Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ. ಆಶಾ ಭೋಸ್ಲೆ (92) ಅವರು ಭಾನುವಾರ ಮೃತಪಟ್ಟಿದ್ದಾರೆ. ಸಂಗೀತ ಲೋಕದ ರಾಣಿ ಎಂದೇ ಖ್ಯಾತಿ ಗಳಿಸಿದ್ದ ಪ್ರಸಿದ್ಧ ಗಾಯಕಿ ಆಶಾ ಭೋಸ್ಲೆ ಈಗ ನಮ್ಮೊಂದಿಗಿಲ್ಲ. ಮಹಾರಾಷ್ಟ್ರದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅವರು ನಿಧನರಾದರು.
ಆಶಾ ಭೋಸ್ಲೆ 92ನೇ ವಯಸ್ಸಿನಲ್ಲಿ ನಿಧನರಾದರು. ವರದಿಗಳ ಪ್ರಕಾರ, ಪ್ರಸಿದ್ಧ ಗಾಯಕಿ ಹೃದಯಾಘಾತದಿಂದ ನಿಧನರಾಗಿದ್ದರೆ, ಅವರ ಅಂತ್ಯಕ್ರಿಯೆ ಸೋಮವಾರ ನಡೆಯಲಿದೆ. ಆಶಾ ಭೋಸ್ಲೆ ಐಸಿಯುನಲ್ಲಿದ್ದರು, ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಆಧುನಿಕ ಭಾರತೀಯ ಸಂಗೀತದ ಶ್ರೇಷ್ಠ ಗಾಯಕಿಯರಲ್ಲಿ ಒಬ್ಬರೆಂದೇ ಖ್ಯಾತಿ ಗಳಿಸಿದ್ದ ಪ್ರಸಿದ್ಧ ಗಾಯಕಿ ಆಶಾ ಭೋಸ್ಲೆ ಅವರು 92 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಹೃದಯ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಶನಿವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಕೆಲವು ತಿಂಗಳುಗಳಿಂದ ಆಶಾ ಅವರ ಆರೋಗ್ಯ ಹದಗೆಟ್ಟಿತ್ತು ಮತ್ತು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತರಲಾಗಿತ್ತು ಎಂದು ಹೇಳಲಾಗಿದೆ. ಅವರನ್ನು ಶನಿವಾರ ರಾತ್ರಿ ಐಸಿಯುಗೆ ದಾಖಲಿಸಿಕೊಳ್ಳಲಾಗಿತ್ತು. ಭಾನುವಾರ ಅವರು ಮೃತಪಟ್ಟಿರುವ ಸುದ್ದಿ ಬಂದಿದೆ. ಭೋಸ್ಲೆ ಅವರ ಮಗ ಆನಂದ್ ಅವರು ಭಾನುವಾರ ಮಧ್ಯಾಹ್ನ ಆಶಾ ಅವರ ನಿಧನ ಸುದ್ದಿಯನ್ನು ದೃಢಪಡಿಸಿದ್ದಾರೆ. ನಾಳೆ ಅಂತ್ಯಕ್ರಿಯೆ ನಡೆಯಲಿದೆ.
Asha Bhosle: ಆಶಾ ಭೋಸ್ಲೆ ವೃತ್ತಿಜೀವನ
ಭಾರತೀಯ ಚಿತ್ರರಂಗದ ಅತ್ಯಂತ ಯಶಸ್ವಿ, ಜನಪ್ರಿಯ ಗಾಯಕಿಯರಲ್ಲಿ ಒಬ್ಬರಾಗಿ ಆಶಾ ಭೋಸ್ಲೆ ಅವರು ಗುರುತಿಸಿಕೊಂಡಿದ್ದಾರೆ. ಹಿಂದಿ ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿ ಇವರದ್ದು ಮೇರು ಸಾಧನೆಯಾಗಿದೆ. ಆಶಾ ಅವರ ಅಕ್ಕ ದಿವಂಗತ ಲತಾ ಮಂಗೇಶ್ಕರ್ ಸಹ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದರು. ಇವರಿಬ್ಬರ ನಡುವೆ ಉತ್ತಮ ಹಾಗೂ ಧನಾತ್ಮಕ ಪೈಪೋಟಿ ಇತ್ತು.
1933 ರಲ್ಲಿ ಸಂಗೀತ ಮಂಗೇಶ್ಕರ್ ಕುಟುಂಬದಲ್ಲಿ ಜನಿಸಿದ ಆಶಾ ತಮ್ಮ 9 ನೇ ವಯಸ್ಸಿನಲ್ಲಿ ವೃತ್ತಿಪರವಾಗಿ ಹಾಡಲು ಪ್ರಾರಂಭಿಸಿದರು. ಅವರು 1943 ರಲ್ಲಿ ತಮ್ಮ ಮೊದಲ ಚಲನಚಿತ್ರ ಹಾಡನ್ನು ರೆಕಾರ್ಡ್ ಮಾಡಿದ. 50ರ ದಶಕದ ಹೊತ್ತಿಗೆ ಬಾಲಿವುಡ್‌ನಲ್ಲಿ ತಮ್ಮದೇ ಆದ ಸ್ಥಾನವನ್ನು ಗಳಿಸಿದ್ದರು. ಮುಂದಿನ ಮೂರು ದಶಕಗಳಲ್ಲಿ, ಅವರು ಹೆಚ್ಚಿನ ಸಂಗೀತ ಸಂಯೋಜಕರೊಂದಿಗೆ ಕೆಲಸ ಮಾಡಿದರು ಹೆಚ್ಚು ಬೇಡಿಕೆ ಗಳಿಸಿದ್ದ ಗಾಯಕಿ ಎನ್ನುವ ಖ್ಯಾತಿ ಆಶಾ ಅವರದ್ದು.
ಪ್ರಾರಂಭದ ದಿನಗಳಲ್ಲಿ ಅವರು ಕ್ಯಾಬರೆ ಅಥವಾ ಇಂದು ಐಟಂ ಹಾಡುಗಳು ಎಂದು ಕರೆಯಲ್ಪಡುವ ನೃತ್ಯಗಳಿಗೆ ಸಂಬಂಧಿಸಿದ ಹಾಡುಗಳನ್ನು ಹಾಡುತ್ತಿದ್ದರು. ಮುಂದೆ ಆಶಾ ಅವರಿಗೆ ಹಲವು ವೈವಿಧ್ಯಮ ಅವಕಾಶಗಳು ಬಂದವು. ಉಮ್ರಾವ್ ಜಾನ್‌ನಲ್ಲಿ ಗಜಲ್‌ಗಳನ್ನು ಸಹ ಅದ್ಭುತವಾಗಿ ಹಾಡಿದರು. ಏಳು ಬಾರಿ ಫಿಲ್ಮ್‌ಫೇರ್ ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿ ಪ್ರಶಸ್ತಿಯನ್ನು ಗೆದ್ದರು ಮತ್ತು ಉಮ್ರಾವ್ ಜಾನ್‌ನ ದಿಲ್ ಚೀಜ್ ಕ್ಯಾ ಹೈ ಮತ್ತು ಇಜಾಜತ್‌ನ ಮೇರಾ ಕುಚ್ ಸಾಮಾನ್‌ಗಾಗಿ ಎರಡು ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದರು.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications