ದೆಹಲಿ ಮದ್ಯ ಹಗರಣ: ಕೇಜ್ರಿವಾಲ್ ಜಾಮೀನು ಅರ್ಜಿ ವಜಾ
ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಅವೆನ್ಯೂ ನ್ಯಾಯಾಲಯ ರದ್ದು ಪಡಿಸಿದೆ.
ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಸಿಎಂ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನವನ್ನು ಜುಲೈ 3 ರವರೆಗೆ ವಿಸ್ತರಿಸಿದೆ. ಇದರೊಂದಿಗೆ ಅಬಕಾರಿ ನೀತಿ ಪ್ರಕರಣದ ಆರೋಪಿ ವಿನೋದ್ ಚೌಹಾಣ್‌ನ ಕಸ್ಟಡಿಯನ್ನೂ ಸಹ ವಿಸ್ತರಿಸಲಾಗಿದೆ. ಇವರಿಬ್ಬರ ಕಸ್ಟಡಿ ಮುಗಿದಿದ್ದರಿಂದ ಇವರಿಬ್ಬರನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ಹಾಜರುಪಡಿಸಲಾಯಿತು.

ಇಡಿ ಹೇಳಿದ್ದೇನು?
ಇಡಿ ಪರವಾಗಿ ಎಎಸ್‌ಜಿ ಎಸ್‌ವಿ ರಾಜು ಮತ್ತು ಕೇಜ್ರಿವಾಲ್ ಪರ ವಕೀಲ ವಿಕ್ರಮ್ ಚೌಧರಿ ತಮ್ಮ ವಾದ ಮಂಡಿಸಿದರು. ಕೇಜ್ರಿವಾಲ್ ಅವರ ಬಂಧನ ಮತ್ತು ಬಂಧನವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ ಎಂದು ವಿಕ್ರಮ್ ಚೌಧರಿ ತಿಳಿಸಿದರು.
ಇನ್ನು ಇದೇ ಪ್ರಕರಣದಲ್ಲಿ ಬಂಧಿಸಲಾಗಿರುವ ವಿನೋಧ್ ಅವರ ವಿರುದ್ಧ ಇನ್ನೇನು ಕೆಲವೇ ದಿನಗಳಲ್ಲಿ ದೂರು ದಾಖಲಿಸಲಾಗುವುದು ಎಂದರು. ಇವರು ವಿರುದ್ಧ ಹಲವು ಆರೋಪಗಳಿರುವುದಾಗಿ ಸಹ ತಿಳಿಸಿದರು. ಬಿಆರ್‌ಎಸ್ ನಾಯಕಿ ಕವಿತಾ ಅವರ ಪಿಎ ಮೂಲಕ, 25 ಕೋಟಿ ರೂಗಳನ್ನು ವಿನೋದ್ ಅವರಿಗೆ ನೀಡಿದ್ದರು. ಅಲ್ಲದೆ ಗೋವಾ ಚುನಾವಣೆಯ ವೇಳೆಯೂ ಹಣ ಪಡೆದಿದ್ದಾರೆ ಎಂದು ಇಡಿ ವಕೀಲರು ಕೋರ್ಟ್‌ಗೆ ತಿಳಿಸಿದರು.

ಪಂಜಾಬ್ ಉದ್ಯಮಿಯಿಂದಲೂ ಲಂಚ
ದೆಹಲಿ ಮದ್ಯದ ವ್ಯಾಪಾರದಲ್ಲಿ ಹೂಡಿಕೆಗೆ ಪ್ರತಿಯಾಗಿ ಪಂಜಾಬ್‌ನ ಉದ್ಯಮಿಗಳಿಂದಲೂ ಲಂಚ ತೆಗೆದುಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಹೇಳಿದೆ. ಅಲ್ಲದೆ ಮೊದಲ ಬಾರಿಗೆ ರಾಜಕೀಯ ಪಕ್ಷವೊಂದರ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರನ್ನು ಮಾರ್ಚ್ 21 ರಂದು ಬಂಧಿಸಲಾಗಿತ್ತು. ಕೇಜ್ರಿವಾಲ್ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದರು. ದೇಶದಲ್ಲಿ ಲೋಕಸಭಾ ಚುನಾವಣೆಗಳು ಇದ್ದಿದ್ದರಿಂದ ಅರವಿಂದ್ ಕೇಜ್ರಿವಾಲ್ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲು ಕೋರ್ಟ್ ಜಾಮೀನು ನೀಡಿತ್ತು. ಅಲ್ಲದೆ ದೆಹಲಿ ಸಿಎಂ ಜಾಮೀನ ಅವಧಿ ಜೂನ್.2ಕ್ಕೆ ಮುಗಿಯಿತು. ಶರಣಾಗತಿಯ ದಿನಾಂಕ ಸಮೀಪಿಸುತ್ತಿದ್ದಂತೆ, ವೈದ್ಯಕೀಯ ಚಿಕಿತ್ಸೆಯನ್ನು ಉಲ್ಲೇಖಿಸಿ ಅವರು ತಮ್ಮ ನಿರೀಕ್ಷಣಾ ಜಾಮೀನು ವಿಸ್ತರಿಸಲು ಅರ್ಜಿ ಸಲ್ಲಿಸಿದ್ದರು, ಆದರೆ ನ್ಯಾಯಾಲಯವು ಅವರಿಗೆ ಪರಿಹಾರ ನೀಡಲು ನಿರಾಕರಿಸಿತ್ತು.












Click it and Unblock the Notifications