ಪ್ರಾಣ ತ್ಯಾಗ ಮಾಡಿದ ವೀರ ಯೋಧರಿಗೆ ಅಶೋಕ ಚಕ್ರ

ನವದೆಹಲಿ, ಜ. 26 : ಉಗ್ರರೊಂದಿಗೆ ಹೋರಾಡಿ ವೀರಮರಣವನ್ನಪ್ಪಿದ ಇಬ್ಬರು ಹುತಾತ್ಮ ಯೋಧರ ಕುಟುಂಬದವರಿಗೆ ಅಶೋಕ ಚಕ್ರ ಶೌರ್ಯ ಪ್ರಶಸ್ತಿಯನ್ನು ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರು ಪ್ರದಾನ ಮಾಡಿದರು.

ಮೇಜರ್‌ ಮುಕುಂದ್‌ ವರದರಾಜನ್‌ ಹಾಗೂ ನಾಯ್ಕ ನೀರಜ್‌ ಕುಮಾರ್‌ ಸಿಂಗ್‌ ಅವರಿಗೆ ಮರಣೋತ್ತರವಾಗಿ ಶೌರ್ಯ ಪ್ರಶಸ್ತಿ ಭಾಜನಮಾಡಲಾಯಿತು. ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮ, ಉಪರಾಷ್ಟ್ರಪತಿ ಹಮೀದ್‌ ಅನ್ಸಾರಿ ಹಾಗೂ ಸೇನೆಯ ಮೂರು ವಿಭಾಗದ ಮುಖ್ಯಸ್ಥರ ಸಮ್ಮುಖದಲ್ಲಿ ವೀರ ಸೈನಿಕರ ಪತ್ನಿಯರಿಗೆ ಪದಕ ಪ್ರದಾನ ಮಾಡಿದರು.[ಗಣರಾಜ್ಯೋತ್ಸವ ಪರೇಡ್ ನಲ್ಲಿ ಮಹಿಳಾ ಶಕ್ತಿ ಅನಾವರಣ]

india

ಕರ್ತವ್ಯನಿರ್ವಹಣೆಯ ಸಮಯದಲ್ಲಿ ಅಪ್ರತಿಮ ಶೌರ್ಯವನ್ನು ಪ್ರದರ್ಶಿಸಿ ಇಂಥ ಸಮಯದಲ್ಲಿ ಪ್ರಾಣ ಬಲಿದಾನ ಮಾಡುವ ಯೋಧರಿಗೆ ಪ್ರತಿಷ್ಠಿದ ಅಶೋಕ ಚಕ್ರ ಶೌರ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಕಠಿಣ ಪರಿಸ್ಥಿತಿಯಲ್ಲಿ ಸಿಯಾಚಿನ್ ಮೇಲೆ ಹೆಲಿಕ್ಯಾಪ್ಟರ್ ಸಂಚರಿಸಿ ಧೈರ್ಯ ಮರೆದ ಕಮಾಂಡರ್ ಹುವೈ ಉಪಾಧ್ಯಾಯ ಅವರಿಗೆ ಇದೇ ಸಂದರ್ಭದಲ್ಲಿ ಶೌರ್ಯ ಚಕ್ರ ಪ್ರದಾನ ಮಾಡಲಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+