ದೆಹಲಿಯಲ್ಲಿ ಕನ್ನಡಿಗ ಯುಪಿಎಸ್‌ಸಿ ಅಭ್ಯರ್ಥಿ ಆತ್ಮಹತ್ಯೆ
ನವದೆಹಲಿ, ಜೂನ್ 4: ಪರೀಕ್ಷಾ ಕೇಂದ್ರಕ್ಕೆ ಹೋಗುವುದು ತಡವಾಯಿತು ಎಂದು ಯುಪಿಎಸ್‌ಸಿ ಅಭ್ಯರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವದೆಹಲಿಯಲ್ಲಿ ಸೋಮವಾರ ನಡೆದಿದೆ.
ವರುಣ್ ಚಂದ್ರ(28) ಆತ್ಮಹತ್ಯೆ ಮಾಡಿಕೊಂಡ ಅಭ್ಯರ್ಥಿಯಾಗಿದ್ದಾರೆ. ವರುಣ್ ಮೂಲತಃ ಕಾರವಾರ ಜಿಲ್ಲೆಯ ಕುಮಟಾದವರು, ಭಾನುವಾರ ಯುಪಿಎಸ್‌ಸಿ ಪರೀಕ್ಷೆ ಬರೆಯಬೇಕಿತ್ತು. ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದಿದ್ದ ಕಾರಣ ಅವರನ್ನು ಪರೀಕ್ಷಾ ಕೊಠಡಿಯೊಳಗೆ ತೆರಳಲು ನಿರಾಕರಿಸಿದ್ದಾರೆ ಎನ್ನಲಾಗಿದೆ.

ಪಹಾಡ್ ಗಂಜ್ ಪರೀಕ್ಷಾ ಕೇಂದ್ರದಲ್ಲಿ ಆತ ಪರೀಕ್ಷೆ ಬರೆಯಬೇಕಿತ್ತು. ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರವನ್ನು ತಲುಪಲು ಸಾಧ್ಯವಾಗಿಲ್ಲ. ತಡವಾಗಿದ್ದರಿಂದ ಪರೀಕ್ಷಾ ಕೇಂದ್ರದಲ್ಲಿ ಅವಕಾಶ ನಿರಾಕರಿಸಲಾಗಿತ್ತು ತಕ್ಷಣ ಪರೀಕ್ಷೆಯನ್ನು ತಪ್ಪಿಸಿಕೊಂಡೆ ಎಂದು ನ್ಯೂ ರಾಜೇಂದ್ರ ನಗರ ಕ್ಕೆ ತೆರಳಿ ರೂಮ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.












Click it and Unblock the Notifications