Asani Cyclone: ಚಂಡಮಾರುತ 'ಅಸನಿ' ಇದೀಗ ಎಲ್ಲಿದೆ?

ನವದೆಹಲಿ ಮಾರ್ಚ್ 21: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ 'ಅಸನಿ' ಚಂಡಮಾರುತ ಅಪ್ಪಳಿಸಿದೆ. ಇಂದು ಮಧ್ಯಾಹ್ನದಿಂದ ಅಂಡಮಾನ್‌ನ ಕೆಲವು ಪ್ರದೇಶಗಳಲ್ಲಿ ಮಳೆ ಪ್ರಾರಂಭವಾಗಿದೆ. ಕಳೆದ ಕೆಲವು ದಿನಗಳಿಂದ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡದಿಂದಾಗಿ ಇಂದು 'ಅಸನಿ' ಚಂಡಮಾರುತ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಇದು ಅಪಾಯಕಾರಿ ಚಂಡಮಾರುತವಾಗಿ ಬದಲಾಗಬಹುದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಅಂಡಮಾನ್ ಮತ್ತು ನಿಕೋಬಾರ್ ಜನರು ತೀವ್ರ ತೊಂದರೆಗಳನ್ನು ಎದುರಿಸಬೇಕಾಗಬಹುದು. ಅಂಡಮಾನ್‌ ನಲ್ಲಿ ತೀವ್ರ ಮಳೆಯಾಗುತ್ತಿದ್ದು, ಇಲ್ಲಿ ಎಚ್ಚರಿಕೆ ವಹಿಸಲಾಗಿದೆ. ಸೇನೆಯನ್ನು ಅಲರ್ಟ್‌ನಲ್ಲಿ ಇರಿಸಲಾಗಿದೆ ಮತ್ತು ಪೋರ್ಟ್ ಬ್ಲೇರ್‌ನಲ್ಲಿ ಒಟ್ಟು 68 ಎನ್‌ಡಿಆರ್‌ಎಫ್ ಸಿಬ್ಬಂದಿ ಮತ್ತು ದಿಗ್ಲಿಪುರ್, ರಂಗತ್ ಮತ್ತು ಹತ್ಬೆ ಪ್ರದೇಶಗಳಲ್ಲಿ ತಲಾ 25 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಪ್ರಸ್ತುತ ಚಂಡಮಾರುತ ನಿಕೋಬಾರ್ ದ್ವೀಪಗಳ ಈಶಾನ್ಯಕ್ಕೆ 250 ಕಿಮೀ ದೂರದಲ್ಲಿರುವ ಅಂಡಮಾನ್ ಸಮುದ್ರದ ಮೇಲಿದ್ದು, ಸಂಜೆ ವೇಳೆಗೆ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ. ಪೋರ್ಟ್ ಬ್ಲೇರ್‌ನಲ್ಲಿ ಎನ್‌ಡಿಆರ್‌ಎಫ್ (ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ) ಹಲವಾರು ತಂಡಗಳನ್ನು ನಿಯೋಜಿಸಲಾಗಿದೆ. ಸೇನೆ ಮತ್ತು ನೌಕಾಪಡೆ ಕೂಡ ಸನ್ನದ್ಧ ಸ್ಥಿತಿಯಲ್ಲಿದೆ.

ಅಸನಿ ಚಂಡಮಾರುತ ದ ಆತಂಕ

ಅಸನಿ ಚಂಡಮಾರುತ ದ ಆತಂಕ

ಹಿರಿಯ ಐಎಂಡಿ ವಿಜ್ಞಾನಿಯೊಬ್ಬರು ಈ ಬಗ್ಗೆ ಮಾತನಾಡಿ, 'ನಮ್ಮ ಟ್ವೀಟ್‌ನಲ್ಲಿ ನಾವು ಯಾವುದೇ ಭೂಕುಸಿತದ ಸ್ಥಳದ ಬಗ್ಗೆ ಉಲ್ಲೇಖಿಸಿಲ್ಲ. ಅಸನಿ ಚಂಡಮಾರುತ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಉದ್ದಕ್ಕೂ ಚಲಿಸುತ್ತದೆ ಮತ್ತು ನಂತರ ಪೂರ್ವ-ಮಧ್ಯ ಬಂಗಾಳ ಕೊಲ್ಲಿ ಮತ್ತು ಮ್ಯಾನ್ಮಾರ್ ಕರಾವಳಿಯ ಕಡೆಗೆ ಚಲಿಸುತ್ತದೆ. ಈ ಸಮಯದಲ್ಲಿ, ಗಾಳಿಯು ಗಂಟೆಗೆ 55-65 ಕಿ.ಮೀ ವೇಗದಲ್ಲಿ ಬೀಸುತ್ತದೆ ಮತ್ತು ಗಂಟೆಗೆ 75 ಕಿ.ಮೀ. ಹೆಚ್ಚಾಗಿ ಬೀಸುವ ಸಾಧ್ಯತೆ ಇದೆ.

ಮೀನುಗಾರರಿಗೆ ಖಡಕ್ ಸೂಚನೆ

ಮೀನುಗಾರರಿಗೆ ಖಡಕ್ ಸೂಚನೆ

ಸೋಮವಾರ ಮತ್ತು ಮಂಗಳವಾರ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಚಂಡಮಾರುತದ ಸಮಯದಲ್ಲಿ ವಿದ್ಯುತ್ ಕಡಿತವಾಗಬಹುದು ಮತ್ತು ಮಳೆಯಿಂದಾಗಿ ಪ್ರವಾಹ ಅಥವಾ ಭೂಕುಸಿತದಂತಹ ಘಟನೆಗಳು ಸಂಭವಿಸುವ ಸಾಧ್ಯತೆಯಿದೆ. ಹೀಗಾಗಿ ಸಂತ್ರಸ್ತ ಪ್ರದೇಶಗಳಿಗೆ ಪ್ರವಾಸಿಗರು ಬರುವುದನ್ನು ನಿಲ್ಲಿಸಲಾಗಿದೆ. ಜೊತೆಗೆ ಮೀನುಗಾರರಿಗೆ ಸಮುದ್ರದಲ್ಲಿ ಇಳಿಯದಂತೆ ಸೂಚಿಸಲಾಗಿದೆ. ಮಾರ್ಚ್ 18 ರಿಂದ 22 ರ ಅವಧಿಯಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಉದ್ದಕ್ಕೂ ಮತ್ತು ಹೊರಗೆ ಹೋಗದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಮಾರ್ಚ್ 21 ಮತ್ತು 22 ರಂದು ಪೂರ್ವ-ಮಧ್ಯ ಬಂಗಾಳ ಕೊಲ್ಲಿಗೆ ಮತ್ತು ಮಾರ್ಚ್ 22 ರಂದು ಈಶಾನ್ಯ ಬಂಗಾಳ ಕೊಲ್ಲಿಗೆ ಅಸನಿ ಚಂಡಮಾರುತದ ಎಚ್ಚರಿಕೆ ನೀಡಲಾಗಿದೆ.

ಹೆಲಿಕಾಪ್ಟರ್‌ಗಳ ವ್ಯವಸ್ಥೆ

ಹೆಲಿಕಾಪ್ಟರ್‌ಗಳ ವ್ಯವಸ್ಥೆ

ಚಂಡಮಾರುತವನ್ನು ಎದುರಿಸಲು ಸರ್ಕಾರ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಹಡಗುಗಳು, ವಿಮಾನಗಳು, ಹೆಲಿಕಾಪ್ಟರ್‌ಗಳು, ವಿಪತ್ತು ನಿರ್ವಹಣಾ ತಂಡವನ್ನು ಅಲರ್ಟ್ ಮಾಡಲಾಗಿದೆ. ಮಾರ್ಚ್ 22 ರವರೆಗೆ ಎಲ್ಲಾ ದ್ವೀಪ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ಅಂಡಮಾನ್ ಮತ್ತು ನಿಕೋಬಾರ್ ಆಡಳಿತದೊಂದಿಗೆ ನಿರಂತರ ನಿಗಾ ಇರಿಸುವಂತೆ ಮತ್ತು ಕೇಂದ್ರೀಯ ಸಚಿವಾಲಯಗಳು ಮತ್ತು ಏಜೆನ್ಸಿಗಳಿಗೆ ಕೇಂದ್ರ ಗೃಹ ಕಾರ್ಯದರ್ಶಿ ನಿರ್ದೇಶಿಸಿದ್ದಾರೆ.

ಕೇಂದ್ರದಿಂದ ನೆರವು

ಕೇಂದ್ರದಿಂದ ನೆರವು

ಇದಲ್ಲದೆ ಮೀನುಗಾರಿಕೆ ಪ್ರವಾಸೋದ್ಯಮ ಮತ್ತು ಹಡಗು ಚಟುವಟಿಕೆಗಳನ್ನು ನಿಲ್ಲಿಸಲಾಗಿದೆ. ಮೀನುಗಾರರು ಸಮುದ್ರದಿಂದ ಮರಳುವಂತೆ ಸೂಚಿಸಲಾಗಿದೆ. ಭಾರತೀಯ ಸೇನೆ, ನೌಕಾಪಡೆ, ವಾಯುಪಡೆ ಮತ್ತು ಭಾರತೀಯ ಕೋಸ್ಟ್ ಗಾರ್ಡ್ ಸ್ಟ್ಯಾಂಡ್ ಬೈ ನಿಯೋಜಿಸಲಾಗಿದೆ. ಅಗತ್ಯವಿದ್ದರೆ ನೆರವು ನೀಡಲು ಕೇಂದ್ರ ಸಚಿವಾಲಯ ಸಿದ್ಧವಾಗಿದೆ ಎಂದು ಗೃಹ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+