಿ ಮಹಿಳೆಯರು ಬಸ್‌ ನಿಲ್ಲಿಸುವಂತೆ ಕೇಳಿದರೂ ಬಸ್ ನಿಲ್ಲಿಸದೇ ಹೋಗುವ ವಿಡಿಯೋವನ್ನು ಹಂಚಿಕೊಂಡಿರುವ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಬಸ್ ಚಾಲಕನಿಗೆ ಶಿಕ್ಷೆ ವಿಧಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಆಪ್ ಸರ್ಕಾರವು 2019 ರಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಪ್ರಾರಂಭಿಸಿದೆ. ಅಂದಿನಿಂದ, ಅವರು ಈ ಸೌಲಭ್ಯವನ್ನು ಪಡೆದ ಮಹಿಳೆಯರ ಸಂಖ್ಯೆಯ ಕುರಿತು ಬಜೆಟ್‌ನಲ್ಲಿ ಪ್ರತಿ ವರ್ಷ ಸ್ಥಿತಿ ವರದಿಯನ್ನು ಮಂಡಿಸುತ್ತಾರೆ.

DTC Buses

"ಮಹಿಳೆಯರಿಗೆ ಉಚಿತ ಪ್ರಯಾಣದ ಕಾರಣ ಕೆಲವು ಚಾಲಕರು ಮಹಿಳೆಯರನ್ನು ನೋಡಿ ಬಸ್ ನಿಲ್ಲಿಸುವುದಿಲ್ಲ ಎಂಬ ದೂರುಗಳಿವೆ. ಇದನ್ನು ಸಹಿಸಲಾಗುವುದಿಲ್ಲ. ಈ ಬಸ್ ಚಾಲಕನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತಿದೆ" ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಟ್ವೀಟ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಹಿಂದಿ ಭಾಷೆಯಲ್ಲಿ ಟ್ವೀಟ್ ಮಾಡಲಾಗಿದೆ.

ಈ ತಿಂಗಳ ಆರಂಭದಲ್ಲಿ, ಅರವಿಂದ್ ಕೇಜ್ರಿವಾಲ್ ತಮ್ಮ ಸರ್ಕಾರವು ಮಧ್ಯಮ ವರ್ಗ ಮತ್ತು ಮೇಲ್ಮಧ್ಯಮ ವರ್ಗದ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ಪ್ರೀಮಿಯಂ ಬಸ್‌ಗಳನ್ನು ಓಡಿಸಲು ಖಾಸಗಿ ಅಗ್ರಿಗೇಟರ್‌ಗಳಿಗೆ ಯೋಜನೆಯನ್ನು ಪರಿಚಯಿಸುವುದಾಗಿ ಘೋಷಿಸಿದ್ದರು. ಆದರೆ, ಅವುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶವಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಪ್ರೀಮಿಯಂ ಬಸ್‌ಗಳು ಹವಾನಿಯಂತ್ರಿತವಾಗಿರುತ್ತವೆ. ಜೊತೆಗೆ ವೈ-ಫೈ, ಜಿಪಿಎಸ್, ಸಿಸಿಟಿವಿ ಮತ್ತು ಪ್ಯಾನಿಕ್ ಬಟನ್‌ಗಳನ್ನು ಒಳಗೊಂಡಿರುತ್ತವೆ. ದರಗಳನ್ನು ಅಗ್ರಿಗೇಟರ್‌ಗಳು ನಿರ್ಧರಿಸುತ್ತಾರೆ. ಆದರೆ, ನಿರ್ದಿಷ್ಟ ಮಾರ್ಗದ ದರವು ಡಿಟಿಸಿ ಬಸ್‌ಗಳ ದರಕ್ಕಿಂತ ಹೆಚ್ಚಿರುತ್ತದೆ ಎಂದು ಅರವಿಂದ್ ಕೇಜ್ರಿವಾಲ್ ಮಾಹಿತಿ ನೀಡಿದ್ದರು.

ದೆಹಲಿ ಸಾರಿಗೆ ನಿಗಮ (ಡಿಟಿಸಿ) ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ3,920 ಬಸ್‌ಗಳನ್ನು ಬಿಟ್ಟಿದ್ದು, ಅತಿದೊಡ್ಡ ಸಾರ್ವಜನಿಕ ಸಾರಿಗೆ ಘಟಕವಾಗಿದೆ. ಇವುಗಳಲ್ಲಿ 3,620 ಲೋ ಫ್ಲೋರ್ ಸಿಎನ್‌ಜಿ ಬಸ್‌ಗಳು ಮತ್ತು 300 ಎಲೆಕ್ಟ್ರಿಕ್ ಬಸ್‌ಗಳು ಕಾರ್ಯನಿರ್ವಹಿಸುತ್ತವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+