ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Assembly Election Result 2022: ಪಂಚ ರಾಜ್ಯಗಳ ಸಿಎಂಗಳು ಮುನ್ನಡೆಯೇ, ಹಿನ್ನಡೆಯೇ?

|
Google Oneindia Kannada News

ನವದೆಹಲಿ, ಮಾರ್ಚ್ 10: ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ, ಪಂಜಾಬ್ ಮತ್ತು ಗೋವಾ ಎಲ್ಲಾ ಐದು ರಾಜ್ಯಗಳಿಗೆ 2022 ರ ವಿಧಾನಸಭಾ ಚುನಾವಣೆಯ ಎಣಿಕೆ ನಡೆಯುತ್ತಿದೆ. ಈ ಮತ ಎಣಿಕೆ ಸಂದರ್ಭದಲ್ಲಿ ಪ್ರಮುಖ ಅಭ್ಯರ್ಥಿಗಳೇ ಹಿನ್ನಡೆಯನ್ನು ಸಾಧಿಸಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮುನ್ನಡೆಯನ್ನು ಸಾಧಿಸಿದ್ದಾರೆ. ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜೀತ್‌ ಸಿಂಗ್‌ ಚನ್ನಿ ಹಿನ್ನಡೆಯನ್ನು ಸಾಧಿಸಿದ್ದಾರೆ. ಇನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಕೂಡಾ ಹಿನ್ನಡೆಯನ್ನು ಹೊಂದಿದ್ದಾರೆ.

ಅಧಿಕಾರ ಹೇಗೆ ಕಳೆದುಕೊಳ್ಳಬಹುದು: ಕಾಂಗ್ರೆಸ್ ನಲ್ಲಿದೆ ಉತ್ತರ!ಅಧಿಕಾರ ಹೇಗೆ ಕಳೆದುಕೊಳ್ಳಬಹುದು: ಕಾಂಗ್ರೆಸ್ ನಲ್ಲಿದೆ ಉತ್ತರ!

ಈ ನಡುವೆ ಮಣಿಪುರ ಮುಖ್ಯಮಂತ್ರಿ ಬಿರೇನ್‌ ಸಿಂಗ್‌ ಮುನ್ನಡೆಯನ್ನು ಸಾಧಿಸಿದ್ದಾರೆ. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಹಿನ್ನೆಡೆಯನ್ನು ಸಾಧಿಸಿದ್ದಾರೆ.

sembly Election Result 2022: Heres A update about states CMs Result

ಸದ್ಯ ಬೆಳಗ್ಗೆ 10:50ರ ಸುಮಾರಿಗೆ ಬಿಜೆಪಿ ಉತ್ತರ ಪ್ರದೇಶದಲ್ಲಿ 252 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್‌ 120 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಉತ್ತರಾಖಂಡದಲ್ಲಿ 44 ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್‌ 21 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ.

ಪಂಜಾಬ್‌ನಲ್ಲಿ 89 ಕ್ಷೇತ್ರಗಳಲ್ಲಿ ಎಎಪಿ ಮುನ್ನಡೆಯಲ್ಲಿದ್ದು, 13 ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್‌ ಮುನ್ನಡೆಯಲ್ಲಿದೆ. ಗೋವಾದಲ್ಲಿ 19 ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಇದ್ದು, ಕಾಂಗ್ರೆಸ್‌ 12ರಲ್ಲಿ ಮುನ್ನಡೆ ಸಾಧಿಸಿದೆ. ಮಣಿಪುರದಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಇದ್ದು, 9 ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆಯಾಗಿದೆ.

ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಉತ್ತರ ಪ್ರದೇಶದ ಏಳು ಹಂತಗಳಲ್ಲಿ ಮತದಾನ ನಡೆಸಲಾಗಿದೆ. ಫೆಬ್ರವರಿ 10, 14, 20, 23 ಮತ್ತು ಮಾರ್ಚ್ 3 ಮತ್ತು 7 ರಂದು ಮತದಾನ ನಡೆಸಲಾಗಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆದಿದೆ. ಪಂಜಾಬ್‌ನ 117 ವಿಧಾನಸಭೆ ಕ್ಷೇತ್ರಗಳಿಗೆ ಫೆಬ್ರವರಿ 20 ರಂದು ಮತದಾನ ನಡೆದಿದೆ. (ಒನ್‌ಇಂಡಿಯಾ ಸುದ್ದಿ)

ಚುನಾವಣಾ ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ? ಎಲ್ಲಿ?

Recommended Video

ಪಂಚರಾಜ್ಯ ಚುನಾವಣೆಯ ಸಂಪೂರ್ಣ ಮಾಹಿತಿ | Oneindia Kannada

ಒನ್ ಇಂಡಿಯಾ ಕನ್ನಡದ ಲೈವ್ ಲಿಂಕ್ ಮೂಲಕ ನೀವು ಪಂಚ ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶವನ್ನು ನೀವು ನೋಡಬಹುದು. ಇದನ್ನು ಹೊರತುಪಡಿಸಿ ಚುನಾವಣಾ ಫಲಿತಾಂಶಗಳನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ವೆಬ್‌ಸೈಟ್ ಅಂದರೆ eciresults.nic.in ನಲ್ಲಿ ಪರಿಶೀಲಿಸಬಹುದು.

English summary
Assembly Election Result 2022: Here's A update about states CM's Result.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X